ಕರ್ನಾಟಕ ಸರ್ಕಾರಿ ನೌಕರರಿಗೆ ಬಹು ನಿರೀಕ್ಷಿತ ಹಾಗೂ ಸಂತಸದ ಸುದ್ದಿಯೊಂದು ತಿಳಿದುಬಂದಿದೆ. ಹಳೆಯ ಪಿಂಚಣಿ ಯೋಜನೆ (Old Pension Scheme – OPS) ಮರುಜಾರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮಹತ್ವದ ಘೋಷಣೆ ಬಂದಿದೆ. 2026–27 ರೊಳಗೆ ಕೇಂದ್ರ ಸರ್ಕಾರದ ಮಾದರಿಯ ವೇತನ ವ್ಯವಸ್ಥೆಯನ್ನು ರಾಜ್ಯದಲ್ಲಿಯೂ ಜಾರಿಗೆ ತರಲು ಸಂಘ ಬದ್ಧವಾಗಿದೆ. ಜೊತೆಗೆ ನೌಕರರ ಹಿತಕ್ಕಾಗಿ ಹಲವು ಹೊಸ ಯೋಜನೆಗಳನ್ನೂ ಸರ್ಕಾರದ ಮುಂದಿಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹಳೆ ಪಿಂಚಣಿ (OPS) ಜಾರಿಗೆ ಸಂಘದ ಬದ್ಧತೆ:
ಕಾರವಾರದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಾತನಾಡಿ, ರಾಜ್ಯ ಸರ್ಕಾರಿ ನೌಕರರಿಗೆ ನೆಮ್ಮದಿ ನೀಡುವುದು ಸಂಘದ ಕರ್ತವ್ಯ. ಎನ್‌ಪಿಎಸ್ (NPS) ಬದಲಿಗೆ ಹಳೆ ಪಿಂಚಣಿ ಯೋಜನೆ (OPS) ಜಾರಿಗೆ ತರಲು ಸಂಘವು ನಿರಂತರ ಪ್ರಯತ್ನಿಸುತ್ತಿದೆ. ಈ ವಿಷಯದಲ್ಲಿ ಸರ್ಕಾರದೊಂದಿಗೆ ಸತತ ಮಾತುಕತೆ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.
2026–27 ರೊಳಗೆ ಕೇಂದ್ರ ವೇತನ ಮಾದರಿ ಜಾರಿ:
ರಾಜ್ಯ ಸರ್ಕಾರಿ ನೌಕರರ ವೇತನ ರಚನೆ ಕೇಂದ್ರ ಸರ್ಕಾರದ ಮಾದರಿಯಂತೆ ಬದಲಿಸಲು ಸಂಘ ಬದ್ಧವಾಗಿದೆ. ಈ ಬದಲಾವಣೆ ಜಾರಿಗೆ ಬಂದರೆ ನೌಕರರಿಗೆ ಆರ್ಥಿಕ ದೃಷ್ಟಿಯಿಂದ ಮಹತ್ತರ ಅನುಕೂಲವಾಗಲಿದೆ ಎಂದು ಷಡಾಕ್ಷರಿ ಅವರು ತಿಳಿಸಿದ್ದಾರೆ.
ಹಬ್ಬದ ಮುಂಗಡದಲ್ಲಿ ಭಾರಿ ಏರಿಕೆ:
ಪ್ರಸ್ತುತ ಹಬ್ಬದ ಮುಂಗಡವನ್ನು ₹25,000ರಿಂದ ₹50,000ಕ್ಕೆ ಹೆಚ್ಚಿಸಲು ಸರ್ಕಾರದ ಗಮನ ಸೆಳೆಯಲಾಗಿದೆ. ನೌಕರರ ಹಬ್ಬದ ಖರ್ಚು ತೀರಿಸಲು ಸಹಾಯವಾಗುವ ಉದ್ದೇಶದಿಂದ ಮುಂಗಡದ ಮೊತ್ತವನ್ನು ದ್ವಿಗುಣಗೊಳಿಸುವ ಪ್ರಸ್ತಾವನೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಮಿಲಿಟರಿ ಕ್ಯಾಂಟೀನ್ ಮಾದರಿಯ ರಿಯಾಯಿತಿ ಸೌಲಭ್ಯ:
ನೌಕರರಿಗೆ ಗೃಹೋಪಯೋಗಿ ವಸ್ತುಗಳು ಹಾಗೂ ದಿನನಿತ್ಯದ ಅವಶ್ಯಕತೆಗಳ ಖರೀದಿಯಲ್ಲಿ 20–25% ರಿಯಾಯಿತಿ ನೀಡುವ ಉದ್ದೇಶದಿಂದ ಎಂಎಸ್‌ಐಎಲ್ ಮುಖಾಂತರ ಕ್ಯಾಂಟೀನ್ ಯೋಜನೆ ರೂಪಿಸಲಾಗುತ್ತಿದೆ. ಪ್ರಾರಂಭದಲ್ಲಿ ಈ ಯೋಜನೆ ಬೆಂಗಳೂರು ನಗರದಲ್ಲಿ ಆರಂಭಗೊಂಡು ಬಳಿಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಿಸ್ತರಿಸಲಾಗುವುದು.
ಸರ್ಕಾರಿ ನೌಕರರಿಗೆ 1 ಕೋಟಿ ರೂಪಾಯಿ ವಿಮೆ:
ಕರ್ತವ್ಯದಲ್ಲಿರುವಾಗ ಮರಣ ಹೊಂದಿದ ಸರ್ಕಾರಿ ನೌಕರರ ಕುಟುಂಬಕ್ಕೆ ₹1 ಕೋಟಿ ವಿಮೆ ಮೊತ್ತ ನೀಡುವ ಸಾಲರಿ ಪ್ಯಾಕೇಜ್ ಯೋಜನೆ ಈಗಾಗಲೇ ಜಾರಿಗೆ ಬಂದಿದೆ. ಇದು ನೌಕರರ ಕುಟುಂಬಗಳಿಗೆ ಭದ್ರತೆಯನ್ನು ನೀಡುವ ಮಹತ್ವದ ಹೆಜ್ಜೆ ಎಂದು ತಿಳಿದ್ದಾರೆ.
ಆರೋಗ್ಯ ಸಂಜೀವಿನಿ ಯೋಜನೆ:
ಅಕ್ಟೋಬರ್ 1ರಿಂದ ಆರಂಭಗೊಂಡ ಆರೋಗ್ಯ ಸಂಜೀವಿನಿ ಯೋಜನೆಯಡಿ ಮೊದಲ ಹಂತದಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ಸೌಲಭ್ಯ ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ಹೊರರೋಗಿ ಚಿಕಿತ್ಸೆಯನ್ನೂ ಒಳಗೊಂಡಂತೆ ಈ ಯೋಜನೆ ವಿಸ್ತರಿಸಲಾಗುವುದು. ಮಹಿಳಾ ನೌಕರರಿಗೆ ತಮ್ಮ ತಂದೆ-ತಾಯಿಗಳನ್ನು ಸಹ ಯೋಜನೆಗೆ ಸೇರಿಸಲು ಅವಕಾಶ ನೀಡಲಾಗಿದೆ.
ಮಹಿಳಾ ನೌಕರರಿಗೆ ಹೊಸ ಸೌಲಭ್ಯ, ಮಾಸಿಕ ವಿಶ್ರಾಂತಿ ರಜೆ:
ಮಹಿಳಾ ನೌಕರರ ಹಿತಾಸಕ್ತಿಗಾಗಿ ಸಂಘ ಮಾಡಿದ ಮಹತ್ವದ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸಿದೆ. ಋತುಚಕ್ರದ ಸಮಯದಲ್ಲಿ ಪ್ರತಿ ತಿಂಗಳು 1 ರಜೆ, ಅಂದರೆ ವರ್ಷಕ್ಕೆ 12 ವಿಶೇಷ ಸಾಂದರ್ಭಿಕ ರಜೆಗಳು ನೀಡುವ ಪ್ರಸ್ತಾವನೆಗೆ ಸಚಿವ ಸಂಪುಟದಿಂದ ಅನುಮೋದನೆ ದೊರೆತಿದೆ. ಈ ಹೊಸ ನಿಯಮದಿಂದ ರಾಜ್ಯದ 2.25 ಲಕ್ಷ ಮಹಿಳಾ ನೌಕರರಿಗೆ ನೇರ ಪ್ರಯೋಜನ ಸಿಗಲಿದೆ.
ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ತೊಂದರೆ:
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ 60ಕ್ಕೂ ಹೆಚ್ಚು ಪ್ರಶ್ನೆಗಳು ಅನಾವಶ್ಯಕವಾಗಿವೆ ಎಂದು ಷಡಾಕ್ಷರಿ ಅವರು ತಿಳಿಸಿದ್ದಾರೆ. ಈ ಕಾರಣದಿಂದ ನೌಕರರು ಸಮೀಕ್ಷೆ ವೇಳೆ ಅನೇಕ ತೊಂದರೆಗಳನ್ನು ಅನುಭವಿಸಿದ್ದಾರೆ ಎಂದು ತಿಳಿಸಿದರು.
ಒಟ್ಟಾರೆಯಾಗಿ, ಹಳೆ ಪಿಂಚಣಿ ಯೋಜನೆ (OPS), ವೇತನ ಪರಿಷ್ಕರಣೆ, ಹಬ್ಬದ ಮುಂಗಡ, ಆರೋಗ್ಯ ಹಾಗೂ ಮಹಿಳಾ ನೌಕರರ ಸೌಲಭ್ಯ ಇವುಗಳೆಲ್ಲಾ ರಾಜ್ಯ ಸರ್ಕಾರಿ ನೌಕರರ ಜೀವನಮಟ್ಟ ಸುಧಾರಣೆಗೆ ದೊಡ್ಡ ಹೆಜ್ಜೆಯಾಗಿವೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ಈ ಘೋಷಣೆ ನೌಕರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ಈ ಮುಖಾಂತರ ಮುಂದಿನ ವರ್ಷಗಳಲ್ಲಿ ಸರ್ಕಾರದಿಂದ ಈ ಯೋಜನೆಗಳು ಜಾರಿಗೆ ಬರಲಿವೆ ಎಂಬ ವಿಶ್ವಾಸವನ್ನು ಸಂಘ ವ್ಯಕ್ತಪಡಿಸಿದೆ.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

Sagari leads the ‘Government Schemes’ vertical at NeedsOfPublic.in, where she decodes the latest Central and State government policies for the common citizen. She has over 3 years of experience tracking welfare programs like PM Kisan, Ayushman Bharat, and State Ration updates. Her goal is to ensure every reader understands their eligibility and benefits without confusion. Sagari strictly verifies all updates from official government portals before publishing. Outside of work, she is an advocate for digital literacy in rural India.”
Connect with Sagari:


WhatsApp Group




