WhatsApp Image 2025 10 24 at 2.44.52 PM

‘ರಾಜ್ಯ ಸರ್ಕಾರಿ’ ನೌಕರರಿಗೆ ಬಂಪರ್‌ ಗಿಫ್ಟ್ : ತುಟ್ಟಿಭತ್ಯೆ ಶೇ. 58 ಕ್ಕೆ ಹೆಚ್ಚಿಸಿ ಸರ್ಕಾರದಿಂದ‌ ಮಹತ್ವದ ಆದೇಶ.!

WhatsApp Group Telegram Group

ಕರ್ನಾಟಕ ರಾಜ್ಯ ಸರ್ಕಾರವು 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿ ಕಾರ್ಯನಿರ್ವಹಿಸುವ ಬೋಧಕ ಮತ್ತು ತತ್ಸಮಾನ ವೃಂದದ ಸಿಬ್ಬಂದಿಗಳಿಗೆ ತುಟ್ಟಿಭತ್ಯೆ (ಡಿಎ) ದರವನ್ನು ಶೇಕಡ 55 ರಿಂದ ಶೇಕಡ 58 ಕ್ಕೆ ಏರಿಕೆ ಮಾಡಿ ಮಹತ್ವದ ಆದೇಶವನ್ನು ಜಾರಿಗೊಳಿಸಿದೆ. ಈ ಆದೇಶವು 2025ರ ಜುಲೈ 1 ರಿಂದ ಜಾರಿಗೆ ಬರಲಿದ್ದು, ಸರ್ಕಾರಿ ನೌಕರರಿಗೆ ಆರ್ಥಿಕ ನೆರವು ಒದಗಿಸುವ ಗುರಿಯನ್ನು ಹೊಂದಿದೆ. ಈ ಲೇಖನದಲ್ಲಿ ಈ ಆದೇಶದ ವಿವರಗಳನ್ನು, ಅದರ ವ್ಯಾಪ್ತಿಯನ್ನು, ಅನ್ವಯವಾಗುವ ಸಿಬ್ಬಂದಿಯನ್ನು, ಮತ್ತು ಇತರ ಸಂಬಂಧಿತ ಮಾಹಿತಿಯನ್ನು ಸವಿವರವಾಗಿ ಚರ್ಚಿಸಲಾಗಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ..

2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿನ ಬೋಧಕ ಮತ್ತು ತತ್ಸಮಾನ ವೃಂದದ ಸಿಬ್ಬಂದಿಗಳ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 55 ರಿಂದ ಶೇಕಡ 58ಕ್ಕೆ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲು ಸರ್ಕಾರವು ಹರ್ಷಿಸುತ್ತದೆ.
2. ಈ ಆದೇಶದ ಉದ್ದೇಶಗಳಿಗಾಗಿ ‘ಮೂಲ ವೇತನ’ ಎಂದರೆ ಸರ್ಕಾರಿ ನೌಕರನು ಧಾರಣೆ ಮಾಡಿರುವ ಹುದ್ದೆಗೆ ಅನ್ವಯವಾಗುವ 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿ ಪಡೆಯುತ್ತಿರುವ ಮೂಲ ವೇತನ.

3. ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶ್ವವಿದ್ಯಾಲಯಗಳು, ಸರ್ಕಾರಿ/ಅನುದಾನಿತ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಪೂರ್ಣಕಾಲಿಕ ನೌಕರರಿಗೆ ಈ ಆದೇಶಗಳು ಅನ್ವಯಿಸುತ್ತವೆ.

4. ವೇತನ ಎಂದು ಪರಿಗಣಿಸಲ್ಪಡದ ಯಾವುದೇ ಉಪಲಬ್ಧಗಳನ್ನು ಮೂಲ ವೇತನಕ್ಕೆ ಸೇರಿಸತಕ್ಕದ್ದಲ್ಲ.

5. ಈ ಆದೇಶದ ಮೇರೆಗೆ ಮಂಜೂರಾಗಿರುವ ತುಟ್ಟಿಭತ್ಯೆಯನ್ನು ಮುಂದಿನ ಆದೇಶದವರೆಗೆ ನಗದಾಗಿ ಪಾವತಿ ಮಾಡುವುದು.

6. ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳ ನಿವೃತ್ತ ನೌಕರರಿಗೆ ಈ ಆದೇಶಗಳು ಅನ್ವಯಿಸುವುದಿಲ್ಲ.

7. ತುಟ್ಟಿಭತ್ಯೆಯ ಬಾಕಿ ಮೊತ್ತವನ್ನು 2025ರ ಅಕ್ಟೋಬರ್ ಮಾಹೆಯ ವೇತನ ಬಟವಾಡೆಗೂ ಮೊದಲು ಪಾವತಿ ಮಾಡತಕ್ಕದ್ದಲ್ಲ.

8. ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈಸೆಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು.

9. ತುಟ್ಟಿಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸಲಾಗುವುದಿಲ್ಲ.

WhatsApp Image 2025 10 24 at 2.26.56 PM
WhatsApp Image 2025 10 24 at 2.26.56 PM 1
WhatsApp Image 2025 10 24 at 2.26.56 PM 2
WhatsApp Image 2025 09 05 at 11.51.16 AM 12

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories