bel recruitment

BEL Recruitment 2025: 340 ಇಂಜಿನಿಯರ್ ಹುದ್ದೆಗಳು! ಮಾಸಿಕ ಸಂಬಳ 50,000+ ರೂ! ಅರ್ಜಿ ಸಲ್ಲಿಸಿ!

Categories:
WhatsApp Group Telegram Group

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (Bharat Electronics Limited – BEL) ನಿವೃತ್ತಿಗೊಂಡಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ 340 ಪ್ರೊಬೇಷನರಿ ಇಂಜಿನಿಯರ್ (Probationary Engineer) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಮಟ್ಟದಲ್ಲಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವವರು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 14, 2025 ರೊಳಗೆ ಅರ್ಜಿ ಸಲ್ಲಿಸಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

BEL ಖಾಲಿ ಹುದ್ದೆಗಳ ವಿವರ

  • ಸಂಸ್ಥೆಯ ಹೆಸರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
  • ಉದ್ಯೋಗ ಸ್ಥಳ: ಅಖಿಲ ಭಾರತ (All India)
  • ಹುದ್ದೆಯ ಹೆಸರು: ಪ್ರೊಬೇಷನರಿ ಇಂಜಿನಿಯರ್
  • ಮಾಸಿಕ ವೇತನ: ₹40,000 ರಿಂದ ₹1,40,000/- ರವರೆಗೆ
ಹುದ್ದೆಯ ಹೆಸರುಖಾಲಿ ಹುದ್ದೆಗಳ ಸಂಖ್ಯೆ
ಪ್ರೊಬೇಷನರಿ ಇಂಜಿನಿಯರ್ (ಎಲೆಕ್ಟ್ರಾನಿಕ್ಸ್)175
ಪ್ರೊಬೇಷನರಿ ಇಂಜಿನಿಯರ್ (ಮೆಕ್ಯಾನಿಕಲ್)109
ಪ್ರೊಬೇಷನರಿ ಇಂಜಿನಿಯರ್ (ಕಂಪ್ಯೂಟರ್ ಸೈನ್ಸ್)42
ಪ್ರೊಬೇಷನರಿ ಇಂಜಿನಿಯರ್ (ಎಲೆಕ್ಟ್ರಿಕಲ್)14
ಒಟ್ಟು ಹುದ್ದೆಗಳು340

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ ವಿವರಗಳು

ಶೈಕ್ಷಣಿಕ ಅರ್ಹತೆ

ಬಿಇಎಲ್‌ನ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಬೋರ್ಡ್‌ಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿ.ಎಸ್ಸಿ (B.Sc), ಬಿ.ಇ (BE) / ಬಿ.ಟೆಕ್ (B.Tech) ಅಥವಾ ಪದವಿ (Graduation) ಪೂರ್ಣಗೊಳಿಸಿರಬೇಕು.

ಹುದ್ದೆಅಗತ್ಯವಿರುವ ಇಂಜಿನಿಯರಿಂಗ್ ವಿಭಾಗ
ಪ್ರೊಬೇಷನರಿ ಇಂಜಿನಿಯರ್ (ಎಲೆಕ್ಟ್ರಾನಿಕ್ಸ್)ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್, ಟೆಲಿಕಮ್ಯುನಿಕೇಷನ್ ಇಂಜಿನಿಯರಿಂಗ್
ಪ್ರೊಬೇಷನರಿ ಇಂಜಿನಿಯರ್ (ಮೆಕ್ಯಾನಿಕಲ್)ಮೆಕ್ಯಾನಿಕಲ್ ಇಂಜಿನಿಯರಿಂಗ್
ಪ್ರೊಬೇಷನರಿ ಇಂಜಿನಿಯರ್ (ಕಂಪ್ಯೂಟರ್ ಸೈನ್ಸ್)ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್
ಪ್ರೊಬೇಷನರಿ ಇಂಜಿನಿಯರ್ (ಎಲೆಕ್ಟ್ರಿಕಲ್)ಎಲೆಕ್ಟ್ರಿಕಲ್, ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್

ವಯೋಮಿತಿ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು ಅಕ್ಟೋಬರ್ 01, 2025ಕ್ಕೆ 25 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

  • ಒಬಿಸಿ (NCL) ಅಭ್ಯರ್ಥಿಗಳು: 3 ವರ್ಷಗಳು
  • ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು: 5 ವರ್ಷಗಳು
  • PwBD ಅಭ್ಯರ್ಥಿಗಳು: 10 ವರ್ಷಗಳು

ಶುಲ್ಕ ಮತ್ತು ಆಯ್ಕೆ ಪ್ರಕ್ರಿಯೆ

ಅರ್ಜಿ ಶುಲ್ಕ:

  • ಸಾಮಾನ್ಯ (General) / ಒಬಿಸಿ (OBC) / ಇಡಬ್ಲ್ಯೂಎಸ್ (EWS) ಅಭ್ಯರ್ಥಿಗಳು: ₹1,180/-
  • ಎಸ್‌ಸಿ (SC) / ಎಸ್‌ಟಿ (ST) / PwBD / ಮಾಜಿ ಸೈನಿಕ (Ex-Servicemen) ಅಭ್ಯರ್ಥಿಗಳು: ಶುಲ್ಕ ವಿನಾಯಿತಿ (Nil)
  • ಶುಲ್ಕ ಪಾವತಿ ವಿಧಾನ: ಆನ್‌ಲೈನ್ ಮೂಲಕ.

ಆಯ್ಕೆ ಪ್ರಕ್ರಿಯೆ:

  • ಕಂಪ್ಯೂಟರ್ ಆಧಾರಿತ ಪರೀಕ್ಷೆ (Computer Based Test)
  • ಸಂದರ್ಶನ (Interview)

ಅರ್ಜಿ ಸಲ್ಲಿಸುವುದು ಹೇಗೆ?

  1. ಮೊದಲಿಗೆ, ಬಿಇಎಲ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಮತ್ತು ನಿಮ್ಮ ಅರ್ಹತಾ ಮಾನದಂಡಗಳು ಪೂರೈಕೆಯಾಗಿವೆಯೇ ಎಂದು ಖಚಿತಪಡಿಸಿಕೊಳ್ಳಿ. (ಅರ್ಜಿ ಸಲ್ಲಿಸುವ ಲಿಂಕ್ ಕೆಳಗೆ ನೀಡಲಾಗಿದೆ).
  2. ಆನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡುವ ಮೊದಲು, ಸಂವಹನಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸಿದ್ಧವಾಗಿ ಇಟ್ಟುಕೊಳ್ಳಿ. ಜೊತೆಗೆ ಐಡಿ ಪ್ರೂಫ್, ವಯಸ್ಸಿನ ದಾಖಲೆ, ಶೈಕ್ಷಣಿಕ ಅರ್ಹತೆಗಳ ದಾಖಲೆ ಮತ್ತು ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಫೋಟೋವನ್ನು ಸ್ಕ್ಯಾನ್ ಮಾಡಿ ಇಟ್ಟುಕೊಳ್ಳಿ.
  3. ಅಧಿಸೂಚನೆಯಲ್ಲಿ ನೀಡಲಾದ BEL ಪ್ರೊಬೇಷನರಿ ಇಂಜಿನಿಯರ್ ಆನ್‌ಲೈನ್ ಅರ್ಜಿ ಲಿಂಕ್ ಅನ್ನು ಕ್ಲಿಕ್ ಮಾಡಿ.
  4. BEL ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲ ವಿವರಗಳನ್ನು ನಮೂದಿಸಿ. ಅಗತ್ಯ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
  5. ನಿಮ್ಮ ವರ್ಗಕ್ಕೆ ಅನುಗುಣವಾಗಿ (ಅನ್ವಯಿಸಿದರೆ ಮಾತ್ರ) ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ.
  6. ಅಂತಿಮವಾಗಿ Submit ಬಟನ್ ಕ್ಲಿಕ್ ಮಾಡುವ ಮೂಲಕ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ತಪ್ಪದೇ ಉಳಿಸಿಕೊಳ್ಳಿ.

ಪ್ರಮುಖ ದಿನಾಂಕಗಳು

ವಿವರದಿನಾಂಕ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ24-10-2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ14-ನವೆಂಬರ್-2025
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ14-11-2025

ಪ್ರಮುಖ ಲಿಂಕ್‌ಗಳು

ವಿವರಲಿಂಕ್
ಅಧಿಕೃತ ಅಧಿಸೂಚನೆ (Official Notification)ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ (Apply Online)ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ (Official Website)bel-india.in
WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories