Picsart 25 10 27 23 07 18 864 scaled

ಕೇಂದ್ರದ ಸೂಚನೆಯಂತೆ ರಾಜ್ಯದಲ್ಲಿ ಬರೋಬ್ಬರಿ 15% ಬಿಪಿಎಲ್ ರೇಷನ್ ಕಾರ್ಡ್ ರದ್ದು – ಸಚಿವ ಮುನಿಯಪ್ಪ 

Categories:
WhatsApp Group Telegram Group

ಬಿಪಿಎಲ್ ಕಾರ್ಡ್‌ ರದ್ದತಿ ಕುರಿತು ಸ್ಪಷ್ಟನೆ ನೀಡಿದ ಸಚಿವ ಕೆ.ಹೆಚ್. ಮುನಿಯಪ್ಪ(Minister K.H. Muniyappa): ಅನರ್ಹರ ಕಾರ್ಡ್‌ಗಳಷ್ಟೇ ರದ್ದು, ಯಾವುದೇ ಫಲಾನುಭವಿಗೆ ಅನ್ಯಾಯವಾಗುವುದಿಲ್ಲ

ರಾಜ್ಯದಲ್ಲಿ ಬಿಪಿಎಲ್ (Below Poverty Line) ಕಾರ್ಡ್‌ ರದ್ದತಿ ಕುರಿತು ಸೃಷ್ಟಿಯಾದ ಗೊಂದಲಕ್ಕೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ(Minister of Food and Civil Supplies) ಕೆ.ಹೆಚ್. ಮುನಿಯಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿಯಂತೆ ಶೇಕಡಾ 15ರಷ್ಟು ಬಿಪಿಎಲ್ ಕಾರ್ಡ್‌ಗಳನ್ನು ಪರಿಶೀಲನೆಗೆ ಒಳಪಡಿಸಲಾಗುತ್ತಿದ್ದು, ಅನರ್ಹ ಕಾರ್ಡ್‌ಗಳನ್ನು ಮಾತ್ರ ರದ್ದುಗೊಳಿಸಿ ಎಪಿಎಲ್ (Above Poverty Line) ಕಾರ್ಡ್ ಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಈ ಕುರಿತು ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಅರ್ಹ ಫಲಾನುಭವಿಯ ಬಿಪಿಎಲ್ ಕಾರ್ಡ್‌(BPL card) ರದ್ದಾಗುವುದಿಲ್ಲ. ಸರ್ಕಾರದ ಉದ್ದೇಶ ಬಡಜನರ ಹಕ್ಕು ಕಸಿದುಕೊಳ್ಳುವುದು ಅಲ್ಲ, ಬದಲಿಗೆ ನಿಜವಾದ ಹಕ್ಕುದಾರರಿಗೆ ನ್ಯಾಯ ದೊರಕುವಂತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಇನ್ನು, ಕೇಂದ್ರ ಸರ್ಕಾರವು(Central government) ನೀಡಿರುವ ಮಾರ್ಗಸೂಚಿಯಡಿ ಎಲ್ಲಾ ರಾಜ್ಯಗಳು ಬಿಪಿಎಲ್ ಕಾರ್ಡ್‌ಗಳ ಮಾಹಿತಿಯನ್ನು ಪುನರ್‌ಪರಿಶೀಲನೆ ಮಾಡಬೇಕಾಗಿದೆ. ಈ ಪ್ರಕ್ರಿಯೆಯಲ್ಲಿ ತಪ್ಪು ಮಾಹಿತಿಯ ಆಧಾರದ ಮೇಲೆ ಬಿಪಿಎಲ್ ಕಾರ್ಡ್ ಪಡೆದಿರುವವರ ವಿವರಗಳನ್ನು ಪತ್ತೆಹಚ್ಚಿ, ಅವರ ಕಾರ್ಡ್‌ಗಳನ್ನು ರದ್ದುಗೊಳಿಸಲಾಗುವುದು. ಇದರ ಪ್ರಮಾಣವು ಸುಮಾರು ಶೇಕಡಾ 15ರಷ್ಟಿರಬಹುದು. ಜೊತೆಯಲ್ಲಿ ಅರ್ಹರ ಕಾರ್ಡ್‌ಗಳನ್ನು ಯಾವುದೇ ರೀತಿಯಲ್ಲಿ ರದ್ದುಪಡಿಸುವ ಪ್ರಶ್ನೆಯೇ ಇಲ್ಲ. ನಿಜವಾದ ಬಡಜನರು ಸರ್ಕಾರದ ಎಲ್ಲ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳುತ್ತಾರೆ. ಅನರ್ಹರ ಕಾರ್ಡ್‌ಗಳನ್ನು ಮಾತ್ರ ಎಪಿಎಲ್ ಕಾರ್ಡ್ ಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಸಚಿವ ಮುನಿಯಪ್ಪ ತಿಳಿಸಿದರು.

ಇದೇ ಸಂದರ್ಭದಲ್ಲಿ ಮತ್ತೊಂದು ಮಹತ್ವದ ಘೋಷಣೆಯನ್ನು ಮಾಡಿದ್ದು, ಶೀಘ್ರದಲ್ಲೇ ಬಿಪಿಎಲ್ ಕಾರ್ಡ್‌ದಾರರಿಗೆ ಪೌಷ್ಟಿಕ ಆಹಾರ ಪದಾರ್ಥಗಳ ವಿತರಣೆ ಪ್ರಾರಂಭವಾಗಲಿದೆ ಎಂದು ತಿಳಿಸಿದ್ದಾರೆ. ಇದರಲ್ಲಿ ಎಣ್ಣೆ, ಬೇಳೆಕಾಳುಗಳು ಸೇರಿದಂತೆ ಅನೇಕ ಪೌಷ್ಟಿಕಾಂಶಯುಕ್ತ ಆಹಾರ ವಸ್ತುಗಳನ್ನೂ ಒಳಗೊಂಡಿರುತ್ತದೆ ಎಂದು ತಿಳಿಸಿದ್ದಾರೆ.

ಈ ಮೂಲಕ ಸರ್ಕಾರ ಬಡ ಕುಟುಂಬಗಳ ಆಹಾರ ಭದ್ರತೆಯನ್ನು ಹೆಚ್ಚಿಸುವತ್ತ ಮತ್ತೊಂದು ಹೆಜ್ಜೆ ಇಟ್ಟಿದೆ. ಜನರ ಮನಗಳಲ್ಲಿ ಮೂಡಿರುವ ಬಿಪಿಎಲ್ ಕಾರ್ಡ್ ರದ್ದತಿ ಕುರಿತ ಆತಂಕಕ್ಕೆ ಸ್ಪಷ್ಟನೆ ನೀಡಿದ ಸಚಿವ ಮುನಿಯಪ್ಪ ಅವರ ಹೇಳಿಕೆ ಇದೀಗ ಜನರ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories