ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯವು ರಿಟ್ ಅರ್ಜಿ ಸಂಖ್ಯೆ: 12278/2007 ದಿನಾಂಕ: 07.07.2008ರಲ್ಲಿ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಭೂ ಪರಿವರ್ತನೆ ಆದೇಶ ಇಲ್ಲದ ಮತ್ತು ಬಡಾವಣೆ ನಕ್ಷೆ ಅನುಮೋದನೆ ಇಲ್ಲದ ಆಸ್ತಿಗಳ ಕಾನೂನುಬಾಹಿರ ನೋಂದಣಿಯನ್ನು ತಡೆಹಿಡಿಯುವ ಸಲುವಾಗಿ ಒಂದು ವ್ಯವಸ್ಥೆಯನ್ನು ರೂಪಿಸುವಂತೆ ಹಾಗೂ ಅನಧಿಕೃತ ಆಸ್ತಿಗಳ ನೋಂದಣಿಯನ್ನು ಕೂಡಲೇ ನಿಲ್ಲಿಸುವಂತೆ ಆದೇಶಿಸಿರುವ ಹಿನ್ನೆಲೆಯಲ್ಲಿ ಮಾಹಿತಿ ತಂತ್ರಜ್ಞಾನ ವ್ಯವಸ್ಥೆ ಮತ್ತು ನೀತಿ ರೂಪಿಸಿ ತಂತ್ರಾಂಶ ಅಭಿವೃದ್ಧಿಯ ಮೂಲಕ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅನಧಿಕೃತ ಆಸ್ತಿಗಳ ನೋಂದಣಿಯನ್ನು ನಿಯಂತ್ರಿಸಲು ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳ ನಿರ್ವಹಣೆ, ಇ-ಆಡಳಿತದ ಮೂಲಕ ಆಸ್ತಿಗಳ ಮಾಲೀಕರಿಗೆ ತಮ್ಮ ಸ್ಥಿರಾಸ್ತಿಗಳ ಬಗ್ಗೆ ಸುಲಭವಾದ ಸೌಲಭ್ಯವನ್ನು ಆನ್-ಲೈನ್ ಮೂಲಕ ಒದಗಿಸುವ ಉದ್ದೇಶದಿಂದ ಇ-ಸ್ವತ್ತು ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ “ಇ-ಸ್ವತ್ತು” ಮತ್ತು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ “ಕಾವೇರಿ” ಜಾಲಗಳಿಗೆ ಸಂಪರ್ಕ ಕಲ್ಪಿಸಲಾಗಿದೆ. ಅದರಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿನ ಕೃಷಿಯೇತರ ಆಸ್ತಿ ವಿವರಗಳನ್ನು “ಇ-ಸ್ವತ್ತು” ತಂತ್ರಾಂಶದ ವ್ಯವಸ್ಥೆಗೊಳಪಡಿಸಿ, “ಕಾವೇರಿ” ತಂತ್ರಾಂಶದ ಮೂಲಕ ನೋಂದಾಯಿಸುವುದಾಗಿರುತ್ತದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ





















ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

“ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ. ಪತ್ರಿಕೋದ್ಯಮದಲ್ಲಿ 6 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ವಿಶ್ಲೇಷಿಸಿ, ಜನಸಾಮಾನ್ಯರಿಗೆ ಮತ್ತು ವಿದ್ಯಾರ್ಥಿಗಳಿಗೆ ಅದರ ಪ್ರಯೋಜನಗಳನ್ನು ಸುಲಭವಾಗಿ ಅರ್ಥೈಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು, ಪರೀಕ್ಷಾ ಫಲಿತಾಂಶಗಳು ಮತ್ತು ವಿಶ್ವಾಸಾರ್ಹ ದೈನಂದಿನ ಹವಾಮಾನ ವರದಿಯನ್ನು ಒದಗಿಸುತ್ತಾರೆ. ವಿದ್ಯಾರ್ಥಿಗಳ ಭವಿಷ್ಯ ಮತ್ತು ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದು ಇವರ ಮುಖ್ಯ ಗುರಿಯಾಗಿದೆ.”


WhatsApp Group




