ಬೆಂಗಳೂರು: ಕರ್ನಾಟಕ ವಿಧಾನಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿಕೊಳ್ಳುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಈ ಬಗ್ಗೆ ನೀಡಲಾದ ಮನವಿಯನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಭಾರತ ಚುನಾವಣಾ ಆಯೋಗದಿಂದ ನಿಗದಿ ಪಡಿಸಲಾದ ವೇಳಾಪಟ್ಟಿಯ ಪ್ರಕಾರ, ಈ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ನಮೂದಿಸುವ ಸಾಮಾನ್ಯ ಅಂತಿಮ ದಿನಾಂಕ ನವೆಂಬರ್ 6, 2025 ಆಗಿದೆ. ಆದರೆ, ಯಾವುದೇ ಕಾರಣದಿಂದಾಗಿ ಈ ದಿನಾಂಕದೊಳಗೆ ನೋಂದಣಿ ಮಾಡಿಸಿಕೊಳ್ಳದ ಅರ್ಹ ವ್ಯಕ್ತಿಗಳಿಗೆ ಮತ್ತೊಂದು ಅವಕಾಶ ನೀಡಲಾಗುತ್ತದೆ.
ಅಂತಹ ಮತದಾರರು, ನವೆಂಬರ್ 25, 2025 ರಿಂದ ಡಿಸೆಂಬರ್ 10, 2025 ರ ವರೆಗಿನ ‘ಹಕ್ಕು ಮತ್ತು ಆಕ್ಷೇಪಣೆ’ ಸಮಯದಲ್ಲಿ ಸಹ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ಅಲ್ಲದೆ, ಚುನಾವಣೆ ಘೋಷಣೆಯಾದ ನಂತರ, ಅಭ್ಯರ್ಥಿಗಳು ತಮ್ಮ ನಾಮನಿರ್ದೇಶನ ಪತ್ರಗಳನ್ನು ಸಲ್ಲಿಸುವ ಕೊನೆಯ ದಿನದಿಂದ ಹಿಂದಕ್ಕೆ 10 ದಿನಗಳ ಕಾಲ ಸಹ ಮತದಾರರ ನೋಂದಣಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.


WhatsApp Group




