ಕರ್ನಾಟಕ ರಾಜ್ಯದಲ್ಲಿ ನಡೆದ ಜಾತಿ ಗಣತಿ ಸಮೀಕ್ಷೆ (ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ದಾರರಿಗೆ ಬಹುದೊಡ್ಡ ಸಿಹಿ ಸುದ್ದಿ! ಕರ್ನಾಟಕ ಸರ್ಕಾರವು ಈಗಾಗಲೇ ಈ ಸಮೀಕ್ಷಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಸಾವಿರಾರು ಸಮೀಕ್ಷೆದಾರರಿಗೆ ಗೌರವಧನವನ್ನು ಬಿಡುಗಡೆ ಮಾಡಲು ಅಧಿಕೃತ ಆದೇಶ ಹೊರಡಿಸಿದೆ. ಈ ಗೌರವಧನವು ರಾಜ್ಯಾದ್ಯಂತ ನಡೆದ ಜಾತಿ ಗಣತಿ ಸಮೀಕ್ಷೆಯಲ್ಲಿ ಕೆಲಸ ಮಾಡಿದ ಎಲ್ಲಾ ಸಿಬ್ಬಂದಿಗೆ ತಲುಪಲಿದೆ. ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಮಾರ್ಗದರ್ಶನದಲ್ಲಿ ನಡೆದ ಈ ಐತಿಹಾಸಿಕ ಸಮೀಕ್ಷೆಯು ರಾಜ್ಯದ ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ನೀತಿ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಈ ಲೇಖನದಲ್ಲಿ ಗೌರವಧನದ ಮೊತ್ತ, ಬಿಡುಗಡೆ ಪ್ರಕ್ರಿಯೆ, ಯಾರೆಲ್ಲಾ ಅರ್ಹರು, ಆದೇಶದ ವಿವರಗಳು ಮತ್ತು ಇತರೆ ಮಾಹಿತಿಯನ್ನು ಸಂಪೂರ್ಣವಾಗಿ ಕನ್ನಡದಲ್ಲಿ ವಿವರಿಸಲಾಗಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ……
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಕೈಗೊಳ್ಳಲಾಗುವ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಸಮೀಕ್ಷಾದಾರರು ಮತ್ತು ಮೇಲ್ವಿಚಾರಕರಿಗೆ ಈ ಕೆಳಕಂಡಂತೆ ಗೌರವಧನವನ್ನು ನಿಗದಿಪಡಿಸಿ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಕಾರ್ಯನಿರ್ವಹಿಸಿರುವ ಸಮೀಕ್ಷಾದಾರರಿಗೆ (GBA ಹೊರತುಪಡಿಸಿ) ಅನುಬಂಧದಲ್ಲಿ ವಿವರಿಸಿರುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಒಟ್ಟು ರೂ.1,27,73,45,200 (ನೂರ ಇಪ್ಪತ್ತೇಳು ಕೋಟಿ ಎಪ್ಪತ್ತೂರು ಲಕ್ಷಗಳ ನಲವತ್ತೈದು ಸಾವಿರದ ಇನ್ನೂರು ರೂಪಾಯಿಗಳು ಮಾತ್ರ) ಗಳನ್ನು ಈ ಕೆಳಗಿನ ಷರತ್ತುಗಳಿಗೆ ಒಳಪಟ್ಟು ಬಿಡುಗಡೆ ಮಾಡಿ ಆದೇಶಿಸಿದೆ.
ಷರತ್ತುಗಳು:
- ಒಂದು ಮತ್ತು ಎರಡು ಸದಸ್ಯರಿರುವ ಮನೆಗಳನ್ನು ಸಮೀಕ್ಷೆ ಮಾಡಿರುವ ಬಗ್ಗೆ ತಲಾ ರೂ.50/-ರಂತೆ ಹಾಗೂ ಮೂರು ಮತ್ತು ಮೂರಕ್ಕಿಂತ ಹೆಚ್ಚು ಸದಸ್ಯರಿರುವ ಮನೆಗಳನ್ನು ಸಮೀಕ್ಷೆ ಮಾಡಿರುವ ಬಗ್ಗೆ ತಲಾ ರೂ.100/- ರಂತೆ ಪಾವತಿಸುವುದು.
- EDCS ನಿಂದ ಪಡೆದಿರುವಂತೆ ಸಮೀಕ್ಷಾದಾರರ ಹೆಸರು ಮತ್ತು ಅವರಿಗೆ ಪಾವತಿಸಬೇಕಾಗಿರುವ ಮೊತ್ತದ ವಿವರವನ್ನು ಜಿಲ್ಲಾವಾರು ಪ್ರತ್ಯೇಕವಾಗಿ ನೀಡಲಾಗಿದೆ.
- ಸಮೀಕ್ಷೆಗೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾಗುವ ಅನುದಾನ ಹಾಗೂ ವೆಚ್ಚದ ವಿವರಗಳನ್ನು ಪ್ರತ್ಯೇಕವಾಗಿ ನಿರ್ವಹಿಸುವುದು ಹಾಗೂ ನಿಯಮಾನುಸಾರ ವೆಚ್ಚಗಳನ್ನು ಭರಿಸಿದ ನಂತರ ಹಣ ವಿನಿಯೋಗ ಪ್ರಮಾಣ ಪತ್ರವನ್ನು ಆಯೋಗಕ್ಕೆ ಸಲ್ಲಿಸುವುದು.





ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ (Senior Editor). ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಪದವಿ ಪಡೆದಿದ್ದರೂ, ಮಾಧ್ಯಮ ಕ್ಷೇತ್ರದ ಮೇಲಿರುವ ಅತೀವ ಆಸಕ್ತಿಯಿಂದಾಗಿ 2019 ರಲ್ಲಿ ಡಿಜಿಟಲ್ ಜಗತ್ತಿಗೆ ಕಾಲಿಟ್ಟರು. ಇವರು ಆರಂಭಿಸಿದ “Suddi No.1 Kannada” ಯೂಟ್ಯೂಬ್ ಚಾನೆಲ್ ಪ್ರಸ್ತುತ 300K ಗೂ ಹೆಚ್ಚು ಸಬ್ಸ್ಕ್ರೈಬರ್ಗಳನ್ನು ಹೊಂದುವ ಮೂಲಕ ಜನಪ್ರಿಯವಾಗಿದೆ. ಡಿಜಿಟಲ್ ಮಾಧ್ಯಮದಲ್ಲಿ ಉತ್ತಮ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ಸರಳವಾಗಿ ವಿಶ್ಲೇಷಿಸಿ, ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತಲುಪಿಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು ಮತ್ತು ನಿಖರ ಮಾಹಿತಿ ನೀಡುವ ವಿಡಿಯೋ ಕಂಟೆಂಟ್ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವುದು ಇವರ ಬರವಣಿಗೆಯ ವಿಶಿಷ್ಟ ಶೈಲಿಯಾಗಿದೆ.


WhatsApp Group




Leave a Reply