Picsart 25 11 11 22 04 59 713 scaled

ಕರ್ನಾಟಕದ ರೈತರಿಗೆ ದೊಡ್ಡ ನೆರವು: 31 ಜಿಲ್ಲೆಗಳಿಗೆ ₹324 ಕೋಟಿ ಬೆಳೆ ಪರಿಹಾರ ಬಿಡುಗಡೆ

Categories:
WhatsApp Group Telegram Group

ಕರ್ನಾಟಕದ ಕೃಷಿ ವಲಯ ಕಳೆದ ಕೆಲವು ತಿಂಗಳಿಂದ ಗಂಭೀರ ಸವಾಲುಗಳನ್ನು ಎದುರಿಸುತ್ತಿದೆ. ಒಂದೆಡೆ ಮಳೆ ವೈಫಲ್ಯ, ಮತ್ತೊಂದೆಡೆ ಕೆಲವೊಂದು ಜಿಲ್ಲೆಗಳಲ್ಲಿ ದಾಖಲೆ ಮಟ್ಟದ ಅತಿವೃಷ್ಟಿ ಇರಡೂ ಪರಿಸ್ಥಿತಿಗಳು ರೈತರ ಬದುಕಿನ ಮೇಲೆ ದೊಡ್ಡ ಪರಿಣಾಮ ಬೀರಿದ್ದಾವೆ. ಮುಂಗಾರು ವಿಫಲವಾದ ಪರಿಣಾಮ ಅನೇಕ ಪ್ರದೇಶಗಳಲ್ಲಿ ಬಿತ್ತನೆ ಕೂಡ ಆಗದೆ ಉಳಿದಿದೆ, ಬಿತ್ತನೆ ಮಾಡಿದ ಪ್ರದೇಶಗಳಲ್ಲಿ ಬೆಳೆ ನಷ್ಟ ಆಗಿದೆ. ಈ ಅನಿರೀಕ್ಷಿತ ಪರಿಸ್ಥಿತಿ ರೈತರಿಗೆ ಭಾರೀ ಪ್ರಮಾಣದಲ್ಲಿ ಆರ್ಥಿಕ ಪರಿಣಾಮ ಬೀರಿದೆ, ಇದರಿಂದ ರಾಜ್ಯದಾದ್ಯಂತ ಪರಿಹಾರದ ನಿರೀಕ್ಷೆ ಹೆಚ್ಚಿದೆ. ಹಾಗಾದರೆ, ಈ ಸಂಕಷ್ಟದಲ್ಲಿ ಸಿಲುಕಿರುವ ರೈತರ ಆತಂಕವನ್ನು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

31 ಜಿಲ್ಲೆಗಳಿಗೆ 324 ಕೋಟಿ ರೂ. ಬೆಳೆ ಪರಿಹಾರ ಬಿಡುಗಡೆ:

ಮುಂಗಾರು ವೈಫಲ್ಯ ಮತ್ತು ಅತಿವೃಷ್ಟಿ ಎರಡರ ಪರಿಣಾಮವಾಗಿ 31 ಜಿಲ್ಲೆಗಳಲ್ಲಿ ಬೆಳೆ ನಷ್ಟ ಕಂಡುಬಂದ ಹಿನ್ನೆಲೆಯಲ್ಲಿ, ಸರ್ಕಾರವು ಎಸ್‌ಡಿಆರ್‌ಎಫ್ (State Disaster Response Fund) ಅಡಿಯಲ್ಲಿ ₹324 ಕೋಟಿ ಅನುದಾನವನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಈ ಮೊತ್ತವನ್ನು ನಷ್ಟದ ಗಾತ್ರ ಮತ್ತು ಸ್ಥಳೀಯ ಪರಿಸ್ಥಿತಿಯನ್ನು ಪರಿಗಣಿಸಿ ಜಿಲ್ಲೆಗಳ ಆಡಳಿತದ ಮೂಲಕ ತಲುಪಿಸಲಾಗುತ್ತದೆ.

11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತಾಗಿ ಮಾತನಾಡಿದ್ದು, ರಾಜ್ಯದಲ್ಲಿ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ರೈತರ ಸಂಕಷ್ಟ ಗಮನಿಸಿದ ಸರ್ಕಾರ ಪರಿಹಾರ ನೀಡಲು ಮುಂದಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಯನ್ನು (MSP) ನಿಗದಿ ಮಾಡುವ ಅಧಿಕಾರ ಕೇಂದ್ರ ಸರ್ಕಾರದ್ದೆ ಎಂದು ಸ್ಪಷ್ಟಪಡಿಸಿದ್ದಾರೆ.

This image has an empty alt attribute; its file name is WhatsApp-Image-2025-09-05-at-11.51.16-AM-12-1024x330.jpeg
ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories