WhatsApp Image 2025 11 16 at 5.50.53 PM

ರಾಜ್ಯದ ಎಲ್ಲಾ ಪೋಲೀಸ್ ಇಲಾಖೆ ಸಾರ್ವಜನಿಕರಲ್ಲಿ ನಡೆದುಕೊಳ್ಳುವ 18 ಮುಖ್ಯ ಅಂಶಗಳಿವು

Categories:
WhatsApp Group Telegram Group

ಸಮಾಜದಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಉತ್ತಮ ಅಭಿಪ್ರಾಯವನ್ನು ಮೂಡಿಸಲು, ಪೊಲೀಸ್ ಅಧಿಕಾರಿ / ಸಿಬ್ಬಂದಿಯವರುಗಳು ಕರ್ತವ್ಯ ನಿರ್ವಹಿಸುವಾಗ ಪಾರದರ್ಶಕತೆ, ಸೌಜನ್ಯದ ವರ್ತನೆ ಮತ್ತು ನಿಷ್ಠೆಯನ್ನು ಕಾಯ್ದುಕೊಳ್ಳುವ ಬಗ್ಗೆ ಸರ್ಕಾರವು ಸೂಚನೆಯನ್ನು ಹೊರಡಿಸಿದೆ ಈ ಕೆಳಗಂಡಂತೆ

WhatsApp Image 2025 11 16 at 5.37.37 PM
WhatsApp Image 2025 11 16 at 5.37.37 PM 1
WhatsApp Image 2025 11 16 at 5.37.37 PM 2
WhatsApp Image 2025 11 16 at 5.37.38 PM

ಪೊಲೀಸ್ ಅಧಿಕಾರಿಗಳು ಸಾರ್ವಜನಿಕರೊಂದಿಗೆ ವರ್ತಿಸುವ ರೀತಿಯು ಪರಿಣಾಮಕಾರಿ ಕಾನೂನು ಜಾರಿ ಮತ್ತು ಸಮುದಾಯದ ಜೊತೆಗಿನ ಉತ್ತಮ ಸಂಬಂಧವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅತ್ಯಂತ ಮುಖ್ಯವಾಗಿದೆ. ಪೊಲೀಸ್ ಅಧಿಕಾರಿಗಳು ತಮ್ಮ ಅಧಿಕಾರವನ್ನು ಚಲಾಯಿಸುವಾಗ ನಾಗರೀಕರೊಂದಿಗೆ ಸೌಜನ್ಯದಿಂದ ಮತ್ತು ಗೌರವದಿಂದ ವರ್ತಿಸಬೇಕು. ಪೊಲೀಸರ ನಡವಳಿಕೆಯಲ್ಲಿ ಸೌಜನ್ಯ ಮತ್ತು ಘನತೆ ಎದ್ದು ಕಾಣಬೇಕು. ಸಕಾರಾತ್ಮಕ ಮತ್ತು ವೃತ್ತಿಪರ ನಡವಳಿಕೆಯು ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆಯ ಮೇಲಿನ ನಂಬಿಕೆ ಮತ್ತು ಸಹಕಾರವನ್ನು ಹೆಚ್ಚಿಸುತ್ತದೆ. ಪೊಲೀಸ್ ಅಧಿಕಾರಿಗಳ ಸಾರ್ವಜನಿಕರೊಂದಿಗಿನ ನಡವಳಿಕೆಯು ಅಪರಾಧ ತಡೆಗಟ್ಟುವಿಕೆ ಮತ್ತು ಅಪರಾಧ ನಿಯಂತ್ರಣ ಕಾರ್ಯವು ಹೆಚ್ಚು ಪರಿಣಾಮಕಾರಿಯಾಗುವಲ್ಲಿ ಸಹಕರಿಸುತ್ತದೆ. ಅಧಿಕಾರ ದುರುಪಯೋಗಪಡಿಸಿಕೊಂಡು ಸಾರ್ವಜನಿಕರ ಮೇಲೆ ಅನಗತ್ಯ ಬಲ ಪ್ರಯೋಗ ಮಾಡುವುದು ಅಥವಾ ದರ್ಪದಿಂದ ವರ್ತಿಸುವುದು ಇಲಾಖೆಯ ಘನತೆಗೆ ತಕ್ಕುದಾದ ನಡವಳಿಕೆಯಲ್ಲ. ನಾಗರೀಕರ ಹಕ್ಕುಗಳಿಗೆ ಗೌರವವನ್ನು ನೀಡುವುದು ಮತ್ತು ಸಂಯಮದಿಂದ ಆವರೊಡನೆ ವರ್ತಿಸುವುದು ಇಲಾಖೆಯ ಘನತೆಯನ್ನು ಹೆಚ್ಚಿಸಿ ಸಾರ್ವಜನಿಕರಲ್ಲಿ ಪೊಲೀಸರ ಬಗ್ಗೆ ಗೌರವ ಮೂಡುವಂತೆ ಮಾಡುತ್ತದೆ.


ಸಾರ್ವಜನಿಕರೊಂದಿಗಿನ ಎಲ್ಲಾ ವ್ಯವಹಾರಗಳಲ್ಲಿ ಎಲ್ಲಾ ಪೊಲೀಸ್ ಅಧಿಕಾರಿಗಳು ಗರಿಷ್ಠ ಮಟ್ಟದ ವೃತ್ತಿಪರತೆ, ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವಂತೆ ಸೂಚಿಸಲಾಗಿದೆ. ಪೊಲೀಸ್ ಇಲಾಖೆಯ ಮೇಲಿನ ಗೌರವ ಹಾಗೂ ನಂಬಿಕೆಗಳು ಸಮಗ್ರವಾಗಿ ಪ್ರತಿ ಅಧಿಕಾರಿಯು ಯಾವ ರೀತಿ ನಡೆದುಕೊಳ್ಳುತ್ತಾನೆ ಎಂಬುದರ ಮೇಲೆ (ಸಮವಸ್ತ್ರ ಧರಿಸಿದ್ದಾಗ ಅಥವಾ ಮಪ್ತಿಯಲ್ಲಿರುವಾಗ) ಅವಲಂಬಿತವಾಗಿದೆ ಎಂಬುದನ್ನು ಮರೆಯಬಾರದು.
ಈ ನಿಟ್ಟಿನಲ್ಲಿ ಕೆಳಕಂಡ ಮಾರ್ಗಸೂಚಿಗಳನ್ನು ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕಟ್ಟುನಿಟ್ಟಾಗಿ
ಪಾಲಿಸುವುದು:

  1. ಇಲಾಖೆಯ ಎಲ್ಲಾ ಅಧಿಕೃತ ವ್ಯವಹಾರಗಳು ಮತ್ತು ಕಾರ್ಯವಿಧಾನಗಳಲ್ಲಿ ಸಂಪೂರ್ಣ ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು. ಪೊಲೀಸ್ ಠಾಣೆಗೆ ಭೇಟಿ ನೀಡುವ ಯಾವುದೇ ವ್ಯಕ್ತಿಯ ಸಾಮಾಜಿಕ ಅಥವಾ ಆರ್ಥಿಕ ಹಿನ್ನೆಲೆಯನ್ನು ಗಮನಿಸದೇ ಎಲ್ಲರನ್ನೂ ಸಮಾನವಾಗಿ ಪರಿಗಣಿಸಬೇಕು.
  2. ಸಾರ್ವಜನಿಕರ ಕುಂದುಕೊರತೆಗಳನ್ನು ತಾಳ್ಮೆಯಿಂದ ಆಲಿಸಿ ಮತ್ತು ಕಾನೂನಿನ ಪ್ರಕಾರ ಅನಗತ್ಯ ಕಾಲವಿಳಂಬವಿಲ್ಲದೇ ದೂರುಗಳನ್ನು ದಾಖಲಿಸುವುದು.
  3. ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಅಥವಾ ವರ್ತನೆಯನ್ನು ತೋರದೆ ಯಾವಾಗಲೂ ಸೌಜನ್ಯ ಮತ್ತು ಘನತೆಯಿಂದ ವರ್ತಿಸಿ ಕಾನೂನು ಜಾರಿಗೊಳಿಸುವಲ್ಲಿ ದೃಢತೆಯನ್ನು ಪ್ರದರ್ಶಿಸುವುದು.
  4. ಯಾವುದೇ ಸಂದರ್ಭದಲ್ಲೂ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಗಳಿಂದ. ಯಾವುದೇ ರೀತಿಯ ಬೇಡಿಕೆ ಇಡುವುದರಿಂದ ಅಥವಾ ಯಾವುದೇ ಅಕ್ರಮ ಸಹಾಯ/ಲಾಭವನ್ನು ಸ್ವೀಕರಿಸುವುದರಿಂದ ಸಂಪೂರ್ಣವಾಗಿ ದೂರವಿರಬೇಕು.
  5. ಕರ್ತವ್ಯದ ಸಮಯದಲ್ಲಿ/ಕರ್ತವ್ಯ ಮುಗಿದ ನಂತರವೂ ನೈತಿಕವಾಗಿ ಇತರರಿಗೆ ಮಾದರಿಯಾಗುವಂತೆ ಇದ್ದು ಇಲಾಖೆಯ ನೀತಿ ನಿಯಮಗಳನ್ನು ಎತ್ತಿಹಿಡಿಯಬೇಕು.
  6. ಸ್ಟೇಷನ್ ಹೌಸ್ ಡೈರಿಗಳು ಮತ್ತು ಕೇಸ್ ಫೈಲ್ ಗಳಲ್ಲಿ ನಿಖರ ಮತ್ತು ಇಂದೀಕರಿಸಿದ ದಾಖಲೆಗಳನ್ನು ಕಾಯ್ದುಕೊಳ್ಳಬೇಕು ಮತ್ತು ಸಮಗ್ರವಾಗಿ ನಿರ್ವಹಿಸಬೇಕು.
  7. ತನಿಖಾ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವುದು ಮತ್ತು ಪ್ರತಿ ಹಂತದಲ್ಲೂ ಜವಾಬ್ದಾರಿಯಿಂದ ಕಾರ್ಯನಿರ್ವಹಣೆ ಮಾಡಬೇಕು. ಯಾವುದೇ ನಾಗರೀಕರಿಗೆ ಅನಗತ್ಯವಾಗಿ ತೊಂದರೆ ನೀಡಬಾರದು.
  8. ಸಂತ್ರಸ್ಥರು, ಮಹಿಳೆಯರು, ಹಿರಿಯ ನಾಗರೀಕರು ಮತ್ತು ಮಕ್ಕಳೊಂದಿಗೆ ವಿಶೇಷ ಕಾಳಜಿಯಿಂದ ಮತ್ತು ಸೂಕ್ಷ್ಮತೆಯಿಂದ ವರ್ತಿಸಬೇಕು.
  1. ಸಾರ್ವಜನಿಕರ ದೂರುಗಳ ಸ್ಥಿತಿ ಮತ್ತು ಬಾಕಿ ಇರುವ ಪ್ರಕರಣಗಳ ಕುರಿತು ನಾಗರೀಕರಿಗೆ ಮಾಹಿತಿ ನೀಡಬೇಕು. ಕರ್ತವ್ಯಕ್ಕೆ ಹಾಜರಾಗುವುದು ಮತ್ತು ಅಧಿಕೃತ ಕಾರ್ಯಗಳನ್ನು ನಿರ್ವಹಿಸುವಲ್ಲಿ ಶಿಸ್ತಿನಿಂದ ಸಮಯ ಪಾಲನೆ ಮಾಡಬೇಕು.
  2. ಪೊಲೀಸ್-ಸಾರ್ವಜನಿಕ ಸಂವಹನದಲ್ಲಿ ನ್ಯಾಯಸಮ್ಮತೆಯನ್ನು ಎತ್ತಿಹಿಡಿಯಲು ಸಮವಸ್ತ್ರದ ಮೇಲೆ ಧರಿಸುವ ಕ್ಯಾಮೆರಾಗಳನ್ನು ಮತ್ತು ಲಭ್ಯವಿರುವ ತಂತ್ರಜ್ಞಾನಗಳನ್ನು ಜವಾಬ್ದಾರಿಯುತವಾಗಿ ಬಳಸಿಕೊಳ್ಳಬೇಕು.
  3. ಎಲ್ಲಾ ಅಧಿಕೃತ ವಿಷಯಗಳಲ್ಲಿ ನ್ಯಾಯಾಂಗ ಮತ್ತು ಆಡಳಿತಾತ್ಮಕ ಅಧಿಕಾರಿಗಳಿಗೆ ಪೂರ್ಣ ಸಹಕಾರವನ್ನು ನೀಡಿ, ಶೋಧ, ಬಂಧನ ಅಥವಾ ವಿಚಾರಣೆಯ ಸಮಯದಲ್ಲಿ ಸಾರ್ವಜನಿಕರ ಖಾಸಗಿತನ ಮತ್ತು ಘನತೆಯನ್ನು ಗೌರವಿಸಿ, ಅಧಿಕಾರದ ದುರುಪಯೋಗ ಅಥವಾ ದೌರ್ಜನ್ಯದಿಂದ ದೂರವಿರಿ ಮತ್ತು ಸದ್ವರ್ತನೆಗೆ ಮಾದರಿಯಾಗಿರಿ.
  4. ಸಮುದಾಯದಲ್ಲಿ ಸಕ್ರಿಯವಾಗಿ ಭಾಗವಹಿಸಿ ಮತ್ತು ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ, ಪಾರದರ್ಶಕ, ಕಾನೂನುಬದ್ಧ ಮತ್ತು ಸಹಾನುಭೂತಿಯ ಪೊಲೀಸಿಂಗ್ ಅಭ್ಯಾಸಗಳ ಮೂಲಕ ಸಾರ್ವಜನಿಕರ ವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸುವುದು.
  5. ಪೊಲೀಸ್ ಕಾರ್ಯಗಳ ಮೇಲೆ ಪ್ರಭಾವ ಬೀರುವ ಅಥವಾ ಭ್ರಷ್ಟಗೊಳಿಸುವ ಯಾವುದೇ ಪ್ರಯತ್ನಗಳು ಕಂಡುಬಂದಲ್ಲಿ ಈ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿರಿ.
  6. ಬೇರೆ ಠಾಣಾ ವ್ಯಾಪ್ತಿಯ ದೂರು ಬಂದಲ್ಲಿ ದೂರುದಾರರನ್ನು ಸಂಬಂಧಿಸಿದ ಠಾಣೆಗೆ ಹೋಗಿ ದೂರು ನೀಡುವಂತೆ ಹೇಳದೇ, ಠಾಣೆಯಲ್ಲಿ ಶೂನ್ಯ ಪ್ರವ. ವರದಿಯನ್ನು ದಾಖಲಿಸಿ ಆ ನಂತರ ವ್ಯಾಪ್ತಿಯ ಆಧಾರದ ಮೇಲೆ ಸಂಬಂಧಪಟ್ಟ ಠಾಣೆಗೆ ದೂರನ್ನು ವರ್ಗಾಯಿಸುವುದು.
  7. ಮಹಿಳೆಯರನ್ನು ಸಂಜೆ 06:00 ಗಂಟೆಯ ನಂತರ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಅಥವಾ ಹೇಳಿಕೆಯನ್ನು ನೀಡಲು ಕರೆತರಬಾರದು.
  8. ಮಹಿಳೆಯು ಒಂದು ವೇಳೆ ಆರೋಪಿಯಾಗಿದ್ದಲ್ಲಿ ಅಥವಾ ಸಂತ್ರಸ್ಥೆಯಾಗಿದ್ದಲ್ಲಿ ಆಕೆಯನ್ನು ಮಹಿಳಾ ಪೊಲೀಸ್ ಅಧಿಕಾರಿಯ ನೆರವಿನೊಂದಿಗೆ, ಮಹಿಳೆಯ ವಾಸದ ಸ್ಥಳ/ಮನೆಯಲ್ಲಿಯೇ ವಿಚಾರಣೆ ಮಾಡಬೇಕು.
  9. ಕ್ರಿಮಿನಲ್ ಪ್ರಕರಣಗಳಲ್ಲಿ ಮಹಿಳೆಯರು ಭಾಗಿಯಾದಾಗ ಅವರನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಅವರಿಗೆ ಯಾವುದೇ ಅವಮಾನಕ್ಕೆ ಒಳಗಾಗದಂತೆ ನೋಡಿಕೊಳ್ಳಬೇಕು ಮತ್ತು ಅವರನ್ನು ಪೊಲೀಸ್ ಠಾಣೆಯಲ್ಲಿ ಇರಿಸಬಾರದು, ಬದಲಿಗೆ ಅವರನ್ನು ರಾಜ್ಯ ಗೃಹ (ಸ್ಟೇಟ್ ಹೋಮ್) ಆಶ್ರಯ ತಾಣಗಳಲ್ಲಿ ಇರಿಸಬೇಕು.
  1. ಉತ್ತಮವಾಗಿ ನೀಟಾದ ಸಮವಸ್ತ್ರವನ್ನು/ಮಸ್ಕಿ ಬಟ್ಟೆಗಳನ್ನು ಧರಿಸುವ ಪೊಲೀಸ್ ಅಧಿಕಾರಿಯು ಸಾರ್ವಜನಿಕರಿಂದ ಉತ್ತಮ ಗೌರವವನ್ನು ಪಡೆಯುತ್ತಾನೆ. ಅಧಿಕಾರಿ ಮತ್ತು ಸಿಬ್ಬಂದಿಗಳು ನೀಟಾದ Turn out ಹೊಂದಿರಬೇಕು. ಇದು ಪೊಲೀಸ್ ಅಧಿಕಾರಿಯ ವ್ಯಕ್ತಿತ್ವ ಹಾಗೂ ಕಾರ್ಯದಕ್ಷತೆಗಳನ್ನು ಉತ್ತೇಜಿಸುತ್ತದೆ. ನೀಟಾದ ಸಮವಸ್ತ್ರವು ವೃತ್ತಿಪರತೆ ಮತ್ತು ಶಿಸ್ತಿನ ಪ್ರತಿಬಿಂಬ ಅಷ್ಟೇ ಅಲ್ಲ ಪರಿಣಾಮಕಾರಿ ಪೊಲೀಸ್ ಕಾರ್ಯನಿರ್ವಹಣೆಗೆ ಅತ್ಯಗತ್ಯ.
    ಪ್ರತಿಯೊಬ್ಬ ಅಧಿಕಾರಿಯು ಸಾರ್ವಜನಿಕರ ವಿಶ್ವಾಸವು ಪೊಲೀಸ್ ಇಲಾಖೆಯ ಅತ್ಯಂತ ಮೌಲ್ಯಯುತ ಆಸ್ತಿಯೆಂಬುದನ್ನು ನೆನಪಿಟ್ಟುಕೊಳ್ಳಬೇಕು. ಈ ಸೂಚನೆಗಳಿಂದ ಯಾವುದೇ ವಿಚಲನವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಮತ್ತು ಇಲಾಖಾ ನಿಯಮಗಳ ಪ್ರಕಾರ ವ್ಯವಹರಿಸಲಾಗುವುದು.
    ಎಲ್ಲಾ ಘಟಕಾಧಿಕಾರಿಗಳು ಈ ಸುತ್ತೋಲೆಯ ಅಂಶಗಳನ್ನು ತಮ್ಮ ಅಧೀನದಲ್ಲಿ ಇರುವ ಎಲ್ಲಾ ಸಿಬ್ಬಂದಿಗಳಿಗೆ ತಿಳಿಸಬೇಕು ಮತ್ತು ಕಟ್ಟುನಿಟ್ಟಾದ ಅನುಸರಣೆಯನ್ನು ಖಚಿತಪಡಿಸಿಕೊಳ್ಳಬೇಕು.
WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories