ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 (1993ರ ಕರ್ನಾಟಕ ಅಧಿನಿಯಮ ಸಂಖ್ಯೆ 14)ರ ಪ್ರಕರಣ 2ರ (28ಸಿ) ಖಂಡ 58, 145, 146 ಮತ್ತು 184 ರೊಡನೆ ಓದಿಕೊಂಡಂತೆ 311 ರಲ್ಲಿ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಜವಾಬ್ದಾರಿ ನಕ್ಷೆಯ, ವಿವರ, ವಿವರ, ಮೇಲ್ವಿಚಾರಣೆ) ನಿಯಮಗಳು, 2018ರ ಕರಡನ್ನು ಸದರಿ ಅಧಿನಿಯಮದ 311ನೇ ಪ್ರಕರಣದ ಮೂಲಕ ಅಗತ್ಯಪಡಿಸಲಾದಂತೆ, ಇದರಿಂದ ಬಾಧಿತರಾಗಬಹುದಾದ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು, ಸರ್ಕಾರಿ ರಾಜ್ಯ ಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ ಹದಿನೈದು ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆಂದೂ ಈ ಮೂಲಕ ಸೂಚನೆಯನ್ನು ನೀಡಲಾಗಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ..
ಮೇಲೆ ನಿರ್ದಿಷ್ಟಪಡಿಸಿದ ಅವಧಿಯು ಮುಕ್ತಾಯವಾಗುವ ಮೊದಲು ಸದರಿ ಕರಡಿಗೆ ಸಂಬಂಧಿಸಿದಂತೆ ಯಾವೊಬ್ಬ ವ್ಯಕ್ತಿಯಿಂದ ರಾಜ್ಯ ಸರ್ಕಾರವು ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು, ರಾಜ್ಯ ಸರ್ಕಾರವು ಪರಿಗಣಿಸುವುದು. ಆಕ್ಷೇಪಣೆ ಮತ್ತು ಸಲಹೆಗಳನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬಹುಮಹಡಿಗಳ ಕಟ್ಟಡ, ಡಾ॥ ಅಂಬೇಡ್ಕರ್ ವೀದಿ, ಬೆಂಗಳೂರು-01 ಇವರಿಗೆ ಮೇಲ್ಕಂಡ ಅವಧಿಯೊಳಗೆ ಕಳುಹಿಸಲು ಕೋರಲಾಗಿದೆ.








ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ (Senior Editor). ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಪದವಿ ಪಡೆದಿದ್ದರೂ, ಮಾಧ್ಯಮ ಕ್ಷೇತ್ರದ ಮೇಲಿರುವ ಅತೀವ ಆಸಕ್ತಿಯಿಂದಾಗಿ 2019 ರಲ್ಲಿ ಡಿಜಿಟಲ್ ಜಗತ್ತಿಗೆ ಕಾಲಿಟ್ಟರು. ಇವರು ಆರಂಭಿಸಿದ “Suddi No.1 Kannada” ಯೂಟ್ಯೂಬ್ ಚಾನೆಲ್ ಪ್ರಸ್ತುತ 300K ಗೂ ಹೆಚ್ಚು ಸಬ್ಸ್ಕ್ರೈಬರ್ಗಳನ್ನು ಹೊಂದುವ ಮೂಲಕ ಜನಪ್ರಿಯವಾಗಿದೆ. ಡಿಜಿಟಲ್ ಮಾಧ್ಯಮದಲ್ಲಿ ಉತ್ತಮ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ಸರಳವಾಗಿ ವಿಶ್ಲೇಷಿಸಿ, ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತಲುಪಿಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು ಮತ್ತು ನಿಖರ ಮಾಹಿತಿ ನೀಡುವ ವಿಡಿಯೋ ಕಂಟೆಂಟ್ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವುದು ಇವರ ಬರವಣಿಗೆಯ ವಿಶಿಷ್ಟ ಶೈಲಿಯಾಗಿದೆ.


WhatsApp Group




