WhatsApp Image 2025 11 20 at 9.11.16 PM

Traffic Rules : ಇನ್ಮುಂದೆ ಚಿಕ್ಕ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ನಿಯಮ ಉಲ್ಲಂಘಿಸಿದರೆ ಇಷ್ಟು ದಂಡ ಫಿಕ್ಸ್

Categories:
WhatsApp Group Telegram Group

ಭಾರತದ ಸುಪ್ರೀಂ ಕೋರ್ಟ್ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಐತಿಹಾಸಿಕ ತೀರ್ಪು ನೀಡಿದ್ದು, ಇನ್ನು ಮುಂದೆ ದ್ವಿಚಕ್ರ ವಾಹನಗಳಲ್ಲಿ 6 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಮಕ್ಕಳನ್ನು ಕರೆದೊಯ್ಯುವಾಗ ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದೆ. ಈ ನಿಯಮವನ್ನು ತಕ್ಷಣವೇ ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ಕೋರ್ಟ್ ಎಲ್ಲ ರಾಜ್ಯ ಸರ್ಕಾರಗಳಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ಸ್ಪಷ್ಟ ಸೂಚನೆ ನೀಡಿದೆ. ಈ ಆದೇಶ ಕೇಂದ್ರ ಮೋಟಾರು ವಾಹನ (ಎರಡನೇ ತಿದ್ದುಪಡಿ) ನಿಯಮಗಳು 2022ರ ನಿಯಮ 138(7) ಮತ್ತು ಮೋಟಾರು ವಾಹನ ಕಾಯ್ದೆ ಸೆಕ್ಷನ್ 129ರ ಅಡಿಯಲ್ಲಿ ಈಗಾಗಲೇ ಜಾರಿಯಲ್ಲಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.……….

ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಅರ್ಚನಾ ಭಟ್ ಅವರು 2023ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL)ಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ನೇತೃತ್ವದ ಪೀಠವು ಈ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಮಕ್ಕಳಿಗೆ ಹೆಲ್ಮೆಟ್ ಧರಿಸಿಸದೇ ಬೈಕ್‌ನಲ್ಲಿ ಕರೆದೊಯ್ದರೆ ₹1,000 ದಂಡ ಮತ್ತು 3 ತಿಂಗಳ ಡ್ರೈವಿಂಗ್ ಲೈಸೆನ್ಸ್ ಅಮಾನತು ಆಗುತ್ತದೆ ಎಂದು ಮೋಟಾರು ವಾಹನ ಕಾಯ್ದೆ ಸೆಕ್ಷನ್ 194D ಅಡಿ ಸ್ಪಷ್ಟವಾಗಿದೆ.

ಅಲ್ಲದೇ, 9 ತಿಂಗಳು ಇಂದ 4 ವರ್ಷದೊಳಗಿನ ಮಕ್ಕಳನ್ನು ಹಿಂಬದಿ ಕೂರಿಸಿ ಕರೆದೊಯ್ಯುವಾಗ ಚಾಲಕನು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಮತ್ತು ಬೈಕ್‌ನ ವೇಗ ಗಂಟೆಗೆ 40 ಕಿ.ಮೀ.ಗಿಂತ ಹೆಚ್ಚಾಗಬಾರದು. ಈ ಮಕ್ಕಳಿಗೆ ವಿಶೇಷ “ಕ್ರ್ಯಾಶ್ ಗಾರ್ಡ್” ಮತ್ತು ಸುರಕ್ಷಾ ಬೆಲ್ಟ್/ಹಾರ್ನೆಸ್ ಜೊತೆಗೆ ಸೀಟ್ ಇರಬೇಕು. ಈ ಸುರಕ್ಷಾ ಸಾಧನಗಳು ISI ಮಾರ್ಕ್ ಹೊಂದಿರಬೇಕು ಮತ್ತು ಮಾರುಕಟ್ಟೆಯಲ್ಲಿ ಸುಲಭವಾಗಿ ದೊರೆಯುವಂತೆ ಸರ್ಕಾರ ಖಾತ್ರಿ ಮಾಡಬೇಕು ಎಂದು ಕೋರ್ಟ್ ಆದೇಶಿಸಿದೆ.

ಈ ನಿಯಮಗಳು ಇನ್ನೂ ಸಂಪೂರ್ಣವಾಗಿ ಜಾರಿಯಲ್ಲಿಲ್ಲ ಎಂಬುದನ್ನು ಗಮನಿಸಿದ ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರಗಳು ಮತ್ತು ಸಾರಿಗೆ ಇಲಾಖೆಗೆ ತಕ್ಷಣ ಕ್ರಮ ಕೈಗೊಳ್ಳಲು 6 ತಿಂಗಳ ಕಾಲಾವಕಾಶ ನೀಡಿತ್ತು. ಆದರೆ ಈಗ ಆ ಅವಧಿ ಮುಗಿದಿದ್ದು, ಎಲ್ಲ ರಾಜ್ಯಗಳಲ್ಲೂ ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಆದೇಶಿಸಲಾಗಿದೆ. ಮಕ್ಕಳಿಗೆ ಸೂಕ್ತ ಗಾತ್ರದ ಹೆಲ್ಮೆಟ್, ಸುರಕ್ಷಾ ಜಾಕೆಟ್, ಕ್ರ್ಯಾಶ್ ಗಾರ್ಡ್ ಲಭ್ಯವಿರುವಂತೆ ತಯಾರಕರು ಮತ್ತು ಮಾರಾಟಗಾರರಿಗೆ ಸೂಚನೆ ನೀಡಲಾಗಿದೆ.

ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಕರ್ನಾಟಕದ ಎಲ್ಲ ನಗರಗಳಲ್ಲಿ ಈ ನಿಯಮವನ್ನು ಶೀಘ್ರದಲ್ಲೇ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಸಾರಿಗೆ ಇಲಾಖೆ ತಿಳಿಸಿದೆ. ಪೋಷಕರು ಈ ನಿಯಮವನ್ನು ಗಂಭೀರವಾಗಿ ಪರಿಗಣಿಸಿ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಬೇಕು. ಒಂದು ಸಣ್ಣ ತಪ್ಪಿಗೆ ಮಗುವಿನ ಜೀವಕ್ಕೆ ಅಪಾಯ ಉಂಟಾಗಬಾರದು ಎಂಬುದೇ ಈ ಆದೇಶದ ಮೂಲ ಉದ್ದೇಶ.

This image has an empty alt attribute; its file name is WhatsApp-Image-2025-09-05-at-10.22.29-AM-3-1024x330.jpeg

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories