WhatsApp Image 2025 11 22 at 12.43.34 PM

‘ಎಲ್ಲಾ ರಾಜ್ಯ ಸರ್ಕಾರಿ ಪುರುಷ ನೌಕರರಿಗೆ ಸರ್ಕಾರದಿಂದ ’ 180 ದಿನ `ಶಿಶುಪಾಲನಾ ರಜೆ’ ಮಂಜೂರು ಮಹತ್ವದ ಆದೇಶ.!

ಒಂಟಿ ಪೋಷಕರಾಗಿರುವ ರಾಜ್ಯ ಸರ್ಕಾರಿ ಪುರುಷ ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯವನ್ನು ಮಂಜೂರು ಮಾಡುವ ಬಗ್ಗೆ ಸರ್ಕಾರ ಇದೀಗ ಮಹತ್ವದ ಆದೇಶವೊಂದನ್ನು ಹೊರಡಿಸಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಏನಿದೆ ರಾಜ್ಯ ಸರ್ಕಾರದ ಆದೇಶದಲ್ಲಿ?

ಮೇಲೆ ಓದಲಾದ ಸರ್ಕಾರಿ ಆದೇಶದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಅವರ ಇಡೀ ಸೇವಾವಧಿಯಲ್ಲಿ ಗರಿಷ್ಠ 6 ತಿಂಗಳವರೆಗೆ ಅಂದರೆ 180 ದಿನಗಳ ಶಿಶುಪಾಲನಾ ರಜೆಯನ್ನು ಮಂಜೂರು ಮಾಡಲು ಅವಕಾಶವನ್ನು ಕಲ್ಪಿಸಲಾಗಿರುತ್ತದೆ.

ಒಂಟಿ ಪೋಷಕರಾಗಿರುವ (single male parent) ಅವಿವಾಹಿತ/ ವಿವಾಹ-ವಿಚ್ಚೇದಿತ/ ವಿಧುರ ಪುರುಷ ರಾಜ್ಯ ಸರ್ಕಾರಿ ನೌಕರರಿಗೂ ಮಕ್ಕಳ ಆರೈಕೆಗಾಗಿ ಶಿಶುಪಾಲನಾ ರಜೆಯ ಅವಶ್ಯಕತೆ ಇರುತ್ತದೆಂದು ತಿಳಿಸಿ ಈ ರಜೆಯ ಸೌಲಭವನ್ನು ಅಂತಹ ಪುರುಷ ಸರ್ಕಾರಿ ನೌಕರರಿಗೂ ಸಹ ವಿಸ್ತರಿಸಬೇಕೆಂದು ಕೋರಿ ಪ್ರಸ್ತಾವನೆಗಳು ಸ್ವೀಕೃತವಾಗಿರುತ್ತವೆ. ಮೂಲತಃ ಶಿಶುಪಾಲನಾ ರಜೆಯ ಸೌಲಭ್ಯವನ್ನು ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಮಾತ್ರ ವಿಸ್ತರಿಸಿದ್ದಾಗ್ಯೂ ಏಕಪೋಷಕರಾಗಿರುವ ಪುರುಷ ಸರ್ಕಾರಿ ನೌಕರರಿಗೂ ಈ ಸೌಲಭ್ಯವನ್ನು ವಿಸ್ತರಿಸುವುದು ನ್ಯಾಯಸಮ್ಮತವಾಗುವುದನ್ನು ಪರಿಗಣಿಸಿ ಸರ್ಕಾರ ಶಿಶುಪಾಲನಾ ರಜೆಯ ಸೌಲಭ್ಯವನ್ನು ಕೆಲವು ಷರತ್ತುಗಳಿಗೊಳಪಟ್ಟು ಒಂಟಿ ಪೋಷಕರಾಗಿರುವ (single male parent) ಅವಿವಾಹಿತ/ವಿವಾಹ-ವಿಚ್ಚೇದಿತ/ವಿಧುರ ಸರ್ಕಾರಿ ಪುರುಷ ನೌಕರರಿಗೂ ಸಹ ವಿಸ್ತರಿಸಲು ತೀರ್ಮಾನಿಸಿದೆ. ಅದರಂತೆ, ಈ ಆದೇಶ.

ಸರ್ಕಾರಿ ಆದೇಶ ಸಂಖ್ಯೆ:ಆಇ 3(ಇ) ಸೇನಿಸೇ 2023, ಬೆಂಗಳೂರು,ದಿನಾಂಕ:9.6.2023

ಪ್ರಸ್ತಾವನೆಯಲ್ಲಿ ವಿವರಿಸಿರುವ ಕಾರಣಗಳ ಹಿನ್ನೆಲೆಯಲ್ಲಿ, ಸರ್ಕಾರವು ಒಂಟಿ ಪೋಷಕರಾಗಿರುವ (single male parent) ಅವಿವಾಹಿತ/ವಿವಾಹ-ವಿಚ್ಛೇದಿತ/ವಿಧುರ ಪುರುಷ ರಾಜ್ಯ ಸರ್ಕಾರಿ ನೌಕರರಿಗೂ ಅವರ ಇಡೀ ಸೇವಾವಧಿಯಲ್ಲಿ ಗರಿಷ್ಠ 6 ತಿಂಗಳ ಅವಧಿಗೆ ಅಂದರೆ ಒಟ್ಟು 180 ದಿನಗಳಿಗೆ ಮೀರದಂತೆ ಶಿಶುಪಾಲನಾ ರಜೆಯ ಸೌಲಭ್ಯವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮಂಜೂರು ಮಾಡಿದೆ. ರಜೆಯನ್ನು ಮಂಜೂರು ಮಾಡುವ ಸಕ್ಷಮ ಪ್ರಾಧಿಕಾರವು ದಿನಾಂಕ:21.06.2021 ರ ಸರ್ಕಾರಿ ಆದೇಶ ಸಂಖ್ಯೆ ಆಇ 4(ಇ) ಸೇನಿಸೇ 2021 ರಲ್ಲಿ ವಿಧಿಸಲಾಗಿರುವ ಷರತ್ತುಗಳನ್ನು ಸಂದರ್ಭಾನುಸಾರ ಅನ್ವಯಿಸಿಕೊಂಡು ಶಿಶುಪಾಲನಾ ರಜೆಯನ್ನು ಮಂಜೂರು ಮಾಡತಕ್ಕದ್ದು.

ಯಾವುದೇ ಸಂದರ್ಭದಲ್ಲಿ ಶಿಶುಪಾಲನಾ ರಜೆಯನ್ನು ಪಡೆದ ಅವಧಿಯಲ್ಲಿ ಸಂಬಂಧಿತ ಪುರುಷ ನೌಕರರು ವಿವಾಹ ಮಾಡಿಕೊಂಡಲ್ಲಿ ಆ ದಿನಾಂಕದಿಂದ ಶಿಶುಪಾಲನಾ ರಜೆಯು ತಾನಾಗಿಯೇ ರದ್ದುಗೊಳ್ಳುತ್ತದೆ.

WhatsApp Image 2025 11 22 at 12.32.56 PM
WhatsApp Image 2025 11 22 at 12.33.03 PM
WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories