ಕರ್ನಾಟಕದ ಸರ್ಕಾರಿ ಉದ್ಯೋಗಗಳಿಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಒಂದು ಗಂಡಸುದ್ದಿ. ರಾಜ್ಯದ 8 ವಿವಿಧ ಸರ್ಕಾರಿ ಇಲಾಖೆ ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ 708 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 25 ದಿನಾಂಕದ ವರೆಗೆ ವಿಸ್ತರಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ನೇಮಕಾತಿ ಪ್ರಕ್ರಿಯೆಯನ್ನು ನಡೆಸಿಕೊಡುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಯಾವ ಇಲಾಖೆಗಳಲ್ಲಿ ಎಷ್ಟು ಹುದ್ದೆಗಳು?
ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದ ಅಡಿಯಲ್ಲಿ ಖಾಲಿ ಇರುವ ಈ ಹುದ್ದೆಗಳ ವಿವರ ಈ ಕೆಳಗಿನಂತಿದೆ:
- ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ: 18 + 07 ಹುದ್ದೆಗಳು
- ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಕಾರ್ಖಾನೆ: 07 + 14 ಹುದ್ದೆಗಳು
- ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ: 40 + 4 ಹುದ್ದೆಗಳು
- ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ: 63 + 253 ಹುದ್ದೆಗಳು
- ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ: 19 ಹುದ್ದೆಗಳು
- ಕೃಷಿ ಮಾರಾಟ ಇಲಾಖೆ: 180 ಹುದ್ದೆಗಳು
- ತಾಂತ್ರಿಕ ಶಿಕ್ಷಣ ಇಲಾಖೆ: 50 + 43 ಹುದ್ದೆಗಳು
- ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ): 10 ಹುದ್ದೆಗಳು
ಮುಖ್ಯ ತಾರೀಕುಗಳು ಮತ್ತು ಅರ್ಜಿ ಪ್ರಕ್ರಿಯೆ
ಅಭ್ಯರ್ಥಿಗಳು ಈ ಕೆಳಗಿನ ತಾರೀಕುಗಳನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು:
- ಆನ್ಲೈನ್ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 25.11.2025
- ಆನ್ಲೈನ್ ಶುಲ್ಕ ಪಾವತಿಯ ಕೊನೆಯ ದಿನಾಂಕ: 26.11.2025
ಅರ್ಜಿ ಸಲ್ಲಿಸುವ ಮತ್ತು ಹೆಚ್ಚಿನ ಮಾಹಿತಿ ಪಡೆಯುವ ಪ್ರಕ್ರಿಯೆ ಸಂಪೂರ್ಣವಾಗಿ ಆನ್ಲೈನ್ ಆಗಿದೆ. ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ ವನ್ನು ಭೇಟಿ ಮಾಡಬೇಕು.
ಶೈಕ್ಷಣಿಕ ಅರ್ಹತೆ ಮತ್ತು ವಯೋ ಮಿತಿ
ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ಬೇಡಿಕೆಗಳು ವಿಭಿನ್ನವಾಗಿವೆ. ಕೆಲವು ಪ್ರಮುಖ ಹುದ್ದೆಗಳ ಅರ್ಹತೆಗಳು:
- ಪ್ರಥಮ ದರ್ಜೆ ಸಹಾಯಕ: ಪದವಿ
- ದ್ವಿತೀಯ ದರ್ಜೆ ಸಹಾಯಕ: PUC
- ಸಹಾಯಕ ಗ್ರಂಥಪಾಲಕ: M.Sc Library Science
- ಜೂನಿಯರ್ ಪ್ರೋಗ್ರಾಮರ್: Electronics/Computer Science Diploma ಅಥವಾ MCA
- ಸಹಾಯಕ ಇಂಜಿನಿಯರ್: Civil Engineering Diploma
ವಯೋ ಮಿತಿ:
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 38 ವರ್ಷಗಳು
- 2A, 2B, 3A, 3B ವರ್ಗದ ಅಭ್ಯರ್ಥಿಗಳಿಗೆ: 41 ವರ್ಷಗಳು
- SC, ST ಮತ್ತು ವರ್ಗ 1 ಅಭ್ಯರ್ಥಿಗಳಿಗೆ: 43 ವರ್ಷಗಳು
ಪರೀಕ್ಷಾ ವಿಧಾನ ಮತ್ತು ಮುಖ್ಯ ಸೂಚನೆಗಳು
- ಆಯ್ಕೆ ಪ್ರಕ್ರಿಯೆಯು OMR ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನಡೆಯುವುದು.
- ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನ ಇದೆ. ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕಗಳನ್ನು ಕಡಿತಗೊಳಿಸಲಾಗುವುದು.
- ಒಂದೇ ಪಠ್ಯಕ್ರಮದ ಹುದ್ದೆಗಳಿಗೆ ಒಂದೇ ಪರೀಕ್ಷೆ ನಡೆಸಲಾಗುವುದು.
- KEA ಮೆರಿಟ್ ಪಟ್ಟಿಯನ್ನು ಸಂಬಂಧಿತ ನೇಮಕಾತಿ ಪ್ರಾಧಿಕಾರಗಳಿಗೆ ಒದಗಿಸುತ್ತದೆ. ಅಂತಿಮ ನೇಮಕಾತಿ ಆದೇಶವನ್ನು ಆಯಾ ಇಲಾಖೆಗಳು ನೀಡುವುದು.
- ಎಲ್ಲಾ ಅಪ್ಡೇಟ್ಗಳಿಗಾಗಿ ಅಭ್ಯರ್ಥಿಗಳು KEA ವೆಬ್ಸೈಟ್ ಅನ್ನು ನಿಯಮಿತವಾಗಿ ಪರಿಶೀಲಿಸುವಂತೆ ಸೂಚಿಸಲಾಗಿದೆ.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಕೃಷ್ಣಸಾಗರಿ ಅವರು NeedsOfPublic.in ನ ‘ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ’ (Job Updates & Career) ವಿಭಾಗದ ಮುಖ್ಯಸ್ಥರಾಗಿದ್ದಾರೆ. ತುಮಕೂರಿನ ಸರ್ಕಾರಿ ನರ್ಸಿಂಗ್ ಕಾಲೇಜಿನಿಂದ B.Sc (Nursing) ಪದವಿ ಪಡೆದಿರುವ ಇವರು, ಸಾರ್ವಜನಿಕ ಜಾಗೃತಿ ಮತ್ತು ಮಾಹಿತಿ ನೀಡುವ ಆಸಕ್ತಿಯಿಂದಾಗಿ ಡಿಜಿಟಲ್ ಪತ್ರಿಕೋದ್ಯಮ ಕ್ಷೇತ್ರವನ್ನು ಆಯ್ದುಕೊಂಡಿದ್ದಾರೆ. ಡಿಜಿಟಲ್ ಮಾಧ್ಯಮ ರಂಗದಲ್ಲಿ 3 ವರ್ಷಗಳ ಅನುಭವ ಹೊಂದಿರುವ ಇವರು, ಸರ್ಕಾರಿ ಉದ್ಯೋಗದ ಅಧಿಸೂಚನೆಗಳು (Govt Job Notifications), ಖಾಸಗಿ ನೇಮಕಾತಿಗಳು ಮತ್ತು ಶೈಕ್ಷಣಿಕ ಅಪ್ಡೇಟ್ಗಳನ್ನು ಒದಗಿಸುವಲ್ಲಿ ಪರಿಣತಿ ಹೊಂದಿದ್ದಾರೆ. ನಿರುದ್ಯೋಗಿ ಯುವಕ-ಯುವತಿಯರಿಗೆ ಯಾವುದೇ ಗೊಂದಲವಿಲ್ಲದೆ, ಕೇವಲ ಅಧಿಕೃತ ಮೂಲಗಳಿಂದ ಪರಿಶೀಲಿಸಿದ (Verified) ನಿಖರ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವುದೇ ಇವರ ಬರವಣಿಗೆಯ ಶೈಲಿಯಾಗಿದೆ.


WhatsApp Group




