WhatsApp Image 2025 11 22 at 1.49.44 PM

BREAKING : ‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : 23ನೇ ಕಂತಿನ ಹಣ ಬಿಡುಗಡೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

WhatsApp Group Telegram Group

ಬೆಂಗಳೂರು: ರಾಜ್ಯ ಸರ್ಕಾರದ ಪ್ರಮುಖ ಯೋಜನೆಯಾದ ‘ಗೃಹಲಕ್ಷ್ಮಿ’ಯ ಫಲಾನುಭವಿಗಳಿಗೆ ಶುಭವಾರ್ತೆ. ಯೋಜನೆಯ 23ನೇ ಕಂತಿನ ಹಣವು ಇನ್ನೂ 1 ವಾರದೊಳಗೆ ಅವರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಂಟಿಯಾಗಿ ಆಯೋಜಿಸಿತ್ತು. ಈ ಸಂದರ್ಭದಲ್ಲಿ ICDS ಸುವರ್ಣ ಮಹೋತ್ಸವ, ‘ಅಕ್ಕ ಪಡೆ’ ಲೋಕಾರ್ಪಣೆ ಮತ್ತು ‘ಗೃಹಲಕ್ಷ್ಮಿ ಬ್ಯಾಂಕ್’ ಉದ್ಘಾಟನೆ ಕುರಿತು ಚರ್ಚಿಸಲಾಯಿತು ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ...

ಗೃಹಲಕ್ಷ್ಮಿ ಬ್ಯಾಂಕ್ ಯೋಜನೆಯ ಪ್ರಮುಖ ಅಂಶಗಳು:

ಸಚಿವೆಯವರು ಗೃಹಲಕ್ಷ್ಮಿ ಬ್ಯಾಂಕ್ ಯೋಮನೆಯ ವಿವರಗಳನ್ನೂ ಹಂಚಿಕೊಂಡರು. ಈ ಯೋಜನೆಯು ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ರೂಪರೇಖೆ ಸಿದ್ಧಪಡಿಸಲಾಗಿದೆ. ಪ್ರತಿಯೊಬ್ಬ ಮಹಿಳೆಯು ಕನಿಷ್ಠ 1,000 ರೂಪಾಯಿಗಳಿಂದ ಖಾತೆ ತೆರೆಯಬಹುದು. ನಂತರ, ಪ್ರತಿ ತಿಂಗಳು 200 ರೂಪಾಯಿಗಳನ್ನು ಉಳಿತಾಯ ಮಾಡಿದರೆ, 6 ತಿಂಗಳ ನಂತರ ಅವರಿಗೆ 30,000 ರೂಪಾಯಿಗಳಿಂದ 3 ಲಕ್ಷ ರೂಪಾಯಿಗಳವರೆಗೆ ರಾಷ್ಟ್ರೀಕೃತ ಬ್ಯಾಂಕುಗಳ ದರದಲ್ಲಿ ಅತಿ ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ ಒದಗಿಸಲಾಗುವುದು.

‘ಅಕ್ಕ ಪಡೆ’ ಯೋಜನೆ ನವೆಂಬರ್ 28ರಿಂದ:

ಮಹಿಳಾ ಸಬಲೀಕರಣ ಮತ್ತು ರಕ್ಷಣೆಗೆ ಸಂಬಂಧಿಸಿದ ಮತ್ತೊಂದು ಮಹತ್ವದ ಯೋಜನೆಯಾದ ‘ಅಕ್ಕ ಪಡೆ’ ಬಗ್ಗೆಯೂ ಸಚಿವೆಯವರು ತಿಳಿಸಿದರು. ಸಮಾಜದಲ್ಲಿ ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ಮತ್ತು ಶೋಷಣೆಯನ್ನು ತಡೆಗಟ್ಟುವ ಉದ್ದೇಶದಿಂದ ಈ ಯೋಜನೆಯನ್ನು ನವೆಂಬರ್ 28ರಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಾರಿಗೆ ತರಲಾಗುವುದು. ಪ್ರತಿ ‘ಅಕ್ಕ ಪಡೆ’ ಘಟಕದಲ್ಲಿ 6 ಮಹಿಳೆಯರು ಸೇವೆ ಸಲ್ಲಿಸಲಿದ್ದಾರೆ. ಯಾವುದೇ ರೀತಿಯ ತೊಂದರೆ ಅಥವಾ ಹಿಂಸೆಯನ್ನು ಎದುರಿಸುತ್ತಿರುವ ಮಹಿಳೆಯರು, QR ಕೋಡ್ ಅನ್ನು ಸ್ಕ್ಯಾನ್ ಮಾಡಿ ಅಥವಾ ನೇರವಾಗಿ ಫೋನ್ ನಂಬರ್ ಮೂಲಕ ‘ಅಕ್ಕ ಪಡೆ’ಯನ್ನು ಸಂಪರ್ಕಿಸಿ ತಕ್ಷಣದ ಸಹಾಯ ಪಡೆಯಬಹುದು.

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories