ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಕಡ್ಡಾಯವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06.12.2025 ರಂದು ಸಾಯಂಕಾಲ: 5.30 ಗಂಟೆಯವರೆಗೆ ನಿಗಧಿ ಪಡಿಸಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…….

ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು:-
1) ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (ನಿ.) ದ ವತಿಯಿಂದ ಈ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ
2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು.
2) ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು),
3) ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು ಹಾಗೂ ಆಧಾರ್ ಕಾರ್ಡ್ ಹೊಂದಿರಬೇಕು.
4) ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 55 ವರ್ಷಗಳನ್ನು ಮೀರಿರತಕ್ಕದ್ದಲ್ಲ.
5) ಒಂದು ಕುಟುಂಬದಲ್ಲಿ ಓರ್ವ ಸದಸ್ಯರನ್ನು ಮಾತ್ರ ಈ ಸೌಲಭ್ಯಕ್ಕೆ ಪರಿಗಣಿಸತಕ್ಕದ್ದು.
6) ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದಲ್ಲಿ ರೂ.98.000/- ಹಾಗೂ ನಗರ ಪ್ರದೇಶದಲ್ಲಿ ರೂ. 1,20.000/-ಗಳನ್ನು ಮೀರತಕ್ಕದ್ದಲ್ಲ.
7) ಅಂಗವಿಕಲ ಮಹಿಳೆಯರಿಗೆ ಶೇ.5 ರಷ್ಟು ಮೀಸಲಿರಿಸತಕ್ಕದ್ದು.
8) ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33 ರಷ್ಟು, ವಿಕಲಚೇತನರಿಗೆ ಶೇ.5 ರಷ್ಟು ಹಾಗೂ ತೃತೀಯ ಲಿಂಗಗಳಿಗೆ ಶೇ.1 ರಷ್ಟು ಅಂಗವಿಕಲ ಮಹಿಳೆಯರಿಗೆ ಶೇ.2 ರಷ್ಟನ್ನು ಮೀಸಲಿರಿಸುವುದು.
9) ವಿಧವೆಯರಿಗೆ, ಪರಿತ್ಯಕ್ತ ಮಹಿಳೆಯರಿಗೆ ಹೆಚ್.ಐ.ವಿ ಪೀಡಿತರಿಗೆ 35 ವರ್ಷ ವಯೋಮಿತಿ ಮೀರಿರತಕ್ಕ ಅವಿವಾಹಿತ ಮಹಿಳೆಯರಿಗೆ ಶೇ.2 ರಷ್ಟನ್ನು ಮೀಸಲಿರಿಸುವುದು.
ವಿಶೇಷ ಸೂಚನೆ:-
ಈ ಯೋಜನೆಗೆ ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್ಲೈನ್ ಮೂಲಕವೇ ಸಲ್ಲಿಸಬೇಕಾಗಿರುತ್ತದೆ. ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ಲೈನ್ನಲ್ಲಿ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವುದು, ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಈ ಯೋಜನೆಯಲ್ಲಿ ಒಂದು ಸಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು.
ಸಂಪರ್ಕ ವಿವರ: ನಿಗಮದ ಸಹಾಯವಾಣಿ: 8867537799/ ದೂ.ಸಂ: 080-29903994
(ಬೆಳಿಗ್ಗೆ: 10.00 ರಿಂದ ಸಂಜೆ: 5.30 ವರೆಗೆ ಸಂಪರ್ಕಿಸಬಹುದಾಗಿದೆ).
ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಛೇರಿ ವಿಳಾಸಗಳನ್ನು ಹಾಗೂ ಹೆಚ್ಚಿನ ವಿವರಗಳನ್ನು https://kmcdc.karnataka.gov.in ಇಲ್ಲಿ ತಿಳಿಯಬಹುದಾಗಿದೆ.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ (Senior Editor). ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಪದವಿ ಪಡೆದಿದ್ದರೂ, ಮಾಧ್ಯಮ ಕ್ಷೇತ್ರದ ಮೇಲಿರುವ ಅತೀವ ಆಸಕ್ತಿಯಿಂದಾಗಿ 2019 ರಲ್ಲಿ ಡಿಜಿಟಲ್ ಜಗತ್ತಿಗೆ ಕಾಲಿಟ್ಟರು. ಇವರು ಆರಂಭಿಸಿದ “Suddi No.1 Kannada” ಯೂಟ್ಯೂಬ್ ಚಾನೆಲ್ ಪ್ರಸ್ತುತ 300K ಗೂ ಹೆಚ್ಚು ಸಬ್ಸ್ಕ್ರೈಬರ್ಗಳನ್ನು ಹೊಂದುವ ಮೂಲಕ ಜನಪ್ರಿಯವಾಗಿದೆ. ಡಿಜಿಟಲ್ ಮಾಧ್ಯಮದಲ್ಲಿ ಉತ್ತಮ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ಸರಳವಾಗಿ ವಿಶ್ಲೇಷಿಸಿ, ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತಲುಪಿಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು ಮತ್ತು ನಿಖರ ಮಾಹಿತಿ ನೀಡುವ ವಿಡಿಯೋ ಕಂಟೆಂಟ್ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವುದು ಇವರ ಬರವಣಿಗೆಯ ವಿಶಿಷ್ಟ ಶೈಲಿಯಾಗಿದೆ.


WhatsApp Group





Leave a Reply