ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ತಿಳಿಸುವುದೇನೆಂದರೆ, ಹೊಸದಾಗಿ ಪಡೆತರ ಚೀಟಿ (Ration Card)ಗಾಗಿ ಕೋರಿ ಅರ್ಜಿ ಸಲ್ಲಿದವರಿಗೆ ಶೀಘ್ರದಲ್ಲಿ ಪಡೆತರ ಚೀಟಿಯನ್ನು ವಿತರಣೆ ಮಾಡಲಾಗುವುದು. ಇದರ ಕುರಿತು ಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಶೀಘ್ರದಲ್ಲಿ ಹೊಸ ಪಡಿತರ ಚೀಟಿ ವಿತರಣೆ:
ಹೊಸ ಪಡೆತರ ಚೀಟಿ (Ration Card)ಗಾಗಿ ಕೋರಿ 2.95 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ, ಅರ್ಜಿಗಳನ್ನು ಪರಿಶೀಲಿಸಿ ಶೀಘ್ರದಲ್ಲಿ ಅರ್ಹರಿಗೆ ಪಡಿತರ ಚೀಟಿ ಕೈ ಸೇರಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆಗಳ ಸಚಿವ ಕೆ.ಎಚ್ ಮುನಿಯಪ್ಪ (K.H Muniyappa) ಸ್ಪಷ್ಟನೆ ನೀಡಿದ್ದಾರೆ.
ಚುನಾವಣೆ ಕಾರಣದಿಂದಾಗಿ ಹೊಸ ಪಡಿತರ ಚೀಟಿ ವಿತರಣೆ ಕಾರ್ಯ ಸ್ಥಗಿತಗೊಂಡಿದ್ದು, ಜುಲೈ ಅಂತ್ಯಕ್ಕೆ ಒಟ್ಟು 2,95,986 ಅರ್ಜಿ ಬಾಕಿ ಉಳಿದಿವೆ. ಈ ಅರ್ಜಿದಾರರ ಸ್ಥಳ ಪರಿಶೀಲಿಸಲಾಗುವುದು. ಬಳಿಕ ಅರ್ಹ ಫಲಾನುಭವಿಗಳ ಮಾಹಿತಿಯನ್ನು ಜಿಲ್ಲೆಗಳಿಂದ ಪಡೆದು ನಂತರ ಆರ್ಥಿಕ ಇಲಾಖೆಯಿಂದ ಅನುಮತಿ ಪಡೆದು ಹೊಸ ಕಾರ್ಡ್ ವಿತರಣೆಗೆ ಕ್ರಮ ವಹಿಸಲಾಗುವುದು. ತುರ್ತು ವೈದ್ಯಕೀಯ ಕಾರಣಗಳಿಗೆ ಹೊಸ ಪಡಿತರ ಚೀಟಿ ವಿತರಣೆಗೆ ಅನುಮತಿ ನೀಡಲಾಗುವುದು ಎಂದು ಇತ್ತೀಚಿಗೆ ನಡೆದ ಸುದ್ದಿಗೋಷ್ಠಿಯಲ್ಲಿ(News conference) ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಮಾತನಾಡಿದ್ದಾರೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಇಂಥವರ ಬಿಪಿಎಲ್ ಕಾರ್ಡ್ ರದ್ದಾಗಲಿದೆ :
ಅನರ್ಹರು ಬಿಪಿಎಲ್ ಕಾರ್ಡ್(BPL card)ಪಡೆದಿದ್ದರೆ ಅಂತಹವರ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇವು ಪತ್ತೆಯಾದರೆ ಅವುಗಳನ್ನು ರದ್ದುಪಡಿಸಲಾಗುವುದು. ಇದರ ಜೊತೆಗೆ, ಪಡಿತರ ಅಕ್ಕಿ ದುರುಪಯೋಗವಾದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತೇವೆ. ಇಂತಹ ದೂರುಗಳು ಬಂದ ಕಡೆ ತನಿಖೆ ಮಾಡಿಸುತ್ತೇವೆ ಎಂದು ತಮ್ಮ ಮಾತಿನಲ್ಲಿ ಕೆ.ಎಚ್. ಮುನಿಯಪ್ಪ ಅವರು ಸೇರಿಸಿದ್ದಾರೆ.
ಇದನ್ನೂ ಓದಿ – OnePlus Offers – ಒನ್‌ಪ್ಲಸ್ ಕಡೆಯಿಂದ ದೀಪಾವಳಿ ಆಫರ್ ಘೋಷಣೆ, ಸಂಪೂರ್ಣ ವಿವರ ಇಲ್ಲಿದೆ
2013 ರಲ್ಲಿ ಆಹಾರ ಭದ್ರತೆ ಕಾಯ್ದೆಯನ್ನು ಯುಪಿಎ(UPA) ಸರ್ಕಾರವು ಅನ್ನಭಾಗ್ಯ ಯೋಜನೆ(Annabhagya yojana)ಯನ್ನು ಜಾರಿಗೆ ತಂದಿತ್ತು. ಈಗ ಕೇಂದ್ರ ಸರ್ಕಾರ(BJP) ಈ ಯೋಜನೆಯನ್ನು ಮುನ್ನಡೆಸುತ್ತಿದೆ. ರಾಜ್ಯ ಸರಕಾರವು ತನ್ನ ಗ್ಯಾರಂಟಿ ಯೋಜನೆಯಲ್ಲಿ ತಿಳಿಸಿರುವ ಪ್ರಕಾರ ಪ್ರತಿ ರೇಷನ್ ಕಾರ್ಡ್ ಹೊಂದಿದವರಿಗೆ 10 ಕೆಜಿ ಅಕ್ಕಿಯನ್ನು ನೀಡಲಾಗುವುದು ಎಂದು ಭರವಸೆ ನೀಡಿತ್ತು. ಈ ಕಾರ್ಯಕ್ಕಾಗಿಯೇ ರಾಜ್ಯ ಸರ್ಕಾರವು(state government) ಹೆಚ್ಚಿನ 5 ಕೆಜಿ ಅಕ್ಕಿಯನ್ನು ಕೊಡಿ ಎಂದು ಕೇಂದ್ರ ಸರ್ಕಾರಕ್ಕೆ ಮನವೀ ಮಾಡಿಕೊಂಡಿತ್ತು. ಆದರೆ ಕೇಂದ್ರ ಸರಕಾರವು ರಾಜ್ಯ ಸರ್ಕಾರದ ಈ ಮನವೀಗೆ ಸ್ವೀಕೃತಿ ನೀಡಲಿಲ್ಲ, ಅಕ್ಕಿಯನ್ನು ಒದಗಿಸಲಿಲ್ಲ. ಈ ವಿಚಾರದಲ್ಲಿ ಕೇಂದ್ರ ಸರಕಾರ ರಾಜಕೀಯ ಮಾಡಿದೆ ಎಂದು ಸಚಿವರು ಟೀಕಿಸಿದ್ದಾರೆ.
ಈ ಹಿನ್ನಲೆಯಲ್ಲಿ, ಆಂಧ್ರ ಪ್ರದೇಶ, ತೆಲಂಗಾಣ, ಛತ್ತೀಸ್ಗಢ ಮೊದಲಾದ ರಾಜ್ಯಗಳಲ್ಲಿ ಅಕ್ಕಿ ಹೆಚ್ಚಾಗಿ ಬೆಳೆಯುವುದರಿಂದ ಅಲ್ಲಿ ಹಣಕೊಟ್ಟು ಅಕ್ಕಿಯನ್ನು ಪಡೆಯಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ. ಸದ್ಯ 10 ಕೆಜಿ ಯ ಬದಲಾಗಿ, ಸರ್ಕಾರವು ಪಡೆತರ ವಿತಕರಿಗೆ 5 ಕೆಜಿ ಅಕ್ಕಿ ಕಮಿಷನ್ (commission) ಹಾಗೂ ಇನ್ನೂಳಿದ 5 ಕೆಜಿ ಅಕ್ಕಿಯ ಬದಲಾಗಿ ಹಣವನ್ನು ಒದಗಿಸುತ್ತಿದೆ. ಈ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತಿದೆ. ಬೇಕಾಗುವಷ್ಟು ಅಕ್ಕಿ ಸಿಕ್ಕ ತಕ್ಷಣ ಹಣ ಕೊಡುವುದನ್ನು ನಿಲ್ಲಿಸಿ, ಫಲಾನುಭವಿಗಳಿಗೆ ಅಕ್ಕಿಯನ್ನು ಕೊಡಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ – Free Coaching – ಬ್ಯಾಂಕಿಂಗ್, UPSC, KAS ಪರೀಕ್ಷೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ