WhatsApp Image 2025 11 26 at 3.29.04 PM

BIG BREAKING: ಮುರುಘಾ ಶ್ರೀಗೆ ಬಿಗ್ ರಿಲೀಫ್ : ಮೊದಲ ಪೋಕ್ಸೋ ಕೇಸ್ ಖುಲಾಸೆಗೊಳಿಸಿ ಕೋರ್ಟ್ ಮಹತ್ವದ ತೀರ್ಪು.!

Categories:
WhatsApp Group Telegram Group

ಚಿತ್ರದುರ್ಗ : ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಫೋಕ್ಸೋ ಕೇಸ್​ನ ವಾದ-ಪ್ರತಿವಾದ ಇದೀಗ ಮುಕ್ತಾಯವಾಗಿದ್ದು, ಪ್ರಕರಣದ ಮೊದಲ ಎಫ್ಐಆರ್ ಸಂಬಂಧ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ ಮುರುಘಾ  ಶ್ರೀಗಳ ಕೇಸ್ ಖುಲಾಸೆಗೊಳಿಸಿ ಕೋರ್ಟ್ ಆದೇಶವನ್ನು ಹೊರಡಿಸಿದೆ.

ಈ ಹಿಂದಿನ ವಿಚಾರಣೆ ವೇಳೆ ಶ್ರೀಗಳ ಪರವಾಗಿ ಕೋರ್ಟ್​ನಲ್ಲಿ ಖ್ಯಾತ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದರು. ಸ್ವಾಮೀಜಿ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು ಎಂದು ವಾದಿಸಿದ್ದಾರೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ ನ್ಯಾಯಾಲಯದಲ್ಲಿ ಕೇಸ್​ನ ವಿಚಾರಣೆ ನಡೆಸಲಾಗಿತ್ತು

ಪ್ರಕರಣದ ವಿವರಣೆ?

ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ 2022ರ ಆ.26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದ್ದು, ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಂದ ಈ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ಕೇಸ್ ದಾಖಲಾಗಿತ್ತು.

ಅದೇ ವರ್ಷ ಆ.27ರಂದು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆಯಾಗಿದ್ದು, 2022ರ ಸೆ.01 ರಂದು ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ ಬಂಧನಕ್ಕೊಳಗಾಗಿದ್ದರು. ಬಳಿಕ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಮುರುಘಾಶ್ರೀ ವಿರುದ್ಧ 2022ರ ಅ.13 ರಂದು ಮಠದ ಅಡುಗೆ ಸಹಾಯಕಿಯಿಂದ ಮತ್ತೊಂದು ದೂರು ದಾಖಲಾಗಿತ್ತು. ಆ ಕೇಸಲ್ಲಿ ತನ್ನಿಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆಯೂ ಲೈಂಗಿಕ ಕಿರುಕುಳ ನೀಡಿರುವುದಾಗಿಯೂ ಕೂಡಾ ಉಲ್ಲೇಖಿಸಿದ್ದರು.

ಚಿತ್ರದುರ್ಗ ಗ್ರಾಮಾಂತರ ಪೊಲೀಸರ ವರದಿ

ಈ ವೇಳೆ ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ, ಎ6 ಮುರುಘಾಶ್ರೀ ಸಹಾಯಕ ಮಹಾಲಿಂಗ, ಎ7 ಅಡುಗೆಭಟ್ಟ ಕರಿಬಸಪ್ಪ ವಿರುದ್ದ ಕೇಸ್ ದಾಖಲಾಗಿದ್ದು, ಸಂಪೂರ್ಣ ತನಿಖೆ ನಡೆಸಿದ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಹಾಗೂ ಚಿತ್ರದುರ್ಗ ಡಿವೈಎಸ್ಪಿ ಅನಿಲ್ ಕುಮಾರ್ ನೇತೃತ್ವದ ತಂಡವು 2022ರ ಅ.27 ರಂದು 694 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಅದರಲ್ಲಿ 347 ಪುಟಗಳ ಎ ಮತ್ತು ಬಿ ಎಂದು ಎರಡು ಸೆಟ್ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರ ಚಾರ್ಜ್‌ಶೀಟ್‌ ಸಲ್ಲಿಕೆ

ಇನ್ನೂ 2023ರ ಜ.10ಕ್ಕೆ ದಾಖಲಾದ 2ನೇ ಪೋಕ್ಸೊ ಪ್ರಕರಣದಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು 761 ಪುಟಗಳ ಚಾರ್ಜ್‌ಶೀಟ್‌ನ್ನು ಸಲ್ಲಿಸಿದ್ದರು. ಇಷ್ಟೆಲ್ಲ ಸಾಕ್ಷ್ಯಾಧಾರ ಹಾಗೂ ಚಾರ್ಜ್‌ಶೀಟ್‌ ಮೇಲೆ ಚಿತ್ರದುರ್ಗ ನ್ಯಾಯಾಲಯ ವಿಚಾರಣೆ ನಡೆಸಿತ್ತು. ವಿಚಾರಣೆ ನಡಯುವಾಗಲೇ 2023ರ ನ.8 ರಂದು ಹೈಕೋರ್ಟ್ ನಿಂದ ಮುರುಘಾಶ್ರೀಗೆ ಷರತ್ತುಬದ್ಧ ಜಾಮೀನು ಮಂಜೂರಾಗಿತ್ತು. ನ.16ರಿಂದು ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆಯಾಗಿದ್ದರು.

ನ್ಯಾಯಾಲಯದ ತೀರ್ಪು

ಇದಾದ ಬಳಿಕ ಈಗ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ ಮುರುಘಾ  ಶ್ರೀಗಳ ಕೇಸ್ ಖುಲಾಸೆಗೊಳಿಸಿ ಕೋರ್ಟ್ ಆದೇಶವನ್ನು ಹೊರಡಿಸಿದೆ.

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories