ಬಜಾಜ್ ಚೇತಕ್ (Bajaj Chetak) ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ದಿನದಿಂದ ದಿನಕ್ಕೆ ಇದರ ಬೇಡಿಕೆಯೂ ಹೆಚ್ಚಾಗುತ್ತಿದ್ದು, ಗ್ರಾಹಕರು ನಾ ಮುಂದು – ತಾ ಮುಂದು ಎಂದು ಇದನ್ನು ಖರೀದಿಸುತ್ತಿದ್ದಾರೆ. ಕಳೆದ ಅಕ್ಟೋಬರ್ ತಿಂಗಳಲ್ಲಿ ‘ಚೇತಕ್’ ಭಾರೀ ಸಂಖ್ಯೆಯಲ್ಲಿ ಮಾರಾಟ ಕಂಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಒಟ್ಟು 34,900 ಯುನಿಟ್ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2024 ರ ಇದೇ ಅವಧಿಯಲ್ಲಿ 30,644 ಯುನಿಟ್ಗಳನ್ನು ಮಾರಾಟ ಮಾಡಲಾಗಿತ್ತು. ಈ ಅಂಕಿಅಂಶವನ್ನು ಲೆಕ್ಕ ಹಾಕಿದಾಗ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 13.89% ರಷ್ಟು ಪ್ರಗತಿ ಸಾಧಿಸಿದೆ.
ಮಾರಾಟ ಹೆಚ್ಚಳಕ್ಕೆ ಪ್ರಮುಖ ಕಾರಣಗಳು
ಇದೇ ಅಕ್ಟೋಬರ್ನಲ್ಲಿ ‘ಬಜಾಜ್ ಚೇತಕ್’ ಮಾರಾಟ ಸಂಖ್ಯೆ ಹೆಚ್ಚಾಗಲು ಹಲವಾರು ಕಾರಣಗಳಿವೆ. ಇತರ ಕಂಪನಿಯ ದ್ವಿಚಕ್ರ ವಾಹನಗಳಿಗೆ (Two Wheelers) ಹೋಲಿಸಿದರೆ, ಈ ಎಲೆಕ್ಟ್ರಿಕ್ ಸ್ಕೂಟರ್ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದೆ. ಇದರ ಜೊತೆಗೆ, ಇದು ನಿರ್ಮಾಣ ಗುಣಮಟ್ಟದಲ್ಲೂ ಹೆಸರುವಾಗಿದೆ. ಅಂದರೆ, ‘ಚೇತಕ್’ನ ಬಾಡಿಯನ್ನು ಸ್ಟೀಲ್ನಿಂದ (Steel) ಮಾಡಲಾಗಿದೆ. ಹೀಗಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇದನ್ನು ಖರೀದಿಸಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.
ದೇಶೀಯ ಮಾರುಕಟ್ಟೆಯಲ್ಲಿ ‘ಬಜಾಜ್ ಚೇತಕ್’ ವಿವಿಧ ರೂಪಾಂತರಗಳ (Variants) ಆಯ್ಕೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ಅವುಗಳೆಂದರೆ, ಚೇತಕ್ 3001, ಚೇತಕ್ 3501, ಚೇತಕ್ 3502 ಮತ್ತು ಚೇತಕ್ 3503. ಇವುಗಳು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಮತ್ತು ಹಲವು ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ.
ಬಜಾಜ್ ಚೇತಕ್ 3001

ಈ ಎಲೆಕ್ಟ್ರಿಕ್ ಸ್ಕೂಟರ್ನ ಎಕ್ಸ್-ಶೋರೂಂ ದರ ₹1.02 ಲಕ್ಷ. ಇದು ನೋಡಲು ಚೆನ್ನಾಗಿದೆ ಮತ್ತು ಉತ್ತಮವಾದ LED ಹೆಡ್ಲೈಟ್ ಹಾಗೂ ಟೈಲ್ ಲ್ಯಾಂಪ್ಗಳನ್ನು ಹೊಂದಿದೆ. ಬ್ರೂಕ್ಲಿನ್ ಬ್ಲ್ಯಾಕ್, ಆಜೂರ್ ಬ್ಲ್ಯೂ, ಸೈಬರ್ ವೈಟ್, ಲೈಮ್ ಯೆಲ್ಲೋ ಮತ್ತು ರೇಸಿಂಗ್ ರೆಡ್ ಎಂಬ ಬಣ್ಣಗಳಲ್ಲಿ ದೊರೆಯುತ್ತದೆ. ಹಾಗೆಯೇ ಇದು 1,355 mm ವೀಲ್ಬೇಸ್ನ್ನು ಒಳಗೊಂಡಿದೆ.
ಹೊಸ ‘ಚೇತಕ್ 3001’ ಸ್ಕೂಟರ್ 3 kWh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಪಡೆದಿದೆ. ಸಂಪೂರ್ಣ ಚಾರ್ಜ್ನಲ್ಲಿ 127 km ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿರುವ ಬ್ಯಾಟರಿ ಪ್ಯಾಕ್ ಕೇವಲ 3 ಗಂಟೆ 50 ನಿಮಿಷಗಳಲ್ಲಿ 0 ರಿಂದ 80% ಚಾರ್ಜ್ ಆಗಿಬಿಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್ಗಳನ್ನು ಪಡೆದಿದೆ.
ಬಜಾಜ್ ಚೇತಕ್ 3501

ಇದರ ಎಕ್ಸ್-ಶೋರೂಂ ಬೆಲೆ ₹1.22 ಲಕ್ಷ. ಇದು 3.5 kWh ಬ್ಯಾಟರಿ ಪ್ಯಾಕ್ ಪಡೆದಿದೆ. ಪೂರ್ತಿ ಚಾರ್ಜ್ನಲ್ಲಿ 153 km ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. TFT ಡಿಜಿಟಲ್ ಡಿಸ್ಪ್ಲೇ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್ ಬ್ರೇಕ್ಗಳನ್ನು ಹೊಂದಿದೆ.
ಬಜಾಜ್ ಚೇತಕ್ 3502

ಈ ಎಲೆಕ್ಟ್ರಿಕ್ ಸ್ಕೂಟರ್ನ ಎಕ್ಸ್-ಶೋರೂಂ ದರ ₹1.22 ಲಕ್ಷ. ಇದು 3.5 kWh ಬ್ಯಾಟರಿ ಪ್ಯಾಕ್ ಹೊಂದಿದೆ. ಭರ್ತಿ ಚಾರ್ಜ್ನಲ್ಲಿ 153 km ವರೆಗೆ ರೇಂಜ್ ನೀಡುತ್ತದೆ. ಕಲರ್ TFT ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಡಿಸ್ಕ್ ಬ್ರೇಕ್ಗಳನ್ನು ಪಡೆದಿದೆ.
ಬಜಾಜ್ ಚೇತಕ್ 3503

ಇದು ₹1.02 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 3.5 kWh ಬ್ಯಾಟರಿ ಪ್ಯಾಕ್ ಒಳಗೊಂಡಿದೆ. ಸಂಪೂರ್ಣ ಚಾರ್ಜ್ನಲ್ಲಿ 150 km ವರೆಗೆ ರೇಂಜ್ ನೀಡುತ್ತದೆ. LCD ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕಂಟ್ರೋಲ್ ಮತ್ತು ಮ್ಯೂಸಿಕ್ ಕಂಟ್ರೋಲ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗದಲ್ಲಿ (Front) ಡಿಸ್ಕ್ ಮತ್ತು ಹಿಂಭಾಗದಲ್ಲಿ (Rear) ಡ್ರಮ್ ಬ್ರೇಕ್ಗಳನ್ನು ಹೊಂದಿದೆ.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಕೃಷ್ಣಸಾಗರಿ ಅವರು NeedsOfPublic.in ನ ‘ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ’ (Job Updates & Career) ವಿಭಾಗದ ಮುಖ್ಯಸ್ಥರಾಗಿದ್ದಾರೆ. ತುಮಕೂರಿನ ಸರ್ಕಾರಿ ನರ್ಸಿಂಗ್ ಕಾಲೇಜಿನಿಂದ B.Sc (Nursing) ಪದವಿ ಪಡೆದಿರುವ ಇವರು, ಸಾರ್ವಜನಿಕ ಜಾಗೃತಿ ಮತ್ತು ಮಾಹಿತಿ ನೀಡುವ ಆಸಕ್ತಿಯಿಂದಾಗಿ ಡಿಜಿಟಲ್ ಪತ್ರಿಕೋದ್ಯಮ ಕ್ಷೇತ್ರವನ್ನು ಆಯ್ದುಕೊಂಡಿದ್ದಾರೆ. ಡಿಜಿಟಲ್ ಮಾಧ್ಯಮ ರಂಗದಲ್ಲಿ 3 ವರ್ಷಗಳ ಅನುಭವ ಹೊಂದಿರುವ ಇವರು, ಸರ್ಕಾರಿ ಉದ್ಯೋಗದ ಅಧಿಸೂಚನೆಗಳು (Govt Job Notifications), ಖಾಸಗಿ ನೇಮಕಾತಿಗಳು ಮತ್ತು ಶೈಕ್ಷಣಿಕ ಅಪ್ಡೇಟ್ಗಳನ್ನು ಒದಗಿಸುವಲ್ಲಿ ಪರಿಣತಿ ಹೊಂದಿದ್ದಾರೆ. ನಿರುದ್ಯೋಗಿ ಯುವಕ-ಯುವತಿಯರಿಗೆ ಯಾವುದೇ ಗೊಂದಲವಿಲ್ಲದೆ, ಕೇವಲ ಅಧಿಕೃತ ಮೂಲಗಳಿಂದ ಪರಿಶೀಲಿಸಿದ (Verified) ನಿಖರ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವುದೇ ಇವರ ಬರವಣಿಗೆಯ ಶೈಲಿಯಾಗಿದೆ.


WhatsApp Group




Leave a Reply