WhatsApp Image 2025 12 04 at 11.58.48 AM

25,000ರೂ. ವಿಶೇಷ ಪ್ರೋತ್ಸಾಹ ಧನ: B.Ed ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದಿಂದ ಭರ್ಜರಿ ಗಿಫ್ಟ್ ಅರ್ಜಿ ಆಹ್ವಾನ.!

WhatsApp Group Telegram Group

ಬೆಂಗಳೂರು: ರಾಜ್ಯದ ಅಲ್ಪಸಂಖ್ಯಾತ ಸಮುದಾಯದ B.Ed ವಿದ್ಯಾರ್ಥಿಗಳ ಶೈಕ್ಷಣಿಕ ಹೊರೆ ತಗ್ಗಿಸಲು ಕರ್ನಾಟಕ ಸರ್ಕಾರವು ಒಂದು ಪ್ರಮುಖ ಯೋಜನೆಯನ್ನು ಇದೀಗ ಆರಂಭಿಸಿದೆ. ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದ B.Ed ವಿದ್ಯಾರ್ಥಿಗಳಿಗೆ ರೂ. 25,000 ರಷ್ಟು ‘ವಿಶೇಷ ಪ್ರೋತ್ಸಾಹ ಧನ’ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಆರ್ಥಿಕ ಸಹಾಯವು 2025-26 ನೇ ಶೈಕ್ಷಣಿಕ ಸಾಲಿನಲ್ಲಿ ತಮ್ಮ ವಿಧ್ಯಾಭ್ಯಾಸವನ್ನು ಮುಂದುವರೆಸುತ್ತಿರುವ ವಿದ್ಯಾರ್ಥಿಗಳಿಗೆ ಲಭ್ಯವಿರುತ್ತದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲುಇಲ್ಲಿ ಕ್ಲಿಕ್ ಮಾಡಿ.

ಯಾರಿಗೆ ಅರ್ಹತೆ?

ಈ ಯೋಜನೆಯ ಪ್ರಯೋಜನ ಪಡೆಯಲು ಅರ್ಜಿದಾರರು ಕೆಲವು ಮಾನದಂಡಗಳನ್ನು ಪೂರೈಸಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು ಮತ್ತು ಮೇಲೆ ತಿಳಿಸಲಾದ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಒಂದಕ್ಕೆ ಸೇರಿರಬೇಕು. ಇದರ ಜೊತೆಗೆ, ವಿದ್ಯಾರ್ಥಿಯ ಪೋಷಕರ ವಾರ್ಷಿಕ ಪರಿವಾರ ಆದಾಯ ರೂ. 6 ಲಕ್ಷದಿಂದ (6,00,000) ಕಡಿಮೆ ಇರಬೇಕು. ಈ ಯೋಜನೆಯಡಿ, NCTE (ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಷನ್) ಮತ್ತು DSERT (ಡಿಪಾರ್ಟ್ಮೆಂಟ್ ಆಫ್ ಸ್ಟೇಟ್ ಎಜುಕೇಷನಲ್ ರಿಸರ್ಚ್ ಅಂಡ್ ಟ್ರೈನಿಂಗ್) ಸಂಸ್ಥೆಗಳಿಂದ 2025-26 ಸಾಲಿಗೆ ಮಾನ್ಯತೆ ಪಡೆದ ಸರ್ಕಾರಿ, ಅರೆ-ಸರ್ಕಾರಿ, ಅನುದಾನಿತ ಅಥವಾ ಖಾಸಗಿ ಶಿಕ್ಷಕ ತರಬೇತಿ ಕಾಲೇಜುಗಳಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೊನೆಯ ದಿನಾಂಕ

ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸಂಪೂರ್ಣ ಆನ್‌ಲೈನ್ ಆಗಿರುತ್ತದೆ. ಅರ್ಹ ವಿದ್ಯಾರ್ಥಿಯು ಎಲ್ಲಾ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ, ತನ್ನ ಸಂಬಂಧಿತ ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಣ ಪಡೆದುಕೊಂಡ ನಂತರ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 31, 2025 ಆಗಿದ್ದು, ಆ ದಿನ ಸಂಜೆ 5:30 ಗಂಟೆಗೆ ಮುಂಚಿತವಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸಲು ನೇರ ಲಿಂಕ್: https://sevasindhu.karnataka.gov.in/

ಮುಖ್ಯವಾದ ಮಾಹಿತಿ ಮತ್ತು ಮುನ್ನೆಚ್ಚರಿಕೆಗಳು

ಈ ಪ್ರೋತ್ಸಾಹ ಧನವನ್ನು ಮೆರಿಟ್ ಆಧಾರದ ಮೇಲೆ ಮತ್ತು ನಿಗದಿತ ಬಜೆಟ್ ಲಭ್ಯತೆಯನ್ನು ಅನುಸರಿಸಿ ನೀಡಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ಹಣವನ್ನು ನೇರವಾಗಿ ಬ್ಯಾಂಕ್ ಖಾತೆಯ ಮೂಲಕ ನೀಡಲಾಗುವುದು. ಆದ್ದರಿಂದ, ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆ ಆಧಾರ್ ಕಾರ್ಡ್ ಜೊತೆ ಲಿಂಕ್ ಆಗಿರುವುದು ಮತ್ತು NPCI ಮ್ಯಾಪಿಂಗ್ ಸಕ್ರಿಯವಾಗಿರುವುದನ್ನು ಖಚಿತಪಡಿಸಿಕೊಳ್ಳುವುದು ಅತ್ಯಗತ್ಯ. ಈ ಬಗ್ಗೆ ಹೆಚ್ಚಿನ ವಿವರಗಳು ಮತ್ತು ಅಧಿಕೃತ ಅಧಿಸೂಚನೆಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‌ಸೈಟ್ https://dom.karnataka.gov.in ನಲ್ಲಿ ಪರಿಶೀಲಿಸಬಹುದು.

ಸಹಾಯ ಮತ್ತು ಸಂಪರ್ಕ

ಯಾವುದೇ ಪ್ರಶ್ನೆಗಳು ಅಥವಾ ಸಹಾಯದ ಅವಶ್ಯಕತೆ ಇದ್ದಲ್ಲಿ, ವಿದ್ಯಾರ್ಥಿಗಳು ತಮ್ಮ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿ ಅಥವಾ ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು. ಹಾಸನ ಜಿಲ್ಲೆಯ ವಿದ್ಯಾರ್ಥಿಗಳು ನೇರವಾಗಿ ಈ ಕೆಳಗಿನ ವಿಳಾಸ ಮತ್ತು ದೂರವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು: *ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಕಚೇರಿ, ಆಕಾಶವಾಣಿ ಹಿಂಭಾಗ, ಸಾಲಗಾಮೆ ರಸ್ತೆ, ಹಾಸನ. ದೂರವಾಣಿ: 08172-268373 / 08172-267373.*

ಈ ಯೋಜನೆಯು ಭವಿಷ್ಯದ ಶಿಕ್ಷಕರಾಗಲಿರುವ ಅಲ್ಪಸಂಖ್ಯಾತ ಸಮುದಾಯದ ಯುವಕ ಯುವತಿಯರ ಶಿಕ್ಷಣದ ಹಾದಿಯನ್ನು ಸುಗಮಗೊಳಿಸುವ ಉದ್ದೇಶ ಹೊಂದಿದೆ.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories