WhatsApp Image 2025 12 10 at 1.25.52 PM

BPL ಕಾರ್ಡ್‌ದಾರರಿಗೆ ಸಿಹಿಸುದ್ದಿ: 10 ಲಕ್ಷ ಕಾರ್ಡ್ APLಗೆ ಶಿಫ್ಟ್; ಅರ್ಹರಿಗೆ ಹೊಸ ‘BPL ಕಾರ್ಡ್’ ವಿತರಣೆ ಸಚಿವ ಕೆ.ಹೆಚ್ ಮುನಿಯಪ್ಪ ಘೋಷಣೆ.!

WhatsApp Group Telegram Group

ಕರ್ನಾಟಕ ರಾಜ್ಯ ಸರ್ಕಾರವು ಜನಸಾಮಾನ್ಯರಿಗೆ ಮತ್ತೊಂದು ಮಹತ್ವದ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದೆ. ರಾಜ್ಯದಾದ್ಯಂತ ಅರ್ಹತೆ ಹೊಂದಿರುವ ಫಲಾನುಭವಿಗಳಿಗೆ ಶೀಘ್ರದಲ್ಲಿಯೇ ಹೊಸ ಬಿಪಿಎಲ್ (BPL) ಕಾರ್ಡ್‌ಗಳನ್ನು ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರು ಪ್ರಕಟಿಸಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರೆಯಲಿವೆ. ಜೊತೆಗೆ, ಅಭಿವೃದ್ಧಿ ಕಾರ್ಯಗಳಿಗೆ ಹಣಕಾಸಿನ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಪಡಿತರ ಚೀಟಿಗಳಲ್ಲಿ ಬದಲಾವಣೆ ಹಾಗೂ ಅಕ್ರಮ ತಡೆಗೆ ಕ್ರಮ

ಹೊಸ ಬಿಪಿಎಲ್ ಕಾರ್ಡ್‌ಗಳ ವಿತರಣೆಯೊಂದಿಗೆ, ಸುಮಾರು 10 ಲಕ್ಷ ಅನರ್ಹ ಪಡಿತರ ಚೀಟಿದಾರರನ್ನು ಎಪಿಎಲ್ (APL) ವಿಭಾಗಕ್ಕೆ ವರ್ಗಾಯಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು. ಈ ಮೂಲಕ ನಿಜವಾದ ಅಗತ್ಯವುಳ್ಳವರಿಗೆ ಸೌಲಭ್ಯಗಳು ತಲುಪುವಂತೆ ಸರ್ಕಾರ ಖಚಿತಪಡಿಸಿಕೊಳ್ಳಲು ಹೊರಟಿದೆ. ಹಿಂದೆ, ಎಪಿಎಲ್ ಕಾರ್ಡ್‌ದಾರರಿಗೆ 15 ಕೆಜಿ ಅಕ್ಕಿ ವಿತರಿಸಲಾಗುತ್ತಿತ್ತು. ಆದರೆ, ಫಲಾನುಭವಿಗಳಿಂದ ಬೇಡಿಕೆ ಕಡಿಮೆಯಾದ ಕಾರಣ ಅದನ್ನು ನಿಲ್ಲಿಸಲಾಗಿದೆ. ಬೇಡಿಕೆ ಮರಳಿ ಬಂದರೆ ಪುನಃ ವಿತರಣೆ ಆರಂಭಿಸಲಾಗುವುದು. ಅಲ್ಲದೆ, ಒಂದು ವರ್ಷದಿಂದ ನಿರಂತರವಾಗಿ ಅಕ್ಕಿ ಪಡೆಯದ ಪಡಿತರ ಚೀಟಿಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ಅವರು ತಿಳಿಸಿದರು.

ಅಕ್ರಮ ಅನ್ನಭಾಗ್ಯ ಅಕ್ಕಿ ಸಂಗ್ರಹ: 570 ಜನರ ಬಂಧನ

‘ಅನ್ನಭಾಗ್ಯ’ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸುವುದು ಮತ್ತು ಮಾರಾಟ ಮಾಡುವುದನ್ನು ತಡೆಯಲು ರಾಜ್ಯ ಸರ್ಕಾರವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಈ ಸಂಬಂಧ ರಾಜ್ಯದಾದ್ಯಂತ ಕಾರ್ಯಾಚರಣೆ ನಡೆಸಿ, 570 ಜನರನ್ನು ಬಂಧಿಸಲಾಗಿದೆ. ಈ ಕಾರ್ಯಾಚರಣೆಗಳಲ್ಲಿ ಒಟ್ಟು 29,603.15 ಕ್ವಿಂಟಾಲ್ ಅಕ್ರಮ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಜೊತೆಗೆ, ಅಕ್ರಮ ಸಾಗಣೆಗೆ ಬಳಸುತ್ತಿದ್ದ 314 ವಾಹನಗಳನ್ನು ಸಹ ಜಪ್ತಿ ಮಾಡಲಾಗಿದೆ ಎಂದು ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ಪ್ರಶ್ನೆಗೆ ಉತ್ತರಿಸುವ ಸಂದರ್ಭದಲ್ಲಿ ಸದನಕ್ಕೆ ತಿಳಿಸಿದರು.

ಈ ಅಕ್ರಮಗಳ ಹಿನ್ನೆಲೆಯಲ್ಲಿ, ಯಾದಗಿರಿ ಜಿಲ್ಲೆಯಲ್ಲಿ ಆಹಾರ ಇಲಾಖೆಯ ಕರ್ತವ್ಯ ನಿರ್ವಹಿಸುತ್ತಿದ್ದ ಅನ್ಯ ಇಲಾಖೆಯ ಅಧಿಕಾರಿಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ. ಹಾಗೆಯೇ, ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನಲ್ಲಿರುವ ಕೆ.ಎಫ್.ಸಿ.ಎಸ್.ಸಿ. (KFCSC) ಗೋದಾಮನ್ನು ಅಮಾನತುಗೊಳಿಸಲಾಗಿದೆ. ಅಕ್ರಮ ಪಡಿತರ ಅಕ್ಕಿ ಸಂಗ್ರಹ ಮತ್ತು ಮಾರಾಟಕ್ಕೆ ಸಂಪೂರ್ಣ ಕಡಿವಾಣ ಹಾಕಲು, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಕಾಲಕಾಲಕ್ಕೆ ಮೇಲ್ವಿಚಾರಣೆ ನಡೆಸುವಂತೆ ನಿರ್ದೇಶನ ನೀಡಲಾಗಿದೆ. ಅಗತ್ಯ ವಸ್ತುಗಳ ಕಾಯ್ದೆ 1955 ರ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆಗಳನ್ನು ಸಹ ದಾಖಲಿಸಲಾಗುತ್ತಿದೆ. ಪಡಿತರ ಅಕ್ಕಿಯನ್ನು ದುರ್ಬಳಕೆ ಮಾಡಿಕೊಂಡಿರುವ ಪಡಿತರ ಚೀಟಿದಾರರ ಕಾರ್ಡ್‌ಗಳನ್ನು ರದ್ದುಗೊಳಿಸಿ, ಅವರ ವಿರುದ್ಧ ನಿಯಮಾನುಸಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ ಎಂದು ಸಚಿವರು ವಿವರಿಸಿದರು. ಪಡಿತರ ವಿತರಣೆಯ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ನ್ಯಾಯಬೆಲೆ ಅಂಗಡಿ, ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಜಾಗೃತಿ ಸಮಿತಿಗಳನ್ನು ರಚಿಸಿ, ಪರಿಶೀಲನೆಯನ್ನು ಕೈಗೊಳ್ಳಲಾಗುತ್ತಿದೆ.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories