ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿ 946 ಅಂಗನವಾಡಿ ಗೌರವಧನ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಸಮಾಜದ ಕಲ್ಯಾಣಕ್ಕೆ ಮಹತ್ವದ ಪಾತ್ರ ವಹಿಸುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ತುಮಕೂರು ಜಿಲ್ಲೆಯಲ್ಲಿ ಸಿಹಿಸುದ್ದಿ ಪ್ರಕಟಗೊಂಡಿದೆ. ಮುಖ್ಯವಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಮಹಿಳೆಯರನ್ನು ಗುರಿಯಾಗಿಸಿಕೊಂಡು, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಒಟ್ಟು 946 ಗೌರವಧನ ಆಧಾರಿತ ಸೇವಾ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಪ್ರಕ್ರಿಯೆಯು ಜಿಲ್ಲೆಯ 11 ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡುವ ಮೂಲಕ ಮಕ್ಕಳ ಆರೈಕೆ ಮತ್ತು ಪೋಷಣಾ ಕಾರ್ಯಕ್ರಮಗಳಿಗೆ ಇನ್ನಷ್ಟು ಬಲ ತುಂಬಲು ಸಹಕಾರಿಯಾಗಲಿದೆ.
ಈ ನೇಮಕಾತಿಯಲ್ಲಿ 117 ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು ಮತ್ತು 829 ಅಂಗನವಾಡಿ ಸಹಾಯಕಿಯರ ಗೌರವಧನದ ಹುದ್ದೆಗಳು ಸೇರಿವೆ. ಈ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳು ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನೇಮಕಾತಿ ಪ್ರಕ್ರಿಯೆಯು ಪರಿಷ್ಕೃತ ಮಾರ್ಗಸೂಚಿಗಳ ಅನುಸಾರವಾಗಿ ನಡೆಯಲಿದ್ದು, ಇದಕ್ಕೆ ತುಮಕೂರು ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆಯಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹುದ್ದೆಗಳಿಗೆ ನಿಗದಿಪಡಿಸಿದ ಅರ್ಹತಾ ಮಾನದಂಡಗಳು, ಶೈಕ್ಷಣಿಕ ಹಿನ್ನೆಲೆ, ವಯೋಮಿತಿ ಮತ್ತು ಮೀಸಲಾತಿ ನಿಯಮಗಳನ್ನು ಆನ್‌ಲೈನ್ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿ, ನಿಬಂಧನೆಗಳ ಪ್ರಕಾರ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಈ ಮೂಲಕ ಗ್ರಾಮೀಣ ಭಾಗದ ಮಹಿಳೆಯರಿಗೆ ಉತ್ತಮ ಗೌರವಧನ ಸೇವಾ ಅವಕಾಶಗಳು ಲಭ್ಯವಾದಂತಾಗಿದೆ.
ಸೂಚನೆಗಳು:
- ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಆನ್‌ಲೈನ್(Online)ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು.
- ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ನೇಮಕಾತಿಯ ಮಾರ್ಗಸೂಚಿ/ನಿಬಂಧನೆಗಳನ್ನು ಸ್ಪಷ್ಟವಾಗಿ ಓದಿಕೊಂಡು ನೀಡಲಾಗಿರುವ ಸೂಚನೆಯಂತೆ ಅರ್ಜಿಗಳನ್ನು ಭರ್ತಿ ಮಾಡಿ ಅವಶ್ಯಕ ದೃಢಿಕೃತ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಸುವುದು ಹಾಗೂ ಡಿಜಿ ಲಾಕರ್ (Dig locker ) ಬಳಸಿ ಕೂಡ ಅರ್ಜಿ ಸಲ್ಲಿಸಬಹುದಾಗಿದೆ.
- ಆನ್‌ಲೈನ್ (Online) ಮೂಲಕವೇ ಎಲ್ಲಾ ಅಗತ್ಯ ದಾಖಲಾತಿಗಳನ್ನು ಸಲ್ಲಿಸುವುದು. ತದನಂತರ ಸಲ್ಲಿಸುವ ದಾಖಲಾತಿಗಳನ್ನು ಪರಿಗಣಿಸಲಾಗುವುದಿಲ್ಲ.
ಆನ್‌ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು:
- ಅರ್ಜಿ ನಿಗದಿತ ನಮೂನೆಯಲ್ಲಿ (ಆನ್‌ಲೈನ್)
- ಧೃಢೀಕೃತ ಜನನ ಪ್ರಮಾಣ ಪತ್ರ/ಜನ್ಮದಿನಾಂಕ ಇರುವ ಎಸ್.ಎಸ್.ಎಲ್.ಸಿ. ಅಂಕಪಟ್ಟಿ/ಜನ್ಮ ದಿನಾಂಕ ಇರುವ ಶಾಲಾ ಪ್ರಮಾಣ ಪತ್ರ,
- ನಿಗದಿತ ವಿದ್ಯಾರ್ಹತೆಯ ದೃಢೀಕೃತ ಅಂಕಪಟ್ಟಿ,
- ಅಭ್ಯರ್ಥಿಯು ಅದೇ ಗ್ರಾಮದಲ್ಲಿ (ನಗರ ಪ್ರದೇಶವಾಗಿದ್ದಲ್ಲಿ ಅದೇ ವಾರ್ಡ್‌ನಲ್ಲಿ) ವಾಸ್ತವ್ಯವಿರುವ ಬಗ್ಗೆ ತಹಶೀಲ್ದಾರರು/ಉಪ ತಹಶೀಲ್ದಾರರಿಂದ ಪಡೆದ ಮೂರು (03) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ.
- ಸ್ಥಳೀಯರು ಎಂಬುದನ್ನು ದೃಢೀಕರಿಸಲು ಪೂರಕ ದಾಖಲೆಗಳಾಗಿ ಆಧಾರ ಕಾರ್ಡ್, ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿಗಳನ್ನು ಪಡೆಯುವುದು. ಮದರೆ ತಾಂಡಾ ಹಾಗೂ ಹಾಡಿಗೆ ಸೇರಿದವರಾಗಿದ್ದರೆ ಸಂಬಂಧಿಸಿದ ವಾಸ್ತವ್ಯ ಪ್ರಮಾಣ ಪತ್ರ ಪಡೆದು ಸಲ್ಲಿಸುವುದು
- ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ(ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಾತ್ರ)
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವವರು ಅಂಗವಿಕಲರಾಗಿದ್ದಲ್ಲಿ ದೈಹಿಕ ಅಂಗವಿಕಲತೆ ಶೇ.40% ಮೀರದಂತೆ ಇರುವವರು ಅರ್ಜಿ ಸಲ್ಲಿಸಬಹುದು. ಅಂಗವಿಕಲತೆ ಪ್ರಮಾಣ ಪತ್ರ ಲಗತ್ತಿಸುವುದು. ನೇಮಕಾತಿ ಪ್ರಕ್ರಿಯೆಯಲ್ಲಿ ನಿಗಧಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳಿಗೆ ಅಂಗವಿಕಲರಿಗೆ+5 ಬೋನಸ್ ಅಂಕಗಳನ್ನು ನೀಡಲಾಗುತ್ತದೆ ಅಂಗವಿಕಲ ಅಭ್ಯರ್ಥಿಗಳು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಟ 19 ವರ್ಷದಿಂದ ಗರಿಷ್ಠ 45 ವರ್ಷದ ವಯೋಮಿತಿಯೊಳಗೆ ಇರತಕ್ಕದ್ದು.
- ಅಭ್ಯರ್ಥಿಯು ವಿಚ್ಚೇದಿತರಾಗಿದ್ದಲ್ಲಿ, ವಿಚ್ಚೇದನಾ ಪ್ರಮಾಣ ಪತ್ರ ಲಗತ್ತಿಸುವುದು. (ನ್ಯಾಯಾಲಯದಿಂದ ಪಡೆದಿರಬೇಕು) ನೇಮಕಾತಿ ಪ್ರಕ್ರಿಯೆಯಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳಿಗೆ ವಿಚ್ಛೇದಿತೆಯರಿಗೆ +5 ಬೋನಸ್ ಅಂಕಗಳನ್ನು ನೀಡಲಾಗುತ್ತದೆ.
- ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಅರ್ಜಿ ಸಲ್ಲಿಸಿದಲ್ಲಿ ಈ ಬಗ್ಗೆ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ ಸಲ್ಲಿಸುವುದು ನೇಮಕಾತಿ ಪ್ರಕ್ರಿಯೆಯಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳಿಗೆ ಮಾಜಿ ದೇವದಾಸಿಯರ ಮಕ್ಕಳಿಗೆ +5 ಬೋನಸ್ ಅಂಕಗಳನ್ನು ನೀಡಲಾಗುತ್ತದೆ
- ಅಭ್ಯರ್ಥಿಯು ಇಲಾಖೆಯ ಸುಧಾರಣಾ ಸಂಸ್ಥೆ/ ರಾಜ್ಯ ಮಹಿಳಾ ನಿಲಯಗಳ ನಿವಾಸಿಯಾಗಿದ್ದಲ್ಲಿ ಕನಿಷ್ಠ 3 ವರ್ಷ ಸಂಸ್ಥೆಯಲ್ಲಿರಬೇಕು ಹಾಗೂ ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ಪಡೆದ ನಿವಾಸಿ ಪ್ರಮಾಣ ಪತ್ರ ಲಗತ್ತಿಸುವುದು, ವಾಸಸ್ಥಳ ದೃಢೀಕರಣವನ್ನು ಸಲ್ಲಿಸಿರುವ ಆ ಜಿಲ್ಲೆಯಲ್ಲಿ ಎಲ್ಲಿಯಾದರೂ ಅರ್ಜಿ ಸಲ್ಲಿಸಬಹುದು.
- ಅಭ್ಯರ್ಥಿಯು ಯೋಜನಾ ನಿರಾಶ್ರಿತರಾಗಿದ್ದಲ್ಲಿ ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ ಸಲ್ಲಿಸುವುದು. ನೇಮಕಾತಿ ಪ್ರಕ್ರಿಯೆಯಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳಿಗೆ ಯೋಜನಾ ನಿರಾಶ್ರಿತರಿಗೆ +5 ಬೋನಸ್ ಅಂಕಗಳನ್ನು ನೀಡಲಾಗುತ್ತದೆ.
- ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ತಂತ್ರಾಂಶದಲ್ಲಿ ಅಳವಡಿಸಿರುವ ಅರ್ಜಿ ಸಲ್ಲಿಕೆಯ ಮಾರ್ಗಸೂಚಿಗಳನ್ನು ಡೌನ್ ಲೋಡ್ ಮಾಡಿಕೊಂಡು ಓದಿ ಅರ್ಥೈಸಿಕೊಂಡು ಅರ್ಜಿ ಸಲ್ಲಿಸುವುದು.
- ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗಳಿಗೆ ವಿಧವೆಯರು ಅರ್ಜಿ ಸಲ್ಲಿಸಿದಾಗ ಆಸಿಡ್ ದಾಳಿಗೆ ಒಳಗಾದವರು ಮತ್ತು ಇಲಾಖಾ ಸಂಸ್ಥೆಗಳ ನಿವಾಸಿಗಳನ್ನು ಹೊರತುಪಡಿಸಿ ಇತರ ಎಲ್ಲಾ ಸ್ವೀಕೃತ ಅರ್ಜಿಗಳನ್ನು ಪರಿಗಣಿಸದೇ ಮೂರನೇ ಆದ್ಯತೆ ಮೇರೆಗೆ ನೇರವಾಗಿ ವಿಧವೆಯರನ್ನೇ ಆಯ್ಕೆಗೆ ಪರಿಗಣಿಸಲಾಗುವುದು. ವಿಧವೆಯರು ಪತಿಯ ಮರಣ ಪ್ರಮಾಣ ಪತ್ರ ಅಥವಾ ವಿಧವಾ ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ಲಗತ್ತಿಸುವುದು. ಅರ್ಜಿ ಸಲ್ಲಿಸಿದ ನಂತರ ವಿಧವೆಯಾದಲ್ಲಿ ಪರಿಗಣಿಸಲಾಗುವುದಿಲ್ಲ.
- ವಿಧವೆಯರಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಗೆ (ವಿಧವೆಗೆ) ಪ್ರಥಮ ಆದ್ಯತೆ ನೀಡತಕ್ಕದ್ದು, ಈ ಬಗ್ಗೆ ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರ ಸಲ್ಲಿಸುವುದು.
- ವಿಧವೆಯರು ತಾವು ಪ್ರಸ್ತುತ ಎಲ್ಲಿ ವಾಸವಿರುವುದಾಗಿ, ವಾಸಸ್ಥಳ ದೃಢೀಕರಣವನ್ನು ಸಲ್ಲಿಸಿರುತ್ತಾರೆ. ಆ ಸ್ಥಳವನ್ನೇ ಅವರ ವಾಸಸ್ಥಳವೆಂದು ಪರಿಗಣಿಸಲಾಗುವುದು.
- ಒಂದೇ ಹುದ್ದೆಗೆ ಇಬ್ಬರು ವಿಧವೆಯರು ಅರ್ಜಿ ಸಲ್ಲಿಸಿದಲ್ಲಿ ಗರಿಷ್ಠ ಅಂಕ ಪಡೆದವರಿಗೆ ಪ್ರಥಮ ಆದ್ಯತೆ ನೀಡಲಾಗುವುದು.
ಅರ್ಜಿಗೆ ದಿನಾಂಕ: 10-12-2025 ರಿಂದ 09-01-2026 (ಸಂಜೆ 5.30 ರವರೆಗೆ)
ಅರ್ಜಿ ಸಲ್ಲಿಸಲು: https://karnemakaone.kar.nic.in/abcd/ ಭೇಟಿ ನೀಡಬಹುದಾಗಿದೆ.


ಈ ಮಾಹಿತಿಗಳನ್ನು ಓದಿ
- ರಾಜ್ಯದಲ್ಲಿ 24,300 ಸರ್ಕಾರಿ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್.! ಶಿಕ್ಷಣ ಇಲಾಖೆಯಲ್ಲೇ 79,000 ಹುದ್ದೆಗಳು ಖಾಲಿ! ಪಿಡಿಎಫ್ ಇಲ್ಲಿದೆ.
- Zilla Panchayat Recruitment : ಜಿಲ್ಲಾ ಪಂಚಾಯತ್ನಲ್ಲಿ ‘ಮ್ಯಾನೇಜರ್’ ಕೆಲಸ! ತಿಂಗಳಿಗೆ ₹30,000 ಸಂಬಳ – ಪರೀಕ್ಷೆ ಇಲ್ಲ.!
- BIGNEWS : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಯಲ್ಲಿ ವಿವಿಧ ಹುದ್ದೆಗಳ ನೇರ ನೇಮಕಾತಿ ಅರ್ಜಿ ಆಹ್ವಾನ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

Shivaraj is the Lead Editor at NeedsOfPublic.in with over 4 years of experience tracking Indian government schemes and educational updates. He specializes in simplifying complex notifications from the Central and State governments to help the public understand their benefits. Before joining NeedsOfPublic, Shivaraj worked as a Content Writer focusing on Civic issues. When he isn’t decoding the latest circulars, he enjoys reading about digital literacy.”
Follow Shivaraj on:


WhatsApp Group




