WhatsApp Image 2025 12 12 at 4.50.47 PM 1

BREAKING : ಏಪ್ರಿಲ್ 2026 ರಲ್ಲಿ ರಾಜ್ಯದ ಜಿಲ್ಲಾ, ತಾಲೂಕು, ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ | ಮಹತ್ವದ ತೀರ್ಮನ.!.!

Categories:
WhatsApp Group Telegram Group

ಬೆಂಗಳೂರು/ಬೆಳಗಾವಿ: ರಾಜ್ಯದಲ್ಲಿ ಬಹುನಿರೀಕ್ಷಿತ ಜಿಲ್ಲಾ ಪಂಚಾಯಿತಿ (ಜಿ.ಪಂ.), ತಾಲೂಕು ಪಂಚಾಯಿತಿ (ತಾ.ಪಂ.), ಮತ್ತು ಗ್ರಾಮ ಪಂಚಾಯಿತಿ (ಗ್ರಾ.ಪಂ.) ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತು ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಸುಮಾರು 6500ಕ್ಕೂ ಅಧಿಕ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಏಪ್ರಿಲ್ 2026 ರಲ್ಲಿ ಚುನಾವಣೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಕಳೆದ ನಾಲ್ಕು ವರ್ಷಗಳಿಂದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆದಿರಲಿಲ್ಲ. ಈ ಸಂಸ್ಥೆಗಳ ಅವಧಿ ಮುಗಿದು ಹಲವು ವರ್ಷಗಳೇ ಕಳೆದಿವೆ. ಜೊತೆಗೆ, ಅನೇಕ ಗ್ರಾಮ ಪಂಚಾಯಿತಿಗಳ ಆಡಳಿತ ಅವಧಿಯೂ ಸದ್ಯದಲ್ಲಿಯೇ ಕೊನೆಗೊಳ್ಳುತ್ತಿದೆ.

ಜಿ.ಪಂ. ಮತ್ತು ತಾ.ಪಂ. ಚುನಾವಣೆ ವಿಳಂಬವಾಗಿದ್ದ ಕುರಿತು ನ್ಯಾಯಾಲಯದಲ್ಲಿ ಪ್ರಕರಣಗಳಿದ್ದು, ಈ ಹಿನ್ನೆಲೆಯಲ್ಲಿ ಶೀಘ್ರವಾಗಿ ಚುನಾವಣೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮಾನ್ಯ ನ್ಯಾಯಾಲಯವು ಸೂಚನೆಯನ್ನೂ ನೀಡಿತ್ತು.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಬಗ್ಗೆ ಗಂಭೀರವಾಗಿ ಚರ್ಚಿಸಲಾಯಿತು. ಅದರಂತೆ, ರಾಜ್ಯದ ರಾಜಕೀಯ ಮತ್ತು ಆಡಳಿತಾತ್ಮಕ ದೃಷ್ಟಿಯಿಂದ ಮಹತ್ವದ ಹೆಜ್ಜೆಯನ್ನಿಟ್ಟ ಸರ್ಕಾರವು, ಏಪ್ರಿಲ್ 2026 ರಲ್ಲಿ ಚುನಾವಣೆ ನಡೆಸಲು ಸಂಪೂರ್ಣವಾಗಿ ಸಿದ್ಧತೆ ಮಾಡಿಕೊಳ್ಳಲು ತೀರ್ಮಾನಿಸಿದೆ.

ಈ ನಿರ್ಧಾರದಿಂದಾಗಿ ರಾಜ್ಯದ ಆರು ಸಾವಿರದ ಐನೂರಕ್ಕೂ ಹೆಚ್ಚು (6500+) ಸ್ಥಳೀಯ ಸಂಸ್ಥೆಗಳಾದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ನಗರಸಭೆ, ಮತ್ತು ಪುರಸಭೆಗಳಿಗೆ ಶೀಘ್ರದಲ್ಲೇ ಚುನಾಯಿತ ಪ್ರತಿನಿಧಿಗಳು ಸಿಗುವ ನಿರೀಕ್ಷೆ ಮೂಡಿದೆ.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories