ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಮಹಿಳೆಯರ ಸ್ವಯಂ ಉದ್ಯೋಗ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಉದ್ಯೋಗಿನಿ, ಚೇತನ, ಧನಶ್ರೀ ಹಾಗೂ ಲಿಂಗ ಅಲ್ಪಸಂಖ್ಯಾತ ಪುನರ್ವಸತಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮಹಿಳೆಯರು 2025 ಡಿಸೆಂಬರ್ 15 ರೊಳಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಗಳ ಮೂಲಕ ಸಾಲ, ಸಹಾಯಧನ ಮತ್ತು ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಉದ್ಯೋಗಿನಿ ಯೋಜನೆ – ಸ್ವಯಂ ಉದ್ಯೋಗಕ್ಕೆ ಬಂಡವಾಳ ಸಹಾಯ
ಮಹಿಳೆಯರು ಸ್ವತಃ ಉದ್ಯೋಗ ಆರಂಭಿಸಲು ಬ್ಯಾಂಕ್ ಸಾಲದೊಂದಿಗೆ ನಿಗಮದಿಂದ ಸಹಾಯಧನ ನೀಡಲಾಗುತ್ತದೆ. ವಯೋಮಿತಿ 18 ರಿಂದ 55 ವರ್ಷ.
ಪರಿಶಿಷ್ಟ ಜಾತಿ/ಪಂಗಡ ಫಲಾನುಭವಿಗಳು:
- ಕುಟುಂಬ ವಾರ್ಷಿಕ ಆದಾಯ ಮಿತಿ: ರೂ.2 ಲಕ್ಷ
- ಘಟಕ ವೆಚ್ಚ: ರೂ.1 ಲಕ್ಷದಿಂದ ರೂ.3 ಲಕ್ಷ
- ಸಹಾಯಧನ: ಶೇ.50
ಸಾಮಾನ್ಯ ವರ್ಗ:
- ಕುಟುಂಬ ವಾರ್ಷಿಕ ಆದಾಯ ಮಿತಿ: ರೂ.1.50 ಲಕ್ಷ
- ಘಟಕ ವೆಚ್ಚ: ಗರಿಷ್ಠ ರೂ.3 ಲಕ್ಷ
- ಸಹಾಯಧನ: ಶೇ.30
ಅರ್ಜಿಯನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್‌ನಲ್ಲಿ ಸಲ್ಲಿಸಬೇಕು.
ಚೇತನ ಯೋಜನೆ – ದಮನಿತ ಮಹಿಳೆಯರಿಗೆ ವಿಶೇಷ ಸಹಾಯ
ದಮನಕ್ಕೊಳಗಾದ ಮಹಿಳೆಯರು ಆದಾಯೋತ್ಪಾದಕ ಚಟುವಟಿಕೆ ಆರಂಭಿಸಲು ರೂ.30,000 ಪ್ರೋತ್ಸಾಹ ಧನ ನೀಡಲಾಗುತ್ತದೆ. ವಯೋಮಿತಿ 18 ವರ್ಷಕ್ಕಿಂತ ಮೇಲ್ಪಟ್ಟವರು. ಅರ್ಜಿಯನ್ನು ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬೇಕು.
ಧನಶ್ರೀ ಯೋಜನೆ – ಸ್ವಯಂ ಉದ್ಯೋಗಕ್ಕೆ ರೂ.30,000 ಪ್ರೋತ್ಸಾಹ ಧನ
ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ರೂ.30,000 ಪ್ರೋತ್ಸಾಹ ಧನ ನೀಡಲಾಗುತ್ತದೆ. ವಯೋಮಿತಿ 18 ರಿಂದ 60 ವರ್ಷ. ಈ ಯೋಜನೆಗೆ ಆನ್‌ಲೈನ್ ಮತ್ತು ಆಫ್‌ಲೈನ್ ಎರಡೂ ವಿಧಾನದಲ್ಲಿ ಅರ್ಜಿ ಸಲ್ಲಿಸಬಹುದು.
ಲಿಂಗ ಅಲ್ಪಸಂಖ್ಯಾತ ಪುನರ್ವಸತಿ ಯೋಜನೆ
ಲಿಂಗ ಅಲ್ಪಸಂಖ್ಯಾತ ವ್ಯಕ್ತಿಗಳು ಆದಾಯ ವೃದ್ಧಿ ಚಟುವಟಿಕೆ ಕೈಗೊಳ್ಳಲು ರೂ.30,000 ಪ್ರೋತ್ಸಾಹ ಧನ ನೀಡಲಾಗುತ್ತದೆ. ಆನ್‌ಲೈನ್ ಮತ್ತು ಆಫ್‌ಲೈನ್ ಎರಡೂ ವಿಧಾನಗಳಲ್ಲಿ ಅರ್ಜಿ ಸ್ವೀಕೃತ.
ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಖ್ಯ ಸೂಚನೆಗಳು
ಎಲ್ಲಾ ಯೋಜನೆಗಳಿಗೂ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
- ಧನಶ್ರೀ ಮತ್ತು ಲಿಂಗ ಅಲ್ಪಸಂಖ್ಯಾತ ಯೋಜನೆಗಳಿಗೆ ಆಫ್‌ಲೈನ್ ಅರ್ಜಿ ಸಲ್ಲಿಸುವವರು ಜಿಲ್ಲಾ ಉಪನಿರ್ದೇಶಕರು (ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ) ಅಥವಾ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರನ್ನು ಸಂಪರ್ಕಿಸಬೇಕು.
- ಉದ್ಯೋಗಿನಿ ಯೋಜನೆಯ SCSP/TSP ಅನುದಾನಕ್ಕೆ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು.
- ಸರ್ಕಾರಿ/ನಿಗಮದ ವಿವೇಚನಾ ಕೋಟಾಕ್ಕೆ ಮಾನ್ಯ ಸಚಿವ/ಶಾಸಕ/ಅಧ್ಯಕ್ಷರ ಶಿಫಾರಸು ಪತ್ರದೊಂದಿಗೆ ಸೇವಾಸಿಂಧು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು.
- ಅರ್ಜಿದಾರರ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಕಡ್ಡಾಯ.
- ಹಿಂದಿನ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದವರು ಮತ್ತೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಕೃಷ್ಣಸಾಗರಿ ಅವರು NeedsOfPublic.in ನ ‘ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ’ (Job Updates & Career) ವಿಭಾಗದ ಮುಖ್ಯಸ್ಥರಾಗಿದ್ದಾರೆ. ತುಮಕೂರಿನ ಸರ್ಕಾರಿ ನರ್ಸಿಂಗ್ ಕಾಲೇಜಿನಿಂದ B.Sc (Nursing) ಪದವಿ ಪಡೆದಿರುವ ಇವರು, ಸಾರ್ವಜನಿಕ ಜಾಗೃತಿ ಮತ್ತು ಮಾಹಿತಿ ನೀಡುವ ಆಸಕ್ತಿಯಿಂದಾಗಿ ಡಿಜಿಟಲ್ ಪತ್ರಿಕೋದ್ಯಮ ಕ್ಷೇತ್ರವನ್ನು ಆಯ್ದುಕೊಂಡಿದ್ದಾರೆ. ಡಿಜಿಟಲ್ ಮಾಧ್ಯಮ ರಂಗದಲ್ಲಿ 3 ವರ್ಷಗಳ ಅನುಭವ ಹೊಂದಿರುವ ಇವರು, ಸರ್ಕಾರಿ ಉದ್ಯೋಗದ ಅಧಿಸೂಚನೆಗಳು (Govt Job Notifications), ಖಾಸಗಿ ನೇಮಕಾತಿಗಳು ಮತ್ತು ಶೈಕ್ಷಣಿಕ ಅಪ್ಡೇಟ್ಗಳನ್ನು ಒದಗಿಸುವಲ್ಲಿ ಪರಿಣತಿ ಹೊಂದಿದ್ದಾರೆ. ನಿರುದ್ಯೋಗಿ ಯುವಕ-ಯುವತಿಯರಿಗೆ ಯಾವುದೇ ಗೊಂದಲವಿಲ್ಲದೆ, ಕೇವಲ ಅಧಿಕೃತ ಮೂಲಗಳಿಂದ ಪರಿಶೀಲಿಸಿದ (Verified) ನಿಖರ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವುದೇ ಇವರ ಬರವಣಿಗೆಯ ಶೈಲಿಯಾಗಿದೆ.


WhatsApp Group




Leave a Reply