ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಆಧಾರ್ ಕಾರ್ಡನ್ನು(Aadhar Card) ಪ್ರತಿಯೊಬ್ಬರು ಅಪ್ಡೇಟ್(update) ಮಾಡಬೇಕೆಂದು ಸರ್ಕಾರದಿಂದ ಆದೇಶ ಬಂದಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹಲವಾರು ಜನರು ಆಧಾರ್ ಕಾರ್ಡನ್ನು ಮಾಡಿಸಿ ಹತ್ತು ವರ್ಷಗಳು ಕಳೆದರೂ ಕೂಡ ಅದನ್ನು ಅಪ್ಡೇಟ್ ಮಾಡಿಸಿರುವುದಿಲ್ಲ. ಹಾಗಾಗಿ ಸರ್ಕಾರವು, ಪ್ರತಿಯೊಬ್ಬರು ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಬೇಕೆಂದು ಆದೇಶವನ್ನು ಹೊರಡಿಸಿದೆ. ನೀವೇನಾದರೂ 10 ವರ್ಷಗಳಿಗಿಂತ ಮೇಲ್ಪಟ್ಟು ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡದಿದ್ದರೆ ಸೆಪ್ಟೆಂಬರ್ 14ರ ಒಳಗೆ ನವೀಕರಿಸಿ(update). ಸೆಪ್ಟೆಂಬರ್ 14ರ ವರೆಗೂ ಆಧಾರ್ ಕಾರ್ಡ್ ನವೀಕರಣವು ಉಚಿತವಾಗಿದೆ. ಸೆಪ್ಟೆಂಬರ್ 14ರ ನಂತರ ನೀವೇನಾದರೂ ಆಧಾರ್ ಕಾರ್ಡನ್ನು ನವೀಕರಿಸಬೇಕಿದ್ದರೆ ಅದಕ್ಕೆ ದಂಡವನ್ನು(fine) ಕಟ್ಟಬೇಕಾಗುತ್ತದೆ. ಆಧಾರ್ ಕಾರ್ಡ್ ನವೀಕರಣದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಈಗಲೇ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿ:
ಆಧಾರ್ 12-ಅಂಕಿಯ ವಿಶಿಷ್ಟ ಗುರುತಿನ ಸಂಖ್ಯೆಯಾಗಿದ್ದು, ಇದನ್ನು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ನೀಡಿದೆ. ಆಧಾರ್ ಕಾರ್ಡ್ ಪ್ರಸ್ತುತ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ ಮತ್ತು ಆದ್ದರಿಂದ ಎಲ್ಲಾ ಇತ್ತೀಚಿನ ಮಾಹಿತಿಯನ್ನು ನವೀಕರಿಸುವುದು ಬಹಳ ಮುಖ್ಯ. ಆದರೆ ಶಾಸನಬದ್ಧ ಸಂಸ್ಥೆಯಿಂದ ಆಧಾರ್ ಅನ್ನು ನೀಡಿದಾಗಿನಿಂದ ಅದನ್ನು ಎಂದಿಗೂ ನವೀಕರಿಸದ ಜನರಿದ್ದಾರೆ.
ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ(Ministry of Electronics and Information Technology) ಹೊರಡಿಸಿದ ಇತ್ತೀಚಿನ ಅಧಿಸೂಚನೆಯ ಪ್ರಕಾರ, ಪ್ರತಿಯೊಬ್ಬ ವ್ಯಕ್ತಿಯು 10 ವರ್ಷಗಳ ನಂತರ ತನ್ನ ಆಧಾರ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ.
ಆಧಾರ್ ಕಾರ್ಡನ್ನು ಏಕೆ ನವೀಕರಿಸಬೇಕು :
“ಆಧಾರ್ ಹೊಂದಿರುವವರು, ಆಧಾರ್‌ಗಾಗಿ ದಾಖಲಾದ ದಿನಾಂಕದಿಂದ ಪ್ರತಿ 10 ವರ್ಷಗಳು ಪೂರ್ಣಗೊಂಡ ನಂತರ, ಆಧಾರ್‌ನಲ್ಲಿ ನಿರ್ದಿಷ್ಟಪಡಿಸಿದಂತೆ ಗುರುತಿನ ಪುರಾವೆ (POI) ಮತ್ತು ವಿಳಾಸದ ಪುರಾವೆ (POA) ದಾಖಲೆಗಳನ್ನು ಸಲ್ಲಿಸುವ ಮೂಲಕ ಒಮ್ಮೆಯಾದರೂ ಆಧಾರ್‌ನಲ್ಲಿ ತಮ್ಮ ಪೋಷಕ ದಾಖಲೆಗಳನ್ನು ನವೀಕರಿಸಬಹುದು. ಕೇಂದ್ರೀಯ ಗುರುತುಗಳ ಡೇಟಾ ರೆಪೊಸಿಟರಿಯಲ್ಲಿ (ಸಿಐಡಿಆರ್) ಅವರ ಮಾಹಿತಿಯ ನಿರಂತರ ನಿಖರತೆಯನ್ನು ಖಚಿತಪಡಿಸಿಕೊಳ್ಳಲು ಇಲ್ಲಿ ಮೇಲಿನ ನೋಂದಣಿ ಮತ್ತು ನವೀಕರಣ ನಿಯಂತ್ರಣ 10, ಪ್ರಾಧಿಕಾರವು ಕಾಲಕಾಲಕ್ಕೆ ನಿರ್ದಿಷ್ಟಪಡಿಸಬಹುದಾದ ರೀತಿಯಲ್ಲಿ” ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
UIDAI ಪ್ರಕಾರ, ಆಧಾರ್ ವಿವರಗಳನ್ನು ನವೀಕರಿಸುವುದು ಮುಖ್ಯವಾಗಿದೆ ಏಕೆಂದರೆ ಇದು ಜೀವನವನ್ನು ಸುಲಭಗೊಳಿಸುತ್ತದೆ.
ಆಧಾರ್ ಕಾರ್ಡನ್ನು ನವೀಕರಿಸುವ(update) ವಿಧಾನ :
How to update Aadhaar? : ಆಧಾರ್ ಕಾರ್ಡನ್ನು ನೀವು ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಅಪ್ಡೇಟ್ ಮಾಡಬಹುದು. ನಿಮ್ಮ ಜನ್ಮ ದಿನಾಂಕ, ವಿಳಾಸ, ಹೆಸರು ಹೀಗೆ ಎಲ್ಲವನ್ನು ಆನ್ಲೈನ್ ಮುಖಾಂತರ ಅಪ್ಡೇಟ್ ಮಾಡುವ ವಿಧಾನ ಕೆಳಗಿನಂತಿದೆ :
ಹಂತ 1: ಮೊದಲನೆಯದಾಗಿ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://myaadhaar.uidai.gov.
ಹಂತ 2: ನಂತರ ಲಾಗಿನ್ ಮಾಡಿ. ಇಲ್ಲಿ ನಿಮ್ಮ ಆಧಾರ್ ನಂಬರ್ ಹಾಕಿ, Captcha ಎಂಟರ್ ಮಾಡಿ,
ಹಂತ 3: Send OTP ಬಟನ್ ಮೇಲೆ ಕ್ಲಿಕ್ ಮಾಡಿ, ಓಟಿಪಿ ನಿಮ್ಮ ರಿಜಿಸ್ಟರ್ ಫೋನ್ ನಂಬರ್ಗೆ ಬರುತ್ತದೆ ಅದನ್ನು enter ಮಾಡಿ ಲಾಗಿನ್ ಆಗಿ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಹಂತ 4: ನಿಮಗೆ ಯಾವ ಮಾಹಿತಿಯನ್ನು ನವೀಕರಿಸಬೇಕು ಅದನ್ನು ಆಯ್ಕೆ ಮಾಡಿ. ಉದಾಹರಣೆಗೆ ವಿಳಾಸ ಬದಲಾಯಿಸಬೇಕಿದ್ದರೆ ‘Address Update’ ಆಯ್ಕೆ ಮಾಡಿ.
ಹಂತ 5: ಈಗ ನಿಮ್ಮ ವಿಳಾಸ ದೃಢೀಕರಣ ದಾಖಲೆಯ ಸ್ಕ್ಯಾನ್ ಪ್ರತಿ ಅಪ್ಲೋಡ್ ಮಾಡಿ.
ಹಂತ 6: ಆ ಬಳಿಕ ‘Submit’ಬಟನ್ ಮೇಲೆ ಕ್ಲಿಕ್ ಮಾಡಿ.
ಹಂತ 7: ಈಗ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಅಪ್ಡೇಟ್ ರಿಕ್ವೆಸ್ಟ್ ಸಂಖ್ಯೆ (URN) ಬರುತ್ತದೆ.
ಹಂತ 8: 15 ದಿನಗಳೊಳಗೆ ನಿಮ್ಮ ವಿಳಾಸ ಅಥವಾ ಇತರ ಯಾವುದೇ ಮಾಹಿತಿ ಆಧಾರ್ ನಲ್ಲಿ ಅಪ್ಡೇಟ್ ಆಗುತ್ತದೆ.
ಹೀಗೆ ನೀವು ಬೇಕಾದ ಮಾಹಿತಿಯನ್ನು ಅಪ್ಡೇಟ್ ಮಾಡಿಕೊಳ್ಳಬಹುದು. 14/9/2023 ರ ವರೆಗೂ ಆಧಾರ್ ಕಾರ್ಡಿನ ನವೀಕರಣಕ್ಕೆ ಯಾವುದೇ ರೀತಿಯ ಶುಲ್ಕವನ್ನು ಪಾವತಿಸುವ ಅಗತ್ಯವಿರುವುದಿಲ್ಲ. ಇದು ಸಂಪೂರ್ಣ ಉಚಿತವಾಗಿದೆ. ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ