Home » ಟೆಕ್ ನ್ಯೂಸ್ » ಮಾರ್ಚ್ 31ರ ಒಳಗಾಗಿ ಈ ಸಣ್ಣ ಕೆಲಸ ಮಾಡದಿದ್ದರೆ ನಿಮ್ಮ ಪಾನ್ ಕಾರ್ಡ್ ಬಂದ್ ಆಗುತ್ತೆ

ಮಾರ್ಚ್ 31ರ ಒಳಗಾಗಿ ಈ ಸಣ್ಣ ಕೆಲಸ ಮಾಡದಿದ್ದರೆ ನಿಮ್ಮ ಪಾನ್ ಕಾರ್ಡ್ ಬಂದ್ ಆಗುತ್ತೆ

ಎಲ್ಲರಿಗೂ ನಮಸ್ಕಾರ, ಇದುವರೆಗೂ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡನ್ನ ಲಿಂಕ್ ಮಾಡದ ನಾಗರಿಕರಿಗೆ ಆದಾಯ ತೆರಿಗೆ ಇಲಾಖೆಯಿಂದ ಮಹತ್ವದ ಆದೇಶವನ್ನು ಹೊರಡಿಸಲಾಗಿದೆ, ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ನ ಲಿಂಕ್ ಮಾಡದೆ ಇದ್ದಲ್ಲಿ ಅಂತಹ ನಾಗರಿಕರ ಪಾನ್ ಕಾರ್ಡ್ ಅನ್ನು ರದ್ದುಗೊಳಿಸಲಾಗುವುದು ಎಂದು ಹೇಳಲಾಗಿದೆ.

ಈ ಲೇಖನದಲ್ಲಿ ನಾವು ಪಾನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡನ್ನು ಹೇಗೆ ಜೋಡಣೆ ಮಾಡುವುದು ಎಂಬುವುದರ ಮಾಹಿತಿಯನ್ನು ತಿಳಿಸಿಕೊಡುತ್ತೇವೆ. ಆಧಾರ್ ಕಾರ್ಡ್ ಜೊತೆ ಪಾನ್ ಕಾರ್ಡನ್ನು ಜೋಡಣೆ ಮಾಡುವುದು ಕಡ್ಡಾಯವಾಗಿದೆ ಇನ್ನೇನು ಒಂದು ತಿಂಗಳಿನಲ್ಲಿ ಈ ಜೋಡಣೆಯನ್ನು ಮಾಡಲೇಬೇಕಾಗಿದೆ ಇದಕ್ಕೆ ಕೊನೆಯ ದಿನವನ್ನು ಕೂಡ ನಿಗದಿಪಡಿಸಿದ್ದಾರೆ. ಹಾಗಿದ್ದಲ್ಲಿ ಪಾನ್ ಕಾರ್ಡ್ ಜೊತೆ ಆಧಾರ್ ಕಾರ್ಡನ್ನು ಜೋಡಣೆ ಮಾಡುವ ವಿಧಾನ, ಪಾನ ಜೊತೆ ಆಧಾರ್ ಕಾರ್ಡನ್ನು ಲಿಂಕ್ ಮಾಡಲು ಕೊನೆಯ ದಿನಾಂಕ ಏನು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಆದಾಯ-ತೆರಿಗೆ ಕಾಯಿದೆ, 1961 ರ ಪ್ರಕಾರ, ವಿನಾಯಿತಿ ವರ್ಗದ ಅಡಿಯಲ್ಲಿ ಬರದ ಎಲ್ಲರೂ ಪ್ಯಾನ್ ಕಾರ್ಡ್​ 31.3.2023 ರ ಮೊದಲು ತಮ್ಮ ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ. 1.04.2023 ರಿಂದ, ಲಿಂಕ್ ಮಾಡದ ಪ್ಯಾನ್ ನಿಷ್ಕ್ರಿಯಗೊಳ್ಳುತ್ತದೆ, ಎಂದು ಆದಾಯ ಮತ್ತು ತೆರಿಗೆ ಇಲಾಖೆ ಅಧಿಕೃತವಾಗಿ ಘೋಷಿಸಿದೆ.

ಮಾರ್ಚ್ 30 ರಂದು ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸ್ (CBDT) ಹೊರಡಿಸಿದ ಸುತ್ತೋಲೆಯಲ್ಲಿ, ಒಮ್ಮೆ ಪ್ಯಾನ್ ನಿಷ್ಕ್ರಿಯಗೊಂಡರೆ, ಐಟಿ ಕಾಯ್ದೆಯ ಅಡಿಯಲ್ಲಿ ಆ ವ್ಯಕ್ತಿ ಆಗುವ ಎಲ್ಲಾ ಪರಿಣಾಮಗಳಿಗೆ ಹೊಣೆಗಾರನಾಗಿರುತ್ತಾನೆ

2023 ಮಾರ್ಚ್ ಅಂತ್ಯದೊಳಗೆ ಪ್ಯಾನ್ ಕಾರ್ಡ್​ಗಳನ್ನು ನಿಷ್ಕ್ರಿಯಗೊಳಿಸಲಾಗುವುದು’ ಎಂದು ಆದಾಯ ತೆರಿಗೆ ಇಲಾಖೆ ಶನಿವಾರ ಹೇಳಿದೆ.

ನಿಷ್ಕ್ರಿಯ ಆಗಿರುವ PAN ಅನ್ನು ಬಳಸಿಕೊಂಡು ವ್ಯಕ್ತಿಯು IT ರಿಟರ್ನ್ ಅನ್ನು ಸಲ್ಲಿಸಲು ಸಾಧ್ಯವಾಗುವುದಿಲ್ಲ. ಬಾಕಿ ಇರುವ ರಿಟರ್ನ್‌ಗಳ ಪ್ರಕ್ರಿಯೆ ಮುಂದಕ್ಕೆ ಹೋಗುವುದಿಲ್ಲ. ನಿಷ್ಕ್ರಿಯ PAN ಗಳಿಗೆ ಬಾಕಿಯಿರುವ ಮರುಪಾವತಿಗಳನ್ನು ನೀಡಲಾಗುವುದಿಲ್ಲ. ಅದಲ್ಲದೇ ಹೆಚ್ಚಿನ ದರದಲ್ಲಿ ತೆರಿಗೆಯನ್ನು ಕಡಿತಗೊಳಿಸಲಾಗುತ್ತದೆ. ಅದರ ಜೊತೆಗೆ, ತೆರಿಗೆದಾರರು ಬ್ಯಾಂಕ್‌ ಖಾತೆ ತೆರೆಯಲೂ ತೊಂದರೆ ಎದುರಿಸಬೇಕಾಗುತ್ತದೆ. ಏಕೆಂದರೆ ಎಲ್ಲಾ ರೀತಿಯ ಹಣಕಾಸಿನ ವಹಿವಾಟುಗಳಿಗೆ PAN ಪ್ರಮುಖ KYC ಮಾನದಂಡವಾಗಿದೆ. ಎಂದು ತೆರಿಗೆ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ : ಗೂಗಲ್ ಪೇ, ಫೋನ್ ಪೇ, ಪೇಟಿಯಂ ಅಥವಾ ಯುಪಿಐ ಬಳಸುವವರಿಗೆ ಮಾಹಿತಿ ಗೊತ್ತಿರಲೇಬೇಕು..!

ಪಾನ್ ಕಾರ್ಡ್ ಅಂದರೆ ಏನು ಅದರ ಅವಶ್ಯಕತೆ ಎಷ್ಟಿದೆ?:

ಈ ಪಾನ್ ಕಾರ್ಡನ್ನು ಆದಾಯ ಇಲಾಖೆಯ ವತಿಯಿಂದ ನೀಡಲಾಗುತ್ತದೆ ಇದು ಒಂದು ಖಾತೆಯ ಶಾಶ್ವತವಾದ ನಂಬರ್ ಆಗಿರುತ್ತದೆ. ಭಾರತದ ಪ್ರತಿಯೊಬ್ಬ ನಾಗರಿಕನೂ ಆದಾಯ ತೆರಿಗೆ ಕಟ್ಟುವ ಸಂದರ್ಭದಲ್ಲಿ ಹಾಗೂ ಹಣಕಾಸು ವ್ಯವಹಾರ ನಿರ್ವಹಿಸುವಾಗ ಪ್ಯಾನ್ ಕಾರ್ಡ್ ಅತ್ಯಗತ್ಯ. ಪಾನ್ ಕಾರ್ಡ್ ಹತ್ತು ಸಂಖ್ಯೆಯ ಶಾಶ್ವತ ನಂಬರ್ ಅನ್ನು ಹೊಂದಿರುತ್ತದೆ.ಆದಾಯ ತೆರಿಗೆ, ಹಣಕಾಸು ವ್ಯವಹಾರಗಳು ಈ ಖಾತೆ ಆಧಾರದಲ್ಲಿಯೇ ನಡೆಯುತ್ತದೆ. ಸಾಲ, ಬಂಡವಾಳ ಹೂಡಿಕೆ, ಆಸ್ತಿ ಖರೀದಿ ಮತ್ತು ಮಾರಾಟ ಎಲ್ಲದಕ್ಕೂ ಪಾನ್ ಕಾರ್ಡ್ ಮುಖ್ಯ ಆಧಾರವಾಗಿರುತ್ತದೆ. ಹೊಸ ಬ್ಯಾಂಕ್ ಖಾತೆಯನ್ನು ತೆರೆಯುವಾಗ ಹಾಗೂ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಗಳನ್ನು ಪಡೆಯುವಾಗ ಪಾನ್ ಕಾರ್ಡನ್ನು ನಾವು ಕಡ್ಡಾಯವಾಗಿ ಬ್ಯಾಂಕಿಗಳಿಗೆ ಸಲ್ಲಿಸಬೇಕಾಗುತ್ತದೆ. ವಿಮೆಯನ್ನು ಪಾವತಿ ಮಾಡುವಾಗ ಹಾಗೂ ಭದ್ರತಾ ಠೇವಣಿ ಮಾಡುವಾಗ ಹೀಗೆ ಎಲ್ಲಾ ಬ್ಯಾಂಕಿನ ವೈವಾಟುಗಳಲ್ಲಿ ನಮಗೆ ಪಾನ್ ಕಾರ್ಡ್ ಅತ್ಯವಶ್ಯಕವಾಗಿದೆ. ತೆರಿಗೆ ವಂಚನೆಯನ್ನು ತಡೆಗಟ್ಟಲು ವ್ಯಕ್ತಿಗಳು ಮತ್ತು ಘಟಕಗಳಿಂದ ಪ್ಯಾನ್ ಕಾರ್ಡ್ ಅನ್ನು ನೀಡಲಾಗುತ್ತದೆ, ಏಕೆಂದರೆ ಇದು ನಿರ್ದಿಷ್ಟ ವ್ಯಕ್ತಿ ಅಥವಾ ಘಟಕದ ಮೂಲಕ ಮಾಡಿದ ಎಲ್ಲಾ ಹಣಕಾಸಿನ ವಹಿವಾಟುಗಳನ್ನು ದಾಖಲಿಸುತ್ತದೆ.

ಇದನ್ನೂ ಓದಿ : 25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಪಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ ನೊಂದಿಗೆ ಜೋಡಣೆ ಮಾಡಲು ಕೊನೆಯ ದಿನಾಂಕ :

ಆದಾಯ ಇಲಾಖೆಯ ಕಡೆಯಿಂದ ಪಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ನೊಂದಿಗೆ ಜೋಡಣೆ ಮಾಡುವುದು ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ ಹಾಗೆಯೇ ಈ ಜೋಡಣೆಯನ್ನು ಮಾಡಲು ಕೊನೆಯ ದಿನಾಂಕ ಮಾರ್ಚ್ 31, 2023. ಒಂದು ವೇಳೆ ಯಾರಾದರೂ ಇನ್ನೂ ಪಾನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡನ್ನು ಜೋಡಣೆ ಮಾಡಿಲ್ಲ ಎಂದರೆ, ಆದಾಯ ಇಲಾಖೆಗೆ ದಂಡದ ರೂಪದಲ್ಲಿ ಒಂದು ಸಾವಿರ ರೂಗಳನ್ನು ಪಾವತಿ ಮಾಡಿ ನಂತರ ಇವೆರಡನ್ನು ಜೋಡಣೆ ಮಾಡಿಕೊಳ್ಳಬಹುದಾಗಿದೆ.

ನೀವು ಈಗಾಗಲೇ ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡಿದ್ದರೆ. ಸ್ಟೇಟಸ್ ಚೆಕ್ ಮಾಡಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ

ಹಂತ 1: ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: ಅಧಿಕೃತ ವೆಬ್ಸೈಟ್ ಗೆ ಇಲ್ಲಿ ಕ್ಲಿಕ್ ಮಾಡಿ 

ಹಂತ 2: ನಿಮ್ಮ ಪಾನ್ ಕಾರ್ಡ್ ಮತ್ತು ಆಧಾರ್ ನಂಬರ್ ನಮೂದಿಸಿ ” ವಿವ್ ಲಿಂಕ್ ಆಧಾರ್ ಸ್ಟೇಟಸ್” ಮೇಲೆ ಕ್ಲಿಕ್ ಮಾಡಿ

ನಿಮ್ಮ ಆಧಾರ್ ಕಾರ್ಡ್ & ಪ್ಯಾನ್ ಕಾರ್ಡ್ ಲಿಂಕ್ ಆಗಿದ್ದರೆ ಇಲ್ಲಿ ಸ್ಟೇಟಸ್ ಅನ್ನು ತೋರಿಸುತ್ತದೆ. ಒಂದು ವೇಳೆ ಲಿಂಕ್ ಆಗಿರದಿದ್ದರೆ ಕೆಳಗಿನ ಕ್ರಮಗಳನ್ನು ಅನುಸರಿಸಿ ಈ ಕೂಡಲೇ ಲಿಂಕ್ ಮಾಡಿ. ಈಗ ನೀವು ಲಿಂಕ್ ಮಾಡಲು ಒಂದು ಸಾವಿರ ರೂಪಾಯಿ ದಂಡವನ್ನು ಭರಿಸಬೇಕಾಗುತ್ತದೆ

ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡನ್ನು ಜೋಡಣೆ ಮಾಡುವ ವಿಧಾನ :

ಹಂತ 1: ಮೊದಲಿಗೆ ಆದಾಯ ತೆರಿಗೆ  ಇಲಾಖೆಯ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.

ಹಂತ 2: ಅಧಿಕೃತ ಜಾಲತಾಣಕ್ಕೆ ಇಲ್ಲಿ ಕ್ಲಿಕ್ ಮಾಡಿ

ಹಂತ 3 : ಮುಂದಿನ ಪೇಜ್ ನಲ್ಲಿ ನಿಮಗೆ ಒಂದು ಮಾಹಿತಿ ದೊರೆಯುತ್ತದೆ ಅದನ್ನು ನೀವು ಓದಿಕೊಳ್ಳಿ. ಅದರಲ್ಲಿ ಆಧಾರ್ ಕಾರ್ಡಿಗೆ ಪಾನ್ ಕಾರ್ಡ್ ಅನ್ನು ಲಿಂಕ್ ಮಾಡದಿದ್ದರೆ ಎಷ್ಟು ಶುಲ್ಕವನ್ನು ಪಾವತಿಸಬೇಕು? ನಿಮ್ಮ ಮಾಹಿತಿಯೊಂದಿಗೆ ಶುಲ್ಕವನ್ನು ಸಲ್ಲಿಸುವ  ಲಿಂಕ್ ಕೂಡ ನಿಮಗೆ ಅಲ್ಲಿ ದೊರೆಯುತ್ತದೆ.

ಹಂತ 4 : ಶುಲ್ಕವನ್ನು ಪಾವತಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ :
ನಂತರ ನಿಮ್ಮ ಪಾವತಿಯ ವಿಧಾನವನ್ನು ಆಯ್ಕೆಯನ್ನು ಮಾಡಿಕೊಂಡು ಶುಲ್ಕವನ್ನು ಪಾವತಿಸಬೇಕು. ಶುಲ್ಕವನ್ನು ಪಾವತಿಸಿದ ನಾಲ್ಕು ದಿನಗಳ ನಂತರ ನೀವು ಆಧಾರ್ ಕಾರ್ಡನ್ನು ಪಾನ್ ಕಾರ್ಡ್ ಗೆ ಜೋಡಣೆ ಮಾಡಬಹುದು.

ಹಂತ 5: ನಂತರ ಶುಲ್ಕವನ್ನು ಪಾವತಿಸುವ ಮಾಹಿತಿಯನ್ನು ಹೊಂದಿರುವ ಪುಟದ ಕೆಳಗಿನ ಭಾಗದಲ್ಲಿ ನಿಮ್ಮ ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ನಂಬರ್ ಅನ್ನು ನೀವು ನೊಂದಾಯಿಸಬೇಕು.

ಹಂತ 6 : ನಂತರ ವ್ಯಾಲಿಡೇಟ್ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ .
ನಂತರ ನಿಮ್ಮ ಪಾನ್ ಕಾರ್ಡ್ ಆಧಾರ್ ಕಾರ್ಡಿಗೆ ಲಿಂಕ್ ಆಗುವುದು.

ಆದಾಯ ತೆರಿಗೆ ಇಲಾಖೆಯ ಕಡೆಯಿಂದ ಈ ಜೋಡಣೆಯನ್ನು ಕಡ್ಡಾಯ ಮಾಡಿದ್ದು, ನೀವು ಈ ಕೂಡಲೇ ಆಧಾರ್ ಕಾರ್ಡ್ನೊಂದಿಗೆ ಪಾನ್ ಕಾರ್ಡ್ ಅನ್ನು ಜೋಡಣೆ ಮಾಡಿ. ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಈ ಕೂಡಲೇ ಶೇರ್ ಮಾಡಿ, ಧನ್ಯವಾದಗಳು.

ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳು

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

About

Lingaraj Ramapur BCA,MCA, MA(Journalism)

Leave a Reply

Your email address will not be published. Required fields are marked *

error: Content is protected !!