WhatsApp Image 2025 11 28 at 1.56.46 PM

BIGNEWS : ಬೆಳೆ ನಷ್ಟ ಹೆಚ್ಚುವರಿ ಪರಿಹಾರದ ಹಣ ಇಂದೇ ರೈತರ ಖಾತೆಗೆ ಜಮೆ | ಯಾವ ಜಮೀನಿಗೆ ಎಷ್ಟು ಪರಿಹಾರ? ಇಲ್ಲಿದೆ

WhatsApp Group Telegram Group

ಬೆಂಗಳೂರು: ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಭಾರೀ ಅವಾಂತರದ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ಸಂತ್ರಸ್ತ ರೈತರಿಗೆ ಸರ್ಕಾರ ಘೋಷಿಸಿದ್ದ ಹೆಚ್ಚುವರಿ 1,033.60 ಕೋಟಿ ಮೊತ್ತದ ವಿಶೇಷ ಪ್ಯಾಕೇಜ್‌ ಅನ್ನು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದರು. ಇದರೊಂದಿಗೆ ಪ್ರತಿ ಹೆಕ್ಟೇರ್‌ಗೆ ಎರಡರಷ್ಟು ಪರಿಹಾರ ಹಣ ಅರ್ಹ ರೈತರಿಗೆ ಸಿಗಲಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ….

ಮುಖ್ಯಮಂತ್ರಿಯವರಿಂದ ಚಾಲನೆ

ಬೆಳೆಹಾನಿಗೆ ಈಗಾಗಲೇ ಎಸ್‌ಡಿಆರ್‌ಎಫ್‌ ಮಾರ್ಗಸೂಚಿ ಅನ್ವಯ 1,218 ಕೋಟಿ ರೂ.ಗಳನ್ನು 14.24 ಲಕ್ಷ ರೈತರಿಗೆ ಬೆಳೆಹಾನಿ ಪರಿಹಾರವಾಗಿ ಬಿಡುಗಡೆ ಮಾಡಲಾಗಿದೆ. ಇದರ ಜೊತೆಗೆ ರೈತರ ಬೇಡಿಕೆ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ಮತ್ತೆ 1,033.60 ಕೋಟಿ ರೂ.ಗಳನ್ನು ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಪಾವತಿಸಲು ಸರ್ಕಾರ ನಿರ್ಧರಿಸಿದ್ದು, ಈ ಕಾರ್ಯಕ್ಕೆ ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಚಾಲನೆ ನೀಡಿದರು. ಇದರಿಂದ ರಾಜ್ಯದ ರೈತರಿಗೆ 2,251 ಕೋಟಿ ರೂ.ಗಳನ್ನು ಎಸ್‌ಡಿಆರ್‌ಎಫ್‌ ಅನ್ವಯ ನೀಡಿದಂತಾಗುತ್ತದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯನವರು

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯನವರು, ರಾಜ್ಯದ 27 ಜಿಲ್ಲೆಗಳಲ್ಲಿ ಒಟ್ಟಾರೆ 14.58 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆಹಾನಿ ಆಗಿದೆ. 14.24 ಲಕ್ಷ ರೈತರು ಇದರಿಂದ ರೈತರು ಬಾಧಿತರಾಗಿದ್ದಾರೆ. ಅವರೆಲ್ಲರಿಗೂ ಶುಕ್ರವಾರ ಸಂಜೆ ಒಳಗೆ ಆಧಾರ್‌ ಆಧರಿತ ಪಾವತಿ ವ್ಯವಸ್ಥೆ (ಎಇಪಿಎಸ್‌) ಮೂಲಕ ಹಣ ಜಮಾ ಆಗಲಿದೆ. ಇದರೊಂದಿಗೆ ಪ್ರತಿ ಸಂತ್ರಸ್ತ ರೈತರಿಗೆ ದುಪ್ಪಟ್ಟು ಪರಿಹಾರ ಸಿಕ್ಕಂತಾಗಲಿದೆ ಎಂದು ಹೇಳಿದರು.

ಯಾವ ಜಮೀನಿಗೆ ಎಷ್ಟು ಪರಿಹಾರ?:

ಬೆಳೆ ಹಾನಿಗೊಳಗಾದ ರೈತರಿಗೆ ಹೆಚ್ಚಿನ ನೆರವು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಇನ್‌ಪುಟ್‌ ಸಬ್ಸಿಡಿಗಳ ದರಗಳನ್ನು ಇದೀಗ ಹೆಚ್ಚಿಸಿದೆ. ಗರಿಷ್ಠ 2 ಹೆಕ್ಟೇರ್‌ಗೆ ಸೀಮಿತವಾಗಿ, ಮಳೆಯಾಶ್ರಿತ ಬೆಳೆಗಳಿಗೆ 1 ಹೆಕ್ಟೇರ್‌ಗೆ 8,500 ರಿಂದ ರೂ. 17 ಸಾವಿರ, ನೀರಾವರಿ ಬೆಳೆಗೆ ಹೆಕ್ಟೇರ್‌ಗೆ 17 ಸಾವಿರದಿಂದ 25 ಸಾವಿರ ರೂ. ಹಾಗೂ ಬಹುವಾರ್ಷಿಕ ಬೆಳೆಗಳಿಗೆ ಹೆಕ್ಟೇರ್‌ವೊಂದಕ್ಕೆ 22,500 ರಿಂದ 31 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದು ಹೇಳಿದರು.

ಮುಂಗಾರು ಅವಧಿಯಲ್ಲಿ ದಾಖಲೆಯ 82.56 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಆದರೆ ಜೂನ್‌ನಿಂದ ಸೆಪ್ಟಂಬರ್ ಅವಧಿಯಲ್ಲಿ ಉಂಟಾದ ಅತಿವೃಷ್ಟಿಯಿಂದ 14.58 ಲಕ್ಷ ಹೆಕ್ಟೇರ್‌ಗಿಂತ ಹೆಚ್ಚಿನ ಪ್ರದೇಶದ ಬೆಳೆಹಾನಿ ಆಗಿದ್ದು, ಇದರಿಂದ ಅಂದಾಜು 10,748 ಕೋಟಿ ರೂ. ಬೆಳೆಹಾನಿ ಅಂದಾಜಿಸಲಾಗಿದೆ.

ಹೆಚ್ಚು ಹಾನಿಯಾದ ಬೆಳೆಗಳ ವಿವರ

ಮುಖ್ಯವಾಗಿ ತೊಗರಿ ಬೇಳೆ 5.36 ಲಕ್ಷ ಹೆಕ್ಟೇರ್, ಹೆಸರುಕಾಳು 2.63 ಲಕ್ಷ ಹೆಕ್ಟೇರ್, ಹತ್ತಿ 2.68 ಲಕ್ಷ ಹೆಕ್ಟೇರ್ ಮತ್ತು ಮೆಕ್ಕೆಜೋಳ 1.21 ಲಕ್ಷ ಹೆಕ್ಟೇರ್ ಹಾನಿ ಉಂಟಾಗಿದೆ. 9 ಜಿಲ್ಲೆಗಳಲ್ಲಿ ಹೆಚ್ಚಿನ ಬೆಳೆ ಹಾನಿ ಉಂಟಾಗಿದೆ. ಪ್ರಮುಖವಾಗಿ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಬೆಳೆಗಳು ಕೊಯ್ಲಿನ ಹಂತಕ್ಕೆ ಬಂದ ಸಂದರ್ಭದಲ್ಲಿ ಭಾರೀ ಮಳೆಯಿಂದ ಹೆಚ್ಚಿನ ಹಾನಿ ಸಂಭವಿಸಿದೆ.

ಕೃಷ್ಣಾ ಮತ್ತು ಭೀಮಾ ಜಲಾನಯನ ಪ್ರದೇಶಗಳಲ್ಲಿ ನಿರಂತರ ಒಳ ಹರಿವು ಹೆಚ್ಚಳದಿಂದ ಕಲಬುರಗಿ, ಯಾದಗಿರಿ ಮತ್ತು ಬೀದರ ಜಿಲ್ಲೆಗಳಲ್ಲಿ ತೊಗರಿ ಮತ್ತು ಹತ್ತಿ ಬೆಳೆಗಳಿಗೆ ವ್ಯಾಪಕ ಹಾನಿ ಉಂಟಾಗಿದೆ. ಬೆಳೆಹಾನಿಯನ್ನು ನಿಖರವಾಗಿ ಖಚಿತಪಡಿಸಲು ಜಂಟಿ ಸಮೀಕ್ಷೆ ನಡೆಸಿ ಹಾನಿಯನ್ನು ಅಂದಾಜಿಸಲಾಗಿದೆ. ಎಲ್ಲಾ ದತ್ತಾಂಶಗಳನ್ನು ಪರಿಹಾರ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಭೂಮಿ ಮತ್ತು ಫ್ರೂಟ್ಸ್ ತಂತ್ರಾಂಶದಲ್ಲಿ ಆಯೋಜಿಸಲಾಗಿದೆ ಎಂದರು. ಸಚಿವರಾದ ಎಚ್‌.ಕೆ. ಪಾಟೀಲ, ಕೃಷ್ಣ ಬೈರೇಗೌಡ, ಸಂತೋಷ್‌ ಲಾಡ್‌, ಶರಣಬಸಪ್ಪ ದರ್ಶನಾಪುರ, ಈಶ್ವರ ಖಂಡ್ರೆ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯಕ್ಕೆ ಶೀಘ್ರ ಕೇಂದ್ರ ತಂಡ ಬೇಟಿ

ಬೆಳೆಹಾನಿ ಪರಿಶೀಲನೆಗೆ ಕೇಂದ್ರ ಸರ್ಕಾರದ ಅಂತರ ಸಚಿವಾಲಯ ತಂಡ ಶೀಘ್ರ ರಾಜ್ಯಕ್ಕೆ ಭೇಟಿ ನೀಡಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಬೆಳೆಹಾನಿಗೆ 614.90 ಕೋಟಿ ಪರಿಹಾರ ಮತ್ತು ಮೂಲಸೌಕರ್ಯಗಳ ಮರುನಿರ್ಮಾಣಕ್ಕಾಗಿ 1,521.67 ಕೋಟಿ ರೂ. ಪರಿಹಾರ ಒದಗಿಸುವಂತೆ ಸಿಎಂ ನೇತೃತ್ವದಲ್ಲಿ ಈತ್ತೀಚೆಗೆ ದೆಹಲಿಯಲ್ಲಿ ಪ್ರಧಾನಿಯನ್ನು ಭೇಟಿ ಮಾಡಿ, ಮನವಿ ಸಲ್ಲಿಸಲಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಅಂತರ ಸಚಿವಾಲಯದ ತಂಡ ರಚಿಸಿದ್ದು, ಈ ತಂಡ ಶೀಘ್ರ ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ ಎಂದು ಹೇಳಿದರು.

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories