agree department

ಕೃಷಿ ಇಲಾಖೆಯಿಂದ ನೇರ ಗುತ್ತಿಗೆ ಆಧಾರದ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈಗಲೇ ಅಪ್ಲೈ ಮಾಡಿ

Categories:
WhatsApp Group Telegram Group

ಬೆಂಗಳೂರು: ಕೃಷಿ ಇಲಾಖೆಯಡಿ ಕೇಂದ್ರ ಪುರಸ್ಕೃತ ಆತ್ಮ ಯೋಜನೆ (ATMA) ಅಡಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಈ ಯೋಜನೆಯಲ್ಲಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ (Block Technology Manager – BTM) ಒಂದು (1) ಹುದ್ದೆ ಮತ್ತು ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (Assistant Technology Manager – ATM) ಎರಡು (2) ಹುದ್ದೆಗಳು ಖಾಲಿ ಇವೆ.

ಅಗತ್ಯ ವಿದ್ಯಾರ್ಹತೆ ಮತ್ತು ಅನುಭವ:

ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ (BTM) ಹುದ್ದೆಗೆ: ಅಭ್ಯರ್ಥಿಗಳು ಎಂ.ಎಸ್ಸಿ. (ಕೃಷಿ / ಕೃಷಿ ಸಂಬಂಧಿತ ವಿಷಯ) ಪದವಿಯನ್ನು ಪೂರ್ಣಗೊಳಿಸಿರಬೇಕು. ಜೊತೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ ಎರಡು (02) ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.

ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ATM) ಹುದ್ದೆಗೆ: ಅಭ್ಯರ್ಥಿಗಳು ಬಿ.ಎಸ್ಸಿ. (ಕೃಷಿ / ಕೃಷಿ ಸಂಬಂಧಿತ ವಿಷಯ) ಪದವಿಯನ್ನು ಪೂರ್ಣಗೊಳಿಸಿರಬೇಕು. ಇದರೊಂದಿಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಭಾಗದಲ್ಲಿ ಕನಿಷ್ಠ ಒಂದು (01) ವರ್ಷದ ಕೆಲಸದ ಅನುಭವ ಇರಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಅಭ್ಯರ್ಥಿಗಳು ತಮ್ಮ ಸಂಪೂರ್ಣ ಬಯೋಡೇಟಾ ಮತ್ತು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 24, 2025 ರೊಳಗೆ ಕಚೇರಿಯ ಅವಧಿಯಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ:

ಜಂಟಿ ಕೃಷಿ ನಿರ್ದೇಶಕರ ಕಛೇರಿ,

ಕೃಷಿ ಸಂಕೀರ್ಣ,

ಎಸ್. ಕರಿಯಪ್ಪ ರಸ್ತೆ (ಕನಕಪುರ ರಸ್ತೆ),

ಬನಶಂಕರಿ,

ಬೆಂಗಳೂರು – 560 070.

ಬೆಂಗಳೂರು ನಗರ ಜಿಲ್ಲಾ ಆತ್ಮ ಯೋಜನಾ ನಿರ್ದೇಶಕರು ಹಾಗೂ ಜಂಟಿ ಕೃಷಿ ನಿರ್ದೇಶಕರು ಈ ಕುರಿತು ಪ್ರಕಟಣೆ ನೀಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ:

ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ದೂರವಾಣಿ ಸಂಖ್ಯೆ: 080-26711594 ಗೆ ಕಚೇರಿ ಅವಧಿಯಲ್ಲಿ ಸಂಪರ್ಕಿಸಬಹುದು.

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories