agricultural loan wained off

ರೈತರೇ ಗಮನಿಸಿ, ಕೃಷಿ ಸಾಲದ ಅಸಲು ಪಾವತಿ ಮಾಡಿದ್ರೆ ಬಡ್ಡಿ ಮನ್ನಾ, ಇದೇ 31ರವರೆಗೆ ಅವಕಾಶ

WhatsApp Group Telegram Group

ಸರ್ಕಾರವು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದ ರೈತರಿಗೆ ಒಂದು ತಿಂಗಳ ಕಾಲಾವಕಾಶ ನೀಡಿದೆ. 31-12-2023ಕ್ಕೆ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲ(Agricultural loan)ಗಳ ಕಂತುಗಳನ್ನು ಪಾವತಿಸಲು ಸಾಧ್ಯವಾಗದ ರೈತರಿಗೆ ಸಹಾಯ ಮಾಡಲು, ಸರ್ಕಾರವು 29-02-2024 ರವರೆಗೆ ನಿಗದಿಪಡಿಸಿದ ಕೊನೆಯ ದಿನಾಂಕವನ್ನು 31-03-2024 ರವರೆಗೆ ವಿಸ್ತರಿಸಿದೆ.ಹೌದು,ಸರ್ಕಾರವು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದ ರೈತರಿಗೆ ಒಂದು ತಿಂಗಳ ಕಾಲಾವಕಾಶ ನೀಡಿದೆ. ಈ ರೈತರು 31-12-2023ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನು 31-03-2024 ರ ಒಳಗೆ ಪಡೆಯಬಹುದು.29-02-2024 ರ ಒಳಗೆ ಕಂತುಗಳನ್ನು ಪಡೆಯಲು ಸಾಧ್ಯವಾಗದ ರೈತರಿಗೆ ಈಗ 31-03-2024 ರವರೆಗೆ ಕಾಲಾವಕಾಶವಿದೆ. ಈ ಯೋಜನೆಯು ರಾಜ್ಯದಾದ್ಯಂತ ಎಲ್ಲರಿಗೂ ಪ್ರಯೋಜನ ನೀಡುವ ನಿರೀಕ್ಷೆಯಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಅಸಲು ಪಾವತಿಸಿದರೆ ಬಡ್ಡಿಮನ್ನಾ :

ಸರ್ಕಾರ ರೈತರು ರಾಜ್ಯದ ಸಹಕಾರ ಸಂಘಗಳು ಅಂದರೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ(loan) ಪಡೆದು 31.12.2023ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನು 29-02-2024 ರೊಳಗೆ ಸಂಬಂಧಪಟ್ಟ ಪತ್ತಿನ ಸಹಕಾರ ಸಂಘ/ಬ್ಯಾಂಕುಗಳಿಗೆ ಪೂರ್ತಿಯಾಗಿ ಮರುಪಾವತಿಸಿದಲ್ಲಿ ಈ ಮೊತ್ತಕ್ಕೆ ಬಾಕಿಯಿರುವ ಬಡ್ಡಿಯನ್ನು ಮನ್ನಾ ಮಾಡಲು ಆದೇಶಿಸಿತ್ತು. ಜೊತೆಗೆ ಈ ರೀತಿ ಮನ್ನಾ ಮಾಡಿದ ಬಡ್ಡಿ(interest) ಮೊಬಲಗನ್ನು ಸಹಕಾರ ಸಂಘಗಳಿಗೆ ಸರ್ಕಾರ ಭರ್ತಿ ಮಾಡಲು ಕೆಲವು ಷರತ್ತಿಗೊಳಪಟ್ಟು ಮಂಜೂರಾತಿ ನೀಡಿ ಆದೇಶಿಸಲಾಗಿತ್ತು.

whatss

ಈ ಯೋಜನೆಯಡಿ ಸಹಕಾರ ಸಂಘಗಳು ಸಲ್ಲಿಸಿದ ಮಾಹಿತಿಯನ್ವಯ 29-02-2024 ರವರೆಗೆ 29,456 ರೈತರು 281.88 ಕೋಟಿ ರೂ. ಸುಸ್ತಿ ಸಾಲವನ್ನು ಮರುಪಾವತಿಸಿದ್ದು, ಇದರ ಮೇಲೆ ಸರ್ಕಾರದ ಬಡ್ಡಿ 214.55 ರೂ. ಆಗಿದೆ.‌ ಬರಗಾಲ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರೈತರ ಅನುಕೂಲಕ್ಕಾಗಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ ಯೋಜನೆಯಡಿ ಸುಸ್ತಿ ಸಾಲಗಳ ಮರುಪಾವತಿ ಅವಧಿಯನ್ನು 31-03-2024 ರವರೆಗೆ ವಿಸ್ತರಿಸುವಂತೆ ನಿಬಂಧಕರು ಕೋರಿದ್ದರು.‌

ಈ ಹಿನ್ನೆಲೆ ಸರ್ಕಾರ ರಾಜ್ಯದ ರೈತರು ಸಹಕಾರ ಸಂಘಗಳು ಅಂದರೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದು 31-12-2023 ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನು ಪಾವತಿಸಲು ನಿಗದಿಪಡಿಸಿದ್ದ ದಿನಾಂಕ 29-02-2024ನ್ನು 31-03-2024 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

 

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

WhatsApp Group Join Now
Telegram Group Join Now

Popular Categories