ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚುಯಿಟಿ: ಕೇಂದ್ರ ಸಚಿವ ಸೋಮಣ್ಣ (Minister V. Somanna)
ಹಲವು ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರು (Anganwadi workers) ಸರ್ಕಾರದ (governament)ಮುಂದೆ ಹಲವು ಬೇಡಿಕೆಗಳನ್ನು ಇಡುತ್ತಲೇ ಇದ್ದಾರೆ. ಇದಕ್ಕಾಗಿ ಹಲವಾರು ಬಾರಿ ಹೋರಾಟಗಳು ಪ್ರತಿಭಟನೆಗಳನ್ನು ಕೂಡ ಮಾಡಿಕೊಂಡು ಬಂದಿದ್ದಾರೆ. ಆದರೆ ಸರ್ಕಾರ ಅವರ ಎಲ್ಲಾ ಬೇಡಿಕೆಗಳಿಗೂ ಬೆಲೆ ಕೊಟ್ಟಿಲ್ಲ. ಅದರಲ್ಲೂ ಗ್ರಾಚ್ಯುಟಿ(Gratuity) ಬಗ್ಗೆಯೂ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಸಚಿವರಾದ ವಿ.ಸೋಮಣ್ಣ (Minister V Sommanna) ಅವರು ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ. ಆ ಸಿಹಿ ಸುದ್ದಿ ಯಾವುದು? ಗ್ರಾಚ್ಯುಟಿ ಎಂದರೇನು? ಅಂಗನವಾಡಿ ಕಾರ್ಯಕರ್ತೆಯರು ಇಟ್ಟ ಬೇಡಿಕೆಗಳು ಯಾವುವು? ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗ್ರಾಚ್ಯುಟಿ (Gratuity) ಎಂದರೇನು?:
ಗ್ರಾಚ್ಯುಟಿ ಬಗ್ಗೆ ಖಾಸಗಿ ಸಂಸ್ಥೆಗಳ (private institutions) ಉದ್ಯೋಗಿಗಳು (employees) ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಏಕೆಂದರೆ ಅವರು ಕಾಲದಿಂದ ಕಾಲಕ್ಕೆ ತಮ್ಮ ಕೆಲಸವನ್ನು ಬದಲಾಯಿಸಿಕೊಳ್ಳುತ್ತಿರುತ್ತಾರೆ. ಆದ್ದರಿಂದ ಸರ್ಕಾರಿ ಸಂಸ್ಥೆಗಳಲ್ಲಿ ಕೆಲಸ ಮಾಡುವವರು ಗ್ರಾಚ್ಯುಟಿ ಪಡೆದುಕೊಳ್ಳಬಹುದು. ಗ್ರಾಚ್ಯುಟಿ (Gratuity) ಅಂದರೆ ಐದು ಅಥವಾ ಅದಕ್ಕಿಂತಲೂ ಹೆಚ್ಚು ವರ್ಷಗಳ ಕಾಲ ಒಂದೇ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ ಉದ್ಯೋಗಿಗಳಿಗೆ ನೀಡಲಾಗುವ ಗೌರವಧನವೇ ಗ್ರಾಚ್ಯುಟಿ. ಅಂದರೆ, ಉದ್ಯೋಗಿಯು ಕಂಪನಿಯಿಂದ ನಿವೃತ್ತನಾದಾಗ ಅಥವಾ ಸೇವೆಗೆ ರಾಜಿನಾಮೆ ಸಲ್ಲಿಸಿದಾಗ ನೀಡಲಾಗುವ ಮೊತ್ತವಿದು.
ಹಲವು ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರು ಗ್ರಾಚ್ಯುಟಿ (Gratuity) ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಪ್ರತಿಭಟನೆಗಳು ಹೋರಾಟಗಳನ್ನು ಮಾಡುತ್ತಿದ್ದರು. ಇದೀಗ ಕೇಂದ್ರ ಸಚಿವ ವಿ.ಸೋಮಣ್ಣ ಅಂಗನವಾಡಿ ಕಾರ್ಯಕರ್ತೆಯರಿಗೆ (Anganwadi workers) ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಗ್ರಾಚುಯಿಟಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಬಗ್ಗೆ ಚರ್ಚಿಸಲು ಕೇಂದ್ರಕ್ಕೆ ನಿಯೋಗವನ್ನು ಕರೆದೊಯ್ಯುತ್ತೇನೆ ಎಂದು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ (Karnataka State) ಅಂಗನವಾಡಿ ನೌಕರರ ಸಂಘದಿಂದ ನಗರದ ಶಿಕ್ಷಕರ ಸದನದಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ನನಗೆ ಅಪಾರ ಹೆಮ್ಮೆ, ಗೌರವ ಇದೆ. ಕೋವಿಡ್‌ನಂತಹ (covid) ಭೀಕರ ಪರಿಸ್ಥಿತಿಯಲ್ಲಿ ಜನರು ಹೊರಗಡೆ ಹೋಗಲು ಭಯಪಡುತ್ತಿದ್ದಂತಹ ಆ ಸಂದರ್ಭದಲ್ಲಿ ಕೂಡ ಅಂಗನವಾಡಿ ಕಾರ್ಯಕರ್ತೆಯರು ಮಾಡಿದಂತಹ ಸೇವೆ ಶ್ಲಾಘನೀಯ ಎಂದರು. ಆದ್ದರಿಂದ ಅಂಗನವಾಡಿ ಕಾರ್ಯಕರ್ತೆಯರು ತಾವು ಮಾಡಿದ ಸೇವೆ ಹಾಗೂ ಪರಿಶ್ರಮಕ್ಕೆ ತಕ್ಕನಾದಂತಹ ಬೆಲೆ ಕೊಡಲೇಬೇಕು. ಆದ್ದರಿಂದ ನ್ಯಾಯಯುತವಾಗಿ ಮುಂದಿಟ್ಟಿರುವ ಬೇಡಿಕೆಗಳನ್ನು ಪರಿಗಣಿಸುತ್ತೇವೆ ಎಂದು ಭರವಸೆ ನೀಡಿದರು. ಹಾಗೂ ಗ್ರಾಚುಯಿಟಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಬಗ್ಗೆ ಚರ್ಚಿಸಲು 3 ತಿಂಗಳಲ್ಲಿ ನಿಯೋಗವನ್ನು ತೆಗೆದುಕೊಂಡು ಹೋಗುತ್ತೇನೆ ಎಂದು ಹೇಳಿದ್ದಾರೆ.
ಬೇಡಿಕೆಗಳು:
ಕನಿಷ್ಠ ವೇತನ 26,000 ರು. ನಿಗದಿ, ಸುಪ್ರೀಂಕೋರ್ಟ್ ತೀರ್ಪಿನಂತೆ (Supreme Court decision) ಗ್ರ್ಯಾಚುಯಿಟಿ (Gratuity) ನೀಡುವುದು, ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು (ಐಸಿಡಿಎಸ್) ‘ಕಾಯ್ದೆ’ಯಾಗಿ ರೂಪಿಸಬೇಕು. ಪೌಷ್ಠಿಕ ಆಹಾರ ಮತ್ತು ಪೂರ್ವ ಪ್ರಾಥಮಿಕ ಶಿಕ್ಷಣ ‘ಹಕ್ಕು’ ಆಗಬೇಕು. ಐಸಿಡಿಎಸ್ ಯೋಜನೆಯ ಬಜೆಟ್ ಹೆಚ್ಚಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಕೊಡುವ ಪೂರಕ ಪೌಷ್ಠಿಕ ಆಹಾರಕ್ಕೆ ಜಿಎಸ್‌ಟಿ ವಿಧಿಸುವುದನ್ನು ನಿಲ್ಲಿಸಬೇಕು. ವಿವಿಧ ಚುನಾವಣಾ ಕೆಲಸಗಳಿಂದ ಮುಕ್ತಿ ಸೇರಿದಂತೆ ಇನ್ನಿತರ ಬೇಡಿಕೆಗಳ ಪಟ್ಟಿಯನ್ನು ಕೇಂದ್ರ ಸಚಿವ ಸೋಮಣ್ಣ ಅವರಿಗೆ ಅಂಗನವಾಡಿ ನೌಕರರ ಸಂಘದಿಂದ ಹಸ್ತಾಂತರಿಸಲಾಯಿತು.
ವಿಚಾರ ಸಂಕಿರಣದಲ್ಲಿ ಸಂಘದ ಅಧ್ಯಕ್ಷೆ ಎಸ್. ವರಲಕ್ಷ್ಮೀ ಸೇರಿದಂತೆ ವಿವಿಧ ರಾಜ್ಯಗಳ ಅಂಗನವಾಡಿ ಸಂಘಗಳ ಮುಖಂಡರು ಭಾಗವಹಿಸಿದ್ದರು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group




