ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ‘ಅನ್ನಭಾಗ್ಯ ಯೋಜನೆ’ಯ ಮಾರ್ಚ್ ತಿಂಗಳ ಹಣ ಈಗಾಗಲೇ ಜನರ ಖಾತೆಗೆ ಜಮಾ ಆಗಿದೆ. ನಿಮ್ಮ ಖಾತೆಗೂ ಕೂಡ ಹಣ ಜಮಾ ಆಗಿದೆಯೇ ಎಂಬುದನ್ನು ಡಿಬಿಟಿ ಸ್ಟೇಟಸ್ ಚೆಕ್ ಮಾಡುವುದರ ಮೂಲಕ ಅಥವಾ ನಿಮ್ಮ ಖಾತೆಯನ್ನು ಚೆಕ್ ಮಾಡುವುದರ ಮೂಲಕ ನೋಡಿಕೊಳ್ಳಬಹುದಾಗಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಮಾರ್ಚ್ ತಿಂಗಳ ಅನ್ನ ಭಾಗ್ಯ (Annabhagya scheme) ಹಣ ಬಂದಿದೆ :
ರಾಜ್ಯ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ 170 ರೂಪಾಯಿ ಹಣ ನೀಡುತ್ತಿದೆ. ಆದರೆ ಕಳೆದ ಕೆಲವು ದಿನಗಳ ಹಿಂದೆ ಹಣದ ಬದಲಾಗಿ ಅಕ್ಕಿಯನ್ನೇ ಕೊಡುತ್ತೇವೆ ಎಂದು ಹೇಳಲಾಗಿತ್ತು. ಆದರೆ ಅಕ್ಕಿಯನ್ನು ಹೊಂದಿಸೋದು ಸಾಧ್ಯವಾಗದೇ ಇರುವ ಹಿನ್ನೆಲೆಯಲ್ಲಿ ಹಣವನ್ನು ಸರ್ಕಾರ ಯಜಮಾನಿಯ ಖಾತೆಗೆ ನೇರವಾಗಿ DBT ಮೂಲಕ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೆ ಹಂತ ಹಂತವಾಗಿ ಈ ಹಣ ವರ್ಗಾವಣೆ ಆಗುತ್ತದೆ. ನಿಮ್ಮ ಖಾತೆಗೆ ಹಣ ವರ್ಗಾವಣೆ ಆಗಿದ್ದೇವೆಯೇ?, ಎಷ್ಟು ಹಣ ಬಂದಿದೆ?, ಯಾರ ಖಾತೆಗೆ ಹಣ ವರ್ಗಾವಣೆ ಆಗಿದೆ ಎಂಬುದನ್ನು ತಿಳಿಯಲು ಸರ್ಕಾರವು ಒಂದು ಅಧಿಕೃತ ಜಾಲತಾಣ(ವೆಬ್ಸೈಟ್)ವನ್ನು ಬಿಡುಗಡೆ ಮಾಡಿದೆ. ಹಾಗಾಗಿ ನೀವು ಸ್ಟೇಟಸ್ ಅನ್ನು ನೋಡಿ ತಿಳಿದುಕೊಳ್ಳಬಹುದಾಗಿದೆ.
ಎಲ್ಲಾ ಸರಿ ಇದ್ರೂ ಹಣ ಬಂದಿಲ್ಲ ಅನ್ನೋರು ಇದೊಂದು ಪ್ರಯತ್ನ ಮಾಡಿ
ಎಲ್ಲ ದಾಖಲಾತಿ ಸರಿ ಇದ್ದವರು ಮತ್ತೊಮ್ಮೆ ಪೋಸ್ಟ್ ಆಫೀಸ್ನಲ್ಲಿ ಒಂದು ಹೊಸ ಖಾತೆಯನ್ನು ತೆರೆಯುವುದು ಉತ್ತಮ, ಅಥವಾ ಯಾವುದೇ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಖಾತೆಯನ್ನು ತೆರೆಯಿರಿ ಉದಾ : ಬ್ಯಾಂಕ್ ಆಫ್ ಬರೋಡ, ಕೆನರಾ, SBI, ಎಲ್ಲಾ ಸರಿ ಇದ್ರೂ ಹಣ ಬರ್ತಿಲ್ಲ ಅಂದ್ರೆ ಅದು ಬ್ಯಾಂಕ್ ಆಧಾರ್ ಸೀಡಿಂಗ್ ಸಮಸ್ಯೆಯೂ ಆಗಿರಬಹುದು ಹಾಗಾಗಿ ಹೊಸ ಖಾತೆಯನ್ನು ನೀವು ಆಧಾರ್ ದೃಢೀಕರಣ ಮೂಲಕ ತೆರೆದಾಗ DBT ವರ್ಗಾವಣೆ ಸುಲಭವಾಗಿ ಆಗುತ್ತದೆ. ಇದೊಂದು ಪ್ರಯತ್ನ ಮಾಡಿ ನೋಡಿ.
ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯದ ಹಣ ಬಂದಿಲ್ವ?
ಇದುವರೆಗೂ ಒಂದು ಕಂತಿನ ಹಣ ಬಂದಿಲ್ಲ ಎನ್ನುವ ಮಹಿಳೆಯರಿಗೆ ಸರ್ಕಾರದಿಂದ ಈಗಾಗಲೇ ತಿಳಿಸಿರುವಂತೆ, ನೀವು ನಿಮ್ಮ ಬ್ಯಾಂಕ್ ಗೆ ಹೋಗಿ ಈ ಕೆವೈಸಿ (EKYC)ಪರಿಶೀಲನೆ ಮಾಡಿಕೊಳ್ಳಬೇಕು ಜೊತೆಗೆ, ಎನ್‌ಪಿಸಿಐ ಮ್ಯಾಪಿಂಗ್ (NPCI mapping) ಕೂಡ ಮಾಡಿಸಬೇಕು.
ಡಿಸೆಂಬರ್ ತಿಂಗಳಲ್ಲಿ ಆಧಾರ್ ಮತ್ತು ಬ್ಯಾಂಕ್ ಅಕೌಂಟ್ NPCI ಮ್ಯಾಪಿಂಗ್ ಮಾಡಿಸಿಕೊಂಡ ನಂತರ ಹಲವಾರು ಮಹಿಳೆಯರಿಗೆ January ತಿಂಗಳು 23 24 ಮತ್ತು 25ನೇ ತಾರೀಕಿನಂದು ಸತತವಾಗಿ 2 ಸಾವಿರ ರೂಪಾಯಿಗಳಂತೆ ಒಟ್ಟು ಹತ್ತು ಸಾವಿರ ರೂಪಾಯಿಗಳನ್ನ ರಾಜ್ಯ ಸರ್ಕಾರದಿಂದ ಜಮಾ ಮಾಡಲಾಗಿದೆ. ಹಾವೇರಿ ಜಿಲ್ಲೆಯ ಮಹಿಳೆಯೊಬ್ಬರಿಗೆ ಹಣ ಜಮಾ ಆಗಿರುವ ಡಿಬಿಟಿ ಸ್ಟೇಟಸ್ ಕೆಳಗೆ ನೀವು ನೋಡಬಹುದು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಅನ್ನಭಾಗ್ಯದ ಹಣ ಜಮಾ ಆಗಿದೆಯೇ ಎಂಬುದನ್ನು ನೋಡುವ ವಿಧಾನ :
ಹಂತ 1: ಮೊದಲನೆಯದಾಗಿ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಯ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ
ಹಂತ 2: ನಂತರ ನಿಮ್ಮ ಜಿಲ್ಲೆಯ ಮೇಲಿನ ಲಿಂಕನ್ನು ಕ್ಲಿಕ್ ಮಾಡಿ.
ಹಂತ 3 : ನಂತರ ಕೆಳಗಿನ ಭಾಗದಲ್ಲಿರುವ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
ಹಂತ 4: ಮುಂದುವರೆದುನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ. ನಂತರ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವವರ ಸದಸ್ಯರ ಸಂಖ್ಯೆ, ಮುಖ್ಯಸ್ಥರ ಹೆಸರು, ಸದಸ್ಯರ ಯುಐಡಿ, ಎಷ್ಟು ಹಣ ಜಮಾ ಆಗುತ್ತದೆ ಅಥವಾ ಆಗಿದೆ ಎಂಬುದರ ಮಾಹಿತಿಯನ್ನು ನೀವು ನೋಡಬಹುದು.
ಹೀಗೆ ನೀವು ಅನ್ನಭಾಗ್ಯ ಯೋಜನೆಯಡಿಯಲ್ಲಿನ ಹಣವು ನಿಮಗೆ ಜಮಾ ಆಗಿದೆಯೇ ಅಥವಾ ಅದರ ಸ್ಥಿತಿ ಹೇಗಿದೆ ಎಂಬುವುದನ್ನು ಚೆಕ್ ಮಾಡಬಹುದು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಚಂದ್ರ ಗ್ರಹಣ ಸಂಪೂರ್ಣ ಮಾಹಿತಿ! ಕರ್ನಾಟಕದಲ್ಲಿ ಕಾಣಿಸುತ್ತಾ ಚಂದ್ರಗ್ರಹಣ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
- SSP ವಿದ್ಯಾರ್ಥಿ ವೇತನ 2024, ಆನ್ಲೈನ್ ಅರ್ಜಿ ಸಲ್ಲಿಸಿ | Karnataka SSP Scholarship 2024
- ಕರ್ನಾಟಕ ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಡೆಯಲು ಕೂಡಲೇ ಅರ್ಜಿ ಸಲ್ಲಿಸಿ! ಇಲ್ಲಿದೆ ಸಂಪೂರ್ಣ ಮಾಹಿತಿ
- ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಈ ಮಹಿಳೆಯರಿಗೆ 6 ಮತ್ತು 7ನೇ ಕಂತಿನ ಗೃಹಲಕ್ಷ್ಮಿ 2000/- ಹಣ ಜಮೆ ಆಗೋಲ್ಲ, ಇಲ್ಲಿದೆ ಕಾರಣ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.