ಅನ್ನ ಭಾಗ್ಯ : ₹850 ನೇರವಾಗಿ ಬ್ಯಾಂಕ್ ಖಾತೆಗೆ ಜಮಾ, ಇಂದು 5 ಗಂಟೆಗೆ ಪಡಿತರ ಚೀಟಿ ಹೊಂದಿದವರ ಖಾತೆಗೆ ಬೀಳಲಿದೆ ಹಣ – ಇಲ್ಲಿದೆ ಡೈರೆಕ್ಟ್ ಲಿಂಕ್

Picsart 23 07 10 14 18 35 090 scaled

ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ಅನ್ನ ಭಾಗ್ಯದ ಹಣ ಬಿಡುಗಡೆಯಾಗುವ ಕುರಿತು ಮಾಹಿತಿ ನೀಡಲಾಗುತ್ತದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ (Guarantee Scheme) ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆ ಅನ್ನಭಾಗ್ಯ. ಅನ್ನಭಾಗ್ಯ ಯೋಜನೆ ಜುಲೈ ಒಂದರಿಂದಲೇ ಜಾರಿ ಆಗಬೇಕಿತ್ತು. ಅಕ್ಕಿ ಸಿಗದ ಕಾರಣ ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿಯೊಂದಿಗೆ  5 ಕೆಜಿ ಅಕ್ಕಿಗೆ ಹಣ ಹಾಕಲು ಸರ್ಕಾರ ನಿರ್ಧಾರ ಮಾಡಿದೆ. ಅನ್ನಭಾಗ್ಯ ಯೋಜನೆಯ ( Anna Bhagya Scheme ) ಅಡಿಯಲ್ಲಿ ಐದು ಕೆಜಿ ಹೆಚ್ಚುವರಿ ಅಕ್ಕಿಯ ಬದಲಾಗಿ ಹಣ ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಘೋಷಣೆ ಮಾಡಿದ್ದರು. ಅದರಂತೆ ಸಂಜೆ 5 ಗಂಟೆಗೆ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಹಣ ವರ್ಗಾವಣೆಗೆ ಸಿಎಂ ಚಾಲನೆ ನೀಡಲಿದ್ದಾರೆ.

ಹಣ ಭಾಗ್ಯ ಹೇಗೆ?

ನೀವು ಬಿಪಿಎಲ್ ಪಡಿತರ ಕಾರ್ಡ್‍ದಾರರಾಗಿರಬೇಕು. ರೇಷನ್ ಕಾರ್ಡ್‍ಗೆ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು. ಆಧಾರ್ – ಬ್ಯಾಂಕ್ ಖಾತೆ ಲಿಂಕ್ ಆಗದೇ ಇದ್ದರೆ ದುಡ್ಡು ಬರುವುದಿಲ್ಲ. ಕಾರ್ಡ್‌ನಲ್ಲಿ ಯಜಮಾನರಾಗಿರುವವರ ಖಾತೆಗೆ ಡಿಬಿಟಿ ಮೂಲಕ ಹಣ. ಅನ್ನಭಾಗ್ಯದ ಯೋಜನೆಗೆ ಯಾವುದೇ ಅರ್ಜಿ ಸಲ್ಲಿಕೆ ಅಗತ್ಯವಿಲ್ಲ.

ಮೈಸೂರು, ಕೋಲಾರದಲ್ಲಿ ಮೊದಲು ‘ಧನಭಾಗ್ಯ’ ಜಾರಿ

ಸೋಮವಾರ ಕೋಲಾರ ಮತ್ತು ಮೈಸೂರು ಜಿಲ್ಲೆಯ ಬಿಪಿಎಲ್ ಕಾರ್ಡ್‍ದಾರರ ಅಕೌಂಟ್‍ಗೆ ಅಮೌಂಟ್ ಹಾಕಿ ಜಾರಿ ಮಾಡಲಿದ್ದಾರೆ. ನಂತರ ಮಂಗಳವಾರ ಉಳಿದ ಜಿಲ್ಲೆಯ ಬಿಪಿಎಲ್ ಕಾರ್ಡ್‍ದಾರರಿಗೆ ಹಣ ಹಾಕಲು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ನಿರ್ಧರಿಸಿದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿapp download

ರಾಜ್ಯದಲ್ಲಿ ಒಟ್ಟು 1.28 ಕೋಟಿ ಬಿಪಿಎಲ್ ಕಾರ್ಡ್‍ದಾರರಿದ್ದಾರೆ. 1.28 ಕೋಟಿ ಪೈಕಿ 99.9% ಆಧಾರ್ ಲಿಂಕ್ ಆಗಿದ್ದು ಬ್ಯಾಂಕ್ ಅಕೌಂಟ್ ಲಿಂಕ್ ಕೂಡ ಆಗಿದೆ. ಬಾಕಿ ಉಳಿದಿರುವ 6 ಲಕ್ಷ ಕಾರ್ಡ್‍ಗಳು ಆಧಾರ್ ಲಿಂಕ್ ಆಗಬೇಕಿದೆ. ಪ್ರತಿ ಕೆಜಿಗೆ 34 ರೂಪಾಯಿ ಲೆಕ್ಕದಲ್ಲಿ ತಲಾ ಒಬ್ಬರಿಗೆ 5 ಕೆಜಿಗೆ 170 ರೂಪಾಯಿ ಅಕೌಂಟ್‍ಗೆ ಬೀಳಲಿದೆ.

ಫಲಾನುಭವಿಗಳ ಖಾತೆಗೆ ಹಣ ಹೇಗೆ ಜಮಾ ಆಗುತ್ತದೆ?

ರಾಜ್ಯದಲ್ಲಿ ಒಟ್ಟು 1 ಕೋಟಿ 28 ಲಕ್ಷ ಬಿಪಿಎಲ್, ಅಂತ್ಯೋದಯ ಕಾರ್ಡ್‌ದಾರರು ಇದ್ದು, 4 ಕೋಟಿ 42 ಲಕ್ಷ ಫಲಾನುಭವಿಗಳಿದ್ದಾರೆ. 1 ಕೋಟಿ 28 ಲಕ್ಷ ಕಾರ್ಡ್ ಗಳ ಪೈಕಿ 99.99% ಆಧಾರ್ ಸೀಡಿಂಗ್ ಆಗಿದೆ. ಇನ್ನುಳಿದ ಬಾಕಿ ಉಳಿದಿರುವ 6 ಲಕ್ಷ ಕಾರ್ಡ್‌ಗಳು ಆಧಾರ್ ಲಿಂಕ್ ಆಗಬೇಕು. ಆಧಾರ್ ಲಿಂಕ್ ಆಗುತ್ತಿದ್ದಂತೆಯೇ ಬ್ಯಾಂಕ್ ಅಕೌಂಟ್ ಕೂಡ ಕಾರ್ಡ್ ಗಳಿಗೆ ಅಪ್ಡೇಟ್ ಆಗುತ್ತದೆ.

ಫಲಾನುಭವಿಗಳ ಖಾತೆಗೆ ನೇರವಾಗಿ DBT ಮೂಲಕ ಹಣ ವರ್ಗಾವಣೆ ಆಗುತ್ತದೆ. ಹಾಗಾಗಿ ಬಿಪಿಎಲ್ ಮತ್ತು ಅಂತೋದಯ ಕಾರ್ಡ ಹೊಂದಿರುವ ಪ್ರತಿಯೊಬ್ಬರು ನಿಮ್ಮ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಕಾರ್ಡನ್ನು ನೀವು ಮ್ಯಾಪಿಂಗ್ ಮಾಡಬೇಕು. ಮತ್ತು ನಿಮ್ಮ ರೇಷನ್ ಕಾರ್ಡ್ ಗೆ ಕಡ್ಡಾಯವಾಗಿ ನಿಮ್ಮ ಆಧಾರ್ ಕಾರ್ಡನ್ನು ಲಿಂಕ್ ಮಾಡಲೇಬೇಕು. ನಿಮ್ಮ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಗೆ ಮ್ಯಾಪಿಂಗ್ ಆಗಿರುವ ಸ್ಟೇಟಸ್ ಹೇಗೆ ಚೆಕ್ ಮಾಡುವುದು ಎಂದು ತಿಳಿದುಕೊಳ್ಳಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

ಆಧಾರ್ ಕಾರ್ಡ್ & ಬ್ಯಾಂಕ್ ಮ್ಯಾಪಿಂಗ್ ಕಡ್ಡಾಯ – ಇಲ್ಲಿದೆ ಚೆಕ್ ಮಾಡುವ ವಿಧಾನ

ನಂತರ ನಿಮ್ಮ ರೇಷನ್ ಕಾರ್ಡಿಗೆ ನಿಮ್ಮ ಆಧಾರ್ ಕಾರ್ಡನ್ನ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಹಾಗಾಗಿ ಇದುವರೆಗೂ ನಿಮ್ಮ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಲಿಂಕ್ ಆಗಿಲ್ಲವೆಂದರೆ ಈಗಲೇ ಲಿಂಕ್ ಮಾಡಿ ಇದರ ಸ್ಟೇಟಸ್ ಅನ್ನು ಚೆಕ್ ಮಾಡಲು ಕೆಳಗಿನ ವಿಡಿಯೋವನ್ನು ನೀವು ವೀಕ್ಷಣೆ ಮಾಡಿ ತಿಳಿದುಕೊಳ್ಳಬಹುದು

ಆಧಾರ್ ಕಾರ್ಡ್ ನೊಂದಿಗೆ  ಡಿಬಿಟಿ ಲಿಂಕ್ ಮಾಡಿ :

ಡಿಬಿಟಿ ಎಂದರೆ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್ಫರ್ ಎಂದರ್ಥ. ಇದರಿಂದಾಗಿ ಮಹಿಳೆಯರ ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಗೃಹಲಕ್ಷ್ಮೀ ಯೋಜನೆಯ ₹2,000 ಮತ್ತು ಅನ್ನಭಾಗ್ಯದ ₹170 ರೂಪಾಯಿ ಜಮಾ ಆಗುತ್ತದೆ. ಹಾಗಾಗಿ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಮುನ್ನ ನಿಮ್ಮ ಆಧಾರ್ ಕಾರ್ಡ್ ಡಿಬಿಟಿ ಲಿಂಕ್ ಆಗಿದೆಯೇ ಇಲ್ಲವೇ ಎಂಬುದನ್ನು ದೃಢಪಡಿಸಿಕೊಳ್ಳಿ.

ನಿಮ್ಮ ಆಧಾರ್ ಕಾರ್ಡ್ ಹಾಗೂ ಡಿಬಿಟಿ ಲಿಂಕ್ ಆಗಿದೆ ಎಂಬುದನ್ನು ಹೇಗೆ ನೋಡುವುದು?:

ಹಂತ 1: ಮೊದಲಿಗೆ ಆಧಾರ್ ಕಾರ್ಡಿನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ. https://resident.uidai.gov.in/bank-mapper

ಹಂತ 2: ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ನೋಂದಣಿ ಮಾಡಿ ಹಾಗೆ ಕ್ಯಾಪ್ಚರ್ ಅನ್ನು ಎಂಟರ್ ಮಾಡಿ.

aa11

ಹಂತ 3: ನಂತರ ನಿಮ್ಮ ಆಧಾರ್ ನಂಬರಿಗೆ ಲಿಂಕ್ ಆಗಿರುವ ಮೊಬೈಲ್ ನಂಬರ್OTP ಬರುತ್ತೆ ಅದನ್ನು ನಮೂದಿಸಿ, ನಂತರ Submit ಮೇಲೆ ಕ್ಲಿಕ್ ಮಾಡಿ

aa12

ಹಂತ 4: ನಂತರ ಅದು ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಯನ್ನು ತೋರಿಸುತ್ತದೆ.

aa13

ಹಂತ 5: ಒಂದು ವೇಳೆ ಲಿಂಕ್ ಆಗದೆ ಇದ್ದಲ್ಲಿ ನೀವು ಹತ್ತಿರದ ಶಾಖೆಗೆ ತೆರಲಿ ಲಿಂಕ್ ಮಾಡಿಸಬೇಕು.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

app download

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!