ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಆಗಸ್ಟ್ ತಿಂಗಳಿನ ಅನ್ನಭಾಗ್ಯ ಯೋಜನೆಯ ಹಣ ಜಮೆ ಆಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಎಲ್ಲಾ ಬಿಪಿಎಲ್(BPL card) ಹಾಗೂ ಅಂತೋದಯ ಪಡಿತರ ಚೀಟಿಗಳನ್ನು(Ration card) ಹೊಂದಿರುವವರಿಗೆ ಆಗಸ್ಟ್ ತಿಂಗಳಿನ ಹಣ ಜಮಾ ಆಗಿದೆ. ನಿಮ್ಮ ಖಾತೆಗೂ ಕೂಡ ಹಣ ಜಮಾ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಹೇಗೆ ಚೆಕ್ ಮಾಡುವುದು?, ಎಂಬುವುದನ್ನು ತಿಳಿಸಿಕೊಡಲಾಗುತ್ತದೆ. ಒಂದು ವೇಳೆ ಹಣ ಜಮಾ ಆಗದಿದ್ದರೆ ಏಕೆ ಜಮಾ ಆಗಿಲ್ಲ? ಮತ್ತು ಅ ಹಣವನ್ನು ಪಡೆಯುವುದು ಹೇಗೆ?, ಎಂಬುದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಆಗಸ್ಟ್ ತಿಂಗಳ ಅನ್ನ ಭಾಗ್ಯ ಯೋಜನೆ(Annabhagya scheme)ಯ ಹಣ ಬಂದಿದೆ :
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ‘ಅನ್ನಭಾಗ್ಯ ಯೋಜನೆ’ಯ ಜುಲೈ ತಿಂಗಳ ಹಣ ಈಗಾಗಲೇ ಜನರ ಖಾತೆಗೆ ಜಮಾ ಆಗಿದೆ. ಇದೀಗ ಆಗಸ್ಟ್ ತಿಂಗಳ ಹಣ ಕೂಡ ಬಿಡುಗಡೆ ಮಾಡಲಾಗಿದೆ. ನಿಮ್ಮ ಖಾತೆಗೂ ಕೂಡ ಹಣ ಜಮಾ ಆಗಿದೆಯೇ ಎಂಬುದನ್ನು ಡಿಬಿಟಿ ಸ್ಟೇಟಸ್ ಚೆಕ್ ಮಾಡುವುದರ ಮೂಲಕ ಅಥವಾ ನಿಮ್ಮ ಖಾತೆಯನ್ನು ಚೆಕ್ ಮಾಡುವುದರ ಮೂಲಕ ನೋಡಿಕೊಳ್ಳಬಹುದಾಗಿದೆ. 31 ಜಿಲ್ಲೆಗಳ ಪೈಕಿ ಬೀದರ್, ಚಿತ್ರದುರ್ಗ, ದಾವಣಗೆರೆ ಮತ್ತು ರಾಮನಗರ ಜಿಲ್ಲೆ ಹಾಗೂ ಇನ್ನು ಕೆಲವು ಜಿಲ್ಲೆಗಳ ಪಡಿತರದಾರದ ಖಾತೆಗೆ ಹಣ ಸಂದಾಯವಾಗಿದ್ದು, ಇನ್ನು 3 ದಿನಗಳಲ್ಲಿ ಎಲ್ಲಾ ಜಿಲ್ಲೆಗಳಿಗೂ ತಲುಪಲಿದೆ.
ಅಕ್ಕಿ ದಾಸ್ತಾನು ಕೊರತೆಯಿಂದ ಅನ್ನಭಾಗ್ಯ ಅಕ್ಕಿಯ ಬದಲು ಹಣ ಜಮೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿತ್ತು. ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೆ ಹಂತ ಹಂತವಾಗಿ ಈ ಹಣ ವರ್ಗಾವಣೆ ಆಗುತ್ತದೆ. ನಿಮ್ಮ ಖಾತೆಗೆ ಹಣ ವರ್ಗಾವಣೆ ಆಗಿದ್ದೇವೆಯೇ?, ಎಷ್ಟು ಹಣ ಬಂದಿದೆ?, ಯಾರ ಖಾತೆಗೆ ಹಣ ವರ್ಗಾವಣೆ ಆಗಿದೆ ಎಂಬುದನ್ನು ತಿಳಿಯಲು ಸರ್ಕಾರವು ಒಂದು ಅಧಿಕೃತ ಜಾಲತಾಣ(ವೆಬ್ಸೈಟ್)ವನ್ನು ಬಿಡುಗಡೆ ಮಾಡಿದೆ. ಹಾಗಾಗಿ ನೀವು ಸ್ಟೇಟಸ್ ಅನ್ನು ನೋಡಿ ತಿಳಿದುಕೊಳ್ಳಬಹುದಾಗಿದೆ.
DBT ಸ್ಟೇಟಸ್ ನಲ್ಲಿ ಹೀಗೆ ಇದ್ದರೆ ಹಣ ಬರುವುದಿಲ್ಲ :
ನಿಮ್ಮ ಖಾತೆಗೆ ಹಣ ಬಂದಿದೆಯೇ ಅಥವಾ ಬಂದಿಲ್ಲದಿದ್ದರೆ ಹೇಗೆ ಚೆಕ್ ಮಾಡುವುದು ಎಂಬುದನ್ನು ನೋಡುವ ವಿಧಾನವನ್ನು ಕೆಳಗೆ ನೀಡಲಾಗಿದೆ. ಅದಕ್ಕೂ ಮುಂಚೆ DBT ಸ್ಟೇಟಸ್ ನಲ್ಲಿ ಹೇಗೆ ಇದ್ದರೆ ಹಣ ಜಮಾ ಆಗುವುದಿಲ್ಲ ಎಂಬುದನ್ನು ತಿಳಿದುಕೊಳ್ಳುವುದು ಅಗತ್ಯ. ಒಂದು ವೇಳೆ ನೀನು ಡಿ ಬಿಬಿಟಿ ಸ್ಟೇಟಸ್ ಚೆಕ್ ಮಾಡಿದಾಗ, Aadhaar authentication check failed ಇಂದು ಬಂದರೆ ನಿಮ್ಮ ಖಾತೆಗೆ ಹಣ ಜಮಾ ಆಗುವುದಿಲ್ಲ ಎಂದರ್ಥ. ನೀವು ಆಧಾರ್ ಕಾರ್ಡನ್ನು ಬ್ಯಾಂಕ್ ಅಕೌಂಟ್ ಗೆ ಲಿಂಕ್ ಮಾಡದಿದ್ದರೆ ಈ ಮೆಸೇಜ್ ಬರುತ್ತದೆ. ಹಾಗಾಗಿ ನೀವು ಬ್ಯಾಂಕಿಗೆ ತೇರಳಿ, ಬ್ಯಾಂಕಿನ NPCI ಲಿಂಕ್ ಅನ್ನು ಆಧಾರ್ ಕಾರ್ಡಿನೊಂದಿಗೆ ಮಾಡಿಸಿದರೆ ಮುಂದಿನ ತಿಂಗಳ ಹಣ ಹಾಗೂ ಇನ್ನಿತರ ಯೋಜನೆಗಳ ಉಪಯೋಗವನ್ನು ನೀವು ಪಡೆದುಕೊಳ್ಳಬಹುದಾಗಿದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಅನ್ನಭಾಗ್ಯದ ಹಣ ಜಮಾ ಆಗಿದೆಯೇ ಎಂಬುದನ್ನು ನೋಡುವ ವಿಧಾನ :
ಹಂತ 1: ಮೊದಲನೆಯದಾಗಿ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಯ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ
https://ahara.kar.nic.in/Home/Eservices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಮುಖ ಪುಟ ತೆಗೆಯುತ್ತದೆ ಅದರಲ್ಲಿ ಈ ಸ್ಟೇಟಸ್ ಎಂಬ ಆಯ್ಕೆಯನ್ನು ಒತ್ತಿ, ನಂತರ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
ಹಂತ 2: ನಂತರ ನಿಮ್ಮ ಜಿಲ್ಲೆಯ ಮೇಲಿನ ಲಿಂಕನ್ನು ಕ್ಲಿಕ್ ಮಾಡಿ.
ಹಂತ 3 : ನಂತರ ಕೆಳಗಿನ ಭಾಗದಲ್ಲಿರುವ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
ಹಂತ 4: ಮುಂದುವರೆದು ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ. ನಂತರ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವವರ ಸದಸ್ಯರ ಸಂಖ್ಯೆ, ಮುಖ್ಯಸ್ಥರ ಹೆಸರು, ಸದಸ್ಯರ ಯುಐಡಿ, ಎಷ್ಟು ಹಣ ಜಮಾ ಆಗುತ್ತದೆ ಅಥವಾ ಆಗಿದೆ ಎಂಬುದರ ಮಾಹಿತಿಯನ್ನು ನೀವು ನೋಡಬಹುದು.
ಹೀಗೆ ನೀವು ಅನ್ನಭಾಗ್ಯ ಯೋಜನೆಯಡಿಯಲ್ಲಿನ ಹಣವು ನಿಮಗೆ ಜಮಾ ಆಗಿದೆಯೇ ಅಥವಾ ಅದರ ಸ್ಥಿತಿ ಹೇಗಿದೆ ಎಂಬುವುದನ್ನು ಚೆಕ್ ಮಾಡಬಹುದು.
ಅನ್ನಭಾಗ್ಯ ಯೋಜನೆಯ ಹಣ ಜಮೆ ಆಗಿರುವುದರ ಬಗ್ಗೆ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಸರ್ ಬರಿ ಗ್ರಾಮ ಪಂಚಾಯಿತಿ ಮಾತ್ರ ಸ್ಟೇಟಸ್ ಬರ್ತಾ ಇದೆ ಪಟ್ಟಣ ಪಂಚಾಯಿತಿದು ಹೇಗೆ ಚೆಕ್ ಮಾಡುವುದು
ಸರ್ ಪಟ್ಟಿಯಲ್ಲಿ ಗ್ರಾಮ ಪಂಚಾಯಿತಿಯ ಹೆಸರುಗಳು ಮಾತ್ರ ಬರುತ್ತಾ ಇದೆ ಆದರೆ ಪಟ್ಟಣ ಪಂಚಾಯಿತಿ ಹೆಸರು ಹೇಗೆ ಚೆಕ್ ಮಾಡುವುದು
No ration amount is not come