ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ಡಿ ಬಿ ಟಿ ಮೂಲಕ ಅನ್ನಭಾಗ್ಯ ಗೃಹಲಕ್ಷ್ಮಿ ಅಥವಾ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ ಚೆಕ್ ಮಾಡುವ ವಿಧಾನವನ್ನು ನಿಮಗೆ ತಿಳಿಸಿಕೊಡಲಾಗುತ್ತದೆ, ಹೌದು, ಬಹಳಷ್ಟು ಜನ ಆಹಾರ ಮತ್ತು ಸರಬರಾಜು ಇಲಾಖೆಯ ವೆಬ್ಸೈಟ್ ಮೂಲಕ DBT ಸ್ಟೇಟಸ್ ಅನ್ನು ಚೆಕ್ ಮಾಡಲು ಪ್ರಯತ್ನಿಸುತ್ತಿರುವ ಕಾರಣ ವೆಬ್ ಸೈಟ್ ಸರ್ವರ್ ಸಮಸ್ಯೆಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಹಾಗಾಗಿ ನೀವು ಈ ಕೆಳಗೆ ಕೊಡಲಾದ ವಿಧಾನದ ಮೂಲಕ ನಿಮ್ಮ ಅನ್ನ ಭಾಗ್ಯ ಯೋಜನೆಯ ಡಿ ಬಿ ಟಿ ನೇರ ನಗದು ವರ್ಗಾವಣೆ ಚೆಕ್ ಮಾಡಬಹುದು. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಅನ್ನಭಾಗ್ಯ DBT ನೇರ ನಗದು ವರ್ಗಾವಣೆ ಸ್ಟೇಟಸ್ ಹೀಗೆ ಚೆಕ್ ಮಾಡಿ:
DBT-ಅನ್ನಭಾಗ್ಯ,ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ ಸ್ಥಿತಿಯನ್ನು ನಾವು ನೇರವಾಗಿ ನಮ್ಮ ಮೊಬೈಲ್ ನಲ್ಲಿ ಆಂಡ್ರಾಯ್ಡ್ ಅಪ್ಲಿಕೇಶನ್ ಮೂಲಕ ಮಾಡಬಹುದು
ಹಂತ 1: ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಉಚಿತವಾಗಿ ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka

ಹಂತ 2: ಫಲಾನುಭವಿಯ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ಹಂತ 3: ಈಗ ನಿಮ್ಮ ಆಧಾರ್ ನಂಬರ್ ಅನ್ನು ಹಾಕಿ Get OTP ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿ ಹಾಕಿದ ನಂತರ verify OTP ಮೇಲೆ ಕ್ಲಿಕ್ ಮಾಡಿ ನಂತರ ಇಲ್ಲಿ ನಿಮ್ಮ ಆಧಾರ್ ಕಾರ್ಡ್ ಡೀಟೇಲ್ಸ್ ಕಾಣಿಸುತ್ತದೆ


ಹಂತ 4: ನಂತರ ಇಲ್ಲಿ ನೀವು ಪಾಸ್ವರ್ಡ್ ಅನ್ನು ಆಯ್ಕೆ ಮಾಡಬೇಕಾಗುತ್ತದೆ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ಹಂತ 4: ಈಗ ಹೋಂ ಪೇಜ್ ನಲ್ಲಿ ನೀವು Payment status ಮೇಲೆ ಕ್ಲಿಕ್ ಮಾಡಿ. ಅನ್ನಭಾಗ್ಯದ ಡಿಬಿಟಿ ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದು. ಮತ್ತು ಪಕ್ಕದಲ್ಲಿರುವ Seeding status of Adhaar in bank account ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಆಧಾರ್ ಸೀಡಿಂಗ್ ಸ್ಟೇಟಸ್ ಅನ್ನು ಮತ್ತು ಯಾವ ಬ್ಯಾಂಕಿಗೆ ಸೀಡಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು

ಹಂತ 5: ಇಲ್ಲಿ ನಿಮಗೆ ಸರ್ಕಾರದಿಂದ ಇದುವರೆಗೂ ಬಂದಿರುವ ಯಾವುದೇ ನೇರ ನಗದು ವರ್ಗಾವಣೆಯ ಸ್ಥಿತಿ ಕಾಣಿಸಿಕೊಳ್ಳುತ್ತದೆ

ಈ ಯೋಜನೆಯ ಉಪಯೋಗವನ್ನು ಪಡೆದುಕೊಳ್ಳಲು ಕೆಳಗಿನ ವಿಷಯಗಳನ್ನು ಕಡ್ಡಾಯವಾಗಿ ಮಾಡಬೇಕು:
ಮೊದಲನೇಯದಾಗಿ, ನಿಮ್ಮ ಪಡೆತರ ಚೀಟಿ ( ರೇಷನ್ ಕಾರ್ಡ್) ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಆಗಿದೆಯೇ ಅನ್ನುವುದನ್ನು ಪರಿಶೀಲಿಸಿ, ಇಲ್ಲವಾದಲ್ಲಿ ಶೀಘ್ರದಲ್ಲೆ ನಿಮ್ಮ ರೇಷನ್ ಕಾರ್ಡ್ ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡಿಸಿ.
ಎರಡೇನೇಯದಾಗಿ, ರೇಷನ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಅಕೌಂಟ್ ನಿಮ್ಮ ಆಧಾರ್ ಕಾರ್ಡ್ ಜೊತೆಗೆ ಸೀಡಿಂಗ್ ಆಗಿಬೇಕು, ಅಂದರೆ NPC Mapping ಆಗಿರ್ಬೇಕು ನಿಮ್ಮ ಬ್ಯಾಂಕ್ ಅಕೌಂಟ್ ಸೀಡಿಂಗ್ ಮಾಡಬೇಕಾಗುತ್ತದೆ. ಏಕೆಂದರೆ ಸರ್ಕಾರವು ಡಿಬಿಟಿ ಮುಖಾಂತರ ಹಣವನ್ನು ಜಮಾಯಿಸುತ್ತದೆ, ಹಾಗಾಗಿ ಪಡೆತದಾರರ ಬ್ಯಾಂಕ್ ಅಕೌಂಟ್ ಮತ್ತು ಆಧಾರ್ ಕಾರ್ಡ್ ಸೀಡಿಂಗ್ ಮಾಡಬೇಕಾಗುತ್ತದೆ ಮತ್ತು NPC ಸರ್ವರ್ ಗೆ Mapping ಆಗಬೇಕಾಗುತ್ತದೆ.
ಕಳೆದ 3 ತಿಂಗಳುಗಳಲ್ಲಿ ಪಡಿತರ ಆಹಾರ ಧಾನ್ಯವನ್ನು ಪಡೆದುಕೊಂಡಿರುವ ಕುಟುಂಬಗಳು ನಗದು ವರ್ಗಾವಣೆ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತವೆ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳಲ್ಲಿನ ಮುಖ್ಯಸ್ಥರು ಬ್ಯಾಂಕ್ ಖಾತೆಗಳನ್ನು ತೆರೆಯದೇ ಇರುವ, ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದೇ ಇರುವ ಮತ್ತ ಆಧಾರ್ ಸಂಖ್ಯೆ ತಪ್ಪಾಗಿ ಲಿಂಕ್ ಆಗಿರುವ ಫಲಾನುಭವಿ ಕುಟುಂಬಗಳ ಪಟ್ಟಿಗಳು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಲಭ್ಯವಿರುತ್ತದೆ.
ಪಡಿತರ ಚೀಟಿದಾರರು ತಮ್ಮ ನ್ಯಾಯಬೆಲೆ ಅಂಗಡಿಯಲ್ಲಿರುವ ಪಟ್ಟಿಯನ್ನು ವೀಕ್ಷಿಸಿ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಸಕ್ರಿಯ ಬ್ಯಾಂಕ್ ಖಾತೆಯನ್ನು ಹೊಂದಿಲ್ಲದಿದ್ದರೆ, ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಣೆ ಮಾಡದಿದ್ದರೆ, ಬ್ಯಾಂಕ್ ಖಾತೆಯ ಮಾಹಿತಿಯು ಇದುವರೆಗೆ ಲಭ್ಯವಿಲ್ಲದಿದ್ದಲ್ಲಿ, ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯ ಮಾಹಿತಿಯನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಿ, ನಿಷ್ಕ್ರಿಯ ಬ್ಯಾಂಕ್ ಖಾತೆಯನ್ನು ಪುನರ್ಜೀವನಗೊಳಿಸಿದ ನಂತರ ಅಂತಹ ಪಡಿತರ ಚೀಟಿ ಕುಟುಂಬದ ಮುಖ್ಯಸ್ಥರ ಖಾತೆಗೆ ನಗದು ವರ್ಗಾವಣೆ ಮಾಡಲಾಗುತ್ತದೆ.ಜುಲೈ ತಿಂಗಳ 20 ನೇ ತಾರೀಖಿನೊಳಗೆ ತಮ್ಮ ಸಕ್ರಿಯ ಬ್ಯಾಂಕ್ ಖಾತೆಯ ಮಾಹಿತಿಯನ್ನು ನೀಡಿದ ಪಡಿತರ ಕುಟುಂಬಗಳಿಗೆ ಆಗಸ್ಟ್ ತಿಂಗಳಿನಲ್ಲಿ ನಗದು ವರ್ಗಾವಣೆ ಸೌಲಭ್ಯ ದೊರಕುತ್ತದೆ.
ಅನ್ನಭಾಗ್ಯ ಯೋಜನೆಯ ಹಣ ಪಡೆಯಲು 3 ಕೆಲಸವನ್ನು ಕಡ್ಡಾಯವಾಗಿ ಮಾಡಬೇಕು?
- ಪಡಿತರ ಚೀಟಿಯಲ್ಲಿ ಇರುವ ಮುಕ್ಯಸ್ತನ ಹೆಸರಲ್ಲಿ ಒಂದು ಅಕೌಂಟ್ ಇರಬೇಕು
- ನಿಮ್ಮ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ನ್ನೂ ಲಿಂಕ್ ಮಾಡಿರಬೇಕು
- ನಿಮ್ಮ ಅಕೌಂಟ್ ಗೆ ಆಧಾರ್ ಕಾರ್ಡ್ ನ್ನೂ ಲಿಂಕ್ ಮಾಡಿರಬೇಕು ( NPCI map ಆಗಿರಬೇಕು)
ನಿಮ್ಮ ಬ್ಯಾಂಕ್ ಅಕೌಂಟ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಿದಿಯ ಎಂದು ತಿಳಿಯುವ ಲಿಂಕ್ ????
ನಿಮ್ಮ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಡೈರೆಕ್ಟ್ ಲಿಂಕ್ ಇಲ್ಲಿದೆ ????
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
| ಪ್ರಮುಖ ಲಿಂಕುಗಳು |
| ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ |
Download App |
| ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group









