Picsart 25 08 07 23 01 30 224 1024x575 1

₹1 ಲಕ್ಷ ರೂಪಾಯಿ ಉಚಿತ ಇನ್ಫೋಸಿಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.! ಈಗಲೇ ಅಪ್ಲೈ ಮಾಡಿ

WhatsApp Group Telegram Group

ಭಾರತದಲ್ಲಿ ಶಿಕ್ಷಣವೆಂದರೆ ಕೇವಲ ಕಲಿಕೆ ಅಥವಾ ಪದವಿಯಲ್ಲ, ಅದು ಎಷ್ಟೋ ಜನರ ಕನಸು. ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದ ವರ್ಗದ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣವು ಹಲವಾರು ಬಾರಿ ಅಸಾಧ್ಯವೆನಿಸುತ್ತದೆ. ಕುಟುಂಬದ ಆರ್ಥಿಕ ಒತ್ತಡ, ಅವಕಾಶಗಳ ಕೊರತೆ ಹಾಗೂ ಗ್ರಾಮೀಣ ಭಾಗಗಳಲ್ಲಿ ಸಿಗದ ಮೂಲಸೌಕರ್ಯಗಳು ಅನೇಕ ಪ್ರತಿಭೆಗಳಿಗೆ ನಿರಾಸೆ ಉಂಟುಮಾಡುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಈ ಹಿನ್ನೆಲೆಯಲ್ಲಿ, ಇನ್ಫೋಸಿಸ್ ಫೌಂಡೇಶನ್ (Infosys Foundation) ತನ್ನ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ, STEM ಕ್ಷೇತ್ರದಲ್ಲಿ (Science, Technology, Engineering, Mathematics) ಶಿಕ್ಷಣ ಪಡೆಯುತ್ತಿರುವ ಮಹಿಳಾ ವಿದ್ಯಾರ್ಥಿನಿಯರಿಗೆ ಆರ್ಥಿಕ ಸಹಾಯ ನೀಡುವ ನಿಟ್ಟಿನಲ್ಲಿ Infosys STEM Stars Scholarship 2025 ಯೋಜನೆಯನ್ನು ಘೋಷಿಸಿದೆ. ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ವರ್ಷಕ್ಕೆ ₹1 ಲಕ್ಷದವರೆಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ, ಇದರಿಂದ ಅವರು ತಮ್ಮ ಶೈಕ್ಷಣಿಕ ಕನಸುಗಳನ್ನು ನಿಜಗೊಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಹಾಗಿದ್ದರೆ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

Infosys Scholarship 2025ರ ಪ್ರಮುಖ ಉದ್ದೇಶವೇನು?:

ಈ ಯೋಜನೆಯ ಮುಖ್ಯ ಉದ್ದೇಶವು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿರುವ ಪ್ರತಿಭಾವಂತ ಆದರೆ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣ ಮುಂದುವರಿಸಲು ಅಗತ್ಯವಾದ ಹಣಕಾಸು ನೆರವನ್ನು ಒದಗಿಸುವುದು. ಈ ಮೂಲಕ ದೇಶದ ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ಕ್ಷೇತ್ರಗಳಲ್ಲಿ ಮಹಿಳೆಯರ ಸಂಖ್ಯೆಯನ್ನು ಹೆಚ್ಚಿಸುವುದು ಹಾಗೂ ಅವರಿಗೆ ನಾಯಕತ್ವದ ಅವಕಾಶ ನೀಡುವುದು.

ಈ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು(Eligibility Criteria)?:

Infosys Foundation Scholarship ಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿನಿಯರು ಈ ಕೆಳಗಿನ ಅರ್ಹತೆಯನ್ನು ಹೊಂದಿರಬೇಕು,
ಅರ್ಜಿದಾರರು ಭಾರತದ ಮಹಿಳಾ ವಿದ್ಯಾರ್ಥಿನಿಯರಾಗಿರಬೇಕು.
ಪಿಯುಸಿ (PUC) ಪರೀಕ್ಷೆಯನ್ನು ಉತ್ತೀರ್ಣರಾಗಿರಬೇಕು.
ಕುಟುಂಬದ ವಾರ್ಷಿಕ ಆದಾಯ ₹8 ಲಕ್ಷಕ್ಕಿಂತ ಕಡಿಮೆ ಇರಬೇಕು.
ಸರ್ಕಾರಿ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಅಥವಾ ಮೆಡಿಕಲ್ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವವರು ಸಹ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿವೇತನದ ಮೊತ್ತ(Scholarship Amount) ಎಷ್ಟು?:

ಈ ಯೋಜನೆಯಡಿ ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿನಿಯಿಗೂ ವರ್ಷಕ್ಕೆ
₹ 1,00,000 ವಿದ್ಯಾರ್ಥಿವೇತನ ನೀಡಲಾಗುತ್ತದೆ.
ಇದು ಕೋರ್ಸ್ ಪೂರ್ಣಗೊಳ್ಳುವವರೆಗೂ ಪ್ರತಿ ವರ್ಷ ನೀಡಲಾಗುತ್ತದೆ, ಆದರೆ ವಿದ್ಯಾರ್ಥಿನಿಯರು ನಿಯಮಿತ ಶೈಕ್ಷಣಿಕ ಪ್ರಗತಿಯನ್ನು ಕಾಪಾಡಿಕೊಂಡಿರಬೇಕು.

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು ಯಾವುವು?:

ಅರ್ಜಿ ಸಲ್ಲಿಸಲು ವಿದ್ಯಾರ್ಥಿನಿಯರು ಕೆಳಗಿನ ದಾಖಲೆಗಳ ಸಾಫ್ಟ್ ಕಾಪಿ (PDF / JPG) ಅನ್ನು ಅಪ್ಲೋಡ್ ಮಾಡಬೇಕಾಗುತ್ತದೆ.
ಆಧಾರ್ ಕಾರ್ಡ್
ಬ್ಯಾಂಕ್ ಖಾತೆ ವಿವರ
ಪಾಸ್ಪೋರ್ಟ್ ಸೈಜ್ ಫೋಟೋ
ಎಲ್ಲಾ ಶೈಕ್ಷಣಿಕ ಪ್ರಮಾಣಪತ್ರಗಳು
ಕಾಲೇಜಿನ ಪ್ರವೇಶ ಪ್ರಮಾಣ ಪತ್ರ
ಜಾತಿ ಪ್ರಮಾಣ ಪತ್ರ (ಅಗತ್ಯವಿದ್ದಲ್ಲಿ)
ಕುಟುಂಬದ ಆದಾಯ ಪ್ರಮಾಣ ಪತ್ರ
ಮೊಬೈಲ್ ನಂಬರ್ ಮತ್ತು ಇಮೇಲ್ ಐಡಿ

ಅರ್ಜಿ ಸಲ್ಲಿಸುವ ವಿಧಾನ(Application Process) ಹೇಗೆ?:

ವಿದ್ಯಾರ್ಥಿನಿಯರು ಆನ್‌ಲೈನ್ ಮೂಲಕ ಸರಳ ಹಂತಗಳಲ್ಲಿ ಅರ್ಜಿ ಸಲ್ಲಿಸಬಹುದು.
ಮೊದಲಿಗೆ ಅಧಿಕೃತ ಲಿಂಕ್‌ಗೆ ಭೇಟಿ ನೀಡಿ: https://www.buddy4study.com/page/infosys-stem-stars-scholarship
ನಿಮ್ಮ ಹೆಸರು, ಮೊಬೈಲ್ ನಂಬರ್ ಅಥವಾ ಇಮೇಲ್ ಮೂಲಕ ರಿಜಿಸ್ಟರ್ ಆಗಿ.
ಲಾಗಿನ್ ಆದ ನಂತರ Infosys Foundation Scholarship 2025 ಅಪ್ಲಿಕೇಶನ್ ಆಯ್ಕೆ ಮಾಡಿ.
ನೀಡಲಾದ ಅರ್ಜಿ ಫಾರ್ಮ್ ಅನ್ನು ಸರಿಯಾಗಿ ತುಂಬಿ.
ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
ಎಲ್ಲಾ ಮಾಹಿತಿಯನ್ನು ಪರಿಶೀಲಿಸಿದ ನಂತರ “Submit” ಮೇಲೆ ಕ್ಲಿಕ್ ಮಾಡಿ.

ಗಮನಿಸಿ:
ಕೊನೆಯ ದಿನಾಂಕ (Important Date )
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಅಕ್ಟೋಬರ್ 2025. ಆಸಕ್ತ ಅಭ್ಯರ್ಥಿಗಳು ಶೀಘ್ರದಲ್ಲೇ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಿ. 

ಹೆಚ್ಚಿನ ಮಾಹಿತಿಗೆ:
Website: https://www.buddy4study.com/page/infosys-stem-stars-scholarship
Helpline: 011-430-92248 (Ext-351)
Monday to Friday – 10:00AM to 06:00 PM (IST)
Email: [email protected]

ಒಟ್ಟಾರೆಯಾಗಿ, Infosys Foundation STEM Stars Scholarship 2025 ಯೋಜನೆ ಸಾವಿರಾರು ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ತಮ್ಮ ಶೈಕ್ಷಣಿಕ ಗುರಿಯನ್ನು ಸಾಧಿಸಲು ಬಲವಾದ ವೇದಿಕೆಯನ್ನು ಒದಗಿಸುತ್ತದೆ. ಈ ವಿದ್ಯಾರ್ಥಿವೇತನದ ಮೂಲಕ ಇಂಜಿನಿಯರಿಂಗ್, ವೈದ್ಯಕೀಯ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಹೊಸ ತಲೆಮಾರಿನ ಮಹಿಳಾ ನಾಯಕರನ್ನು ರೂಪಿಸುವ ಗುರಿ ಇದೆ.

WhatsApp Image 2025 09 05 at 10.22.29 AM 21

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

WhatsApp Group Join Now
Telegram Group Join Now

Popular Categories