ಕರ್ನಾಟಕದ ಅರಣ್ಯ ಇಲಾಖೆಯ ವತಿಯಿಂದ ಭರ್ಜರಿ ನೇಮಕಾತಿಯನ್ನು ನಡೆಸಲಾಗುತ್ತದೆ. ಈಗಾಗಲೇ ಅರಣ್ಯ ಇಲಾಖೆಯ ವತಿಯಿಂದ ಅಧಿಸೂಚನೆಯ ಹೊರ ಬಿದ್ದಿದ್ದು, 540 ಅರಣ್ಯ ರಕ್ಷಕರ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಅರ್ಜಿಯನ್ನು ಹೇಗೆ ಸಲ್ಲಿಸುವುದು?, ವಿದ್ಯಾಭ್ಯಾಸ ಏನಿರಬೇಕು ?, ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆಇದೇ ರೀತಿಯ ಎಲ್ಲಾ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಅರಣ್ಯ ರಕ್ಷಕರ ನೇಮಕಾತಿ 2023:
KFD Forest Guard Recruitment 2023: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 2023-24ನೇ ಸಾಲಿನಲ್ಲಿ 540 ಗಸ್ತು ಅರಣ್ಯ ಪಾಲಕ(Forest Guard) (ವೃಂದ ಮತ್ತು ನೇಮಕಾತಿ ನಿಯಮಗಳಂತೆ ‘ಅರಣ್ಯ ರಕ್ಷಕ’) ಗ್ರೂಪ್ ‘ಸಿ’ ಹುದ್ದೆಗಳಿಗೆ ನೇರ ನೇಮಕಾತಿ ನಡೆಸಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್(online) ಮುಖಾಂತರ ಅರ್ಜಿಗಳನ್ನು ದಿನಾಂಕ: 01.12.2023 ರಿಂದ 30.12.2023 ರವರೆಗೆ ಸಲ್ಲಿಸಲು ಅವಕಾಶವಿದ್ದು, ನಿಗದಿತ ಅರ್ಜಿ ಶುಲ್ಕವನ್ನು ಅಂಚೆ ಕಛೇರಿಗಳಲ್ಲಿ ಪಾವತಿಸಲು ಕೊನೆಯ ದಿನಾಂಕ: 05.01.2024ನ್ನು ನಿಗದಿಪಡಿಸಲಾಗಿರುತ್ತದೆ. ಈ ವಿಧಾನವನ್ನು ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿಲ್ಲ.
ಅರಣ್ಯ ರಕ್ಷಕರ ನೇಮಕಾತಿ ಅವಲೋಕನ:
ಇಲಾಖೆ ಹೆಸರು: ಕರ್ನಾಟಕ ಅರಣ್ಯ ಇಲಾಖೆ
ಹುದ್ದೆಯ ಹೆಸರು : ಅರಣ್ಯ ರಕ್ಷಕರು (ಗಸ್ತು ಅರಣ್ಯ ಪಾಲಕರು)
ಒಟ್ಟು ಹುದ್ದೆಗಳ ಸಂಖ್ಯೆ : 540
ಉದ್ಯೋಗ ಸ್ಥಳ : ಕರ್ನಾಟಕ
ಅರಣ್ಯ ರಕ್ಷಕರ ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ : ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ ಹಾಗೂ ವಯಸ್ಸಿನ ಸಡಿಲಿಕೆ :
ಕನಿಷ್ಠ 18 ವರ್ಷಗಳಿಂದ ಗರಿಷ್ಠ 35 ವರ್ಷಗಳನ್ನು ಮೀರಿರಬಾರದು.
(SC/ST): 05 ವರ್ಷ
OBC : 03 ವರ್ಷ
ಅಂಗವಿಕಲ (PWD): 10 ವರ್ಷ ಸಡಿಲಿಕೆ ಇರುತ್ತದೆ.
ಸ್ಯಾಲರಿ ಪ್ಯಾಕೇಜ್ ಎಷ್ಟು?:
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 21400- 42000/- ಜೊತೆಗೆ ಡಿಎ & ಎಚ್.ಆರ್.ಎ ಸೇರಿದಂತೆ ಮುಂತಾದ ಸೌಲಭ್ಯಗಳು ದೊರೆಯುತ್ತದೆ.
ಆಯ್ಕೆ ಪ್ರಕ್ರಿಯೆ :
ದೈಹಿಕ ಪರೀಕ್ಷೆ
ಸ್ಪರ್ಧಾತ್ಮಕ ಪರೀಕ್ಷೆ
ಅರಣ್ಯ ಇಲಾಖೆಯ ಅಧಿಕೃತ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ
ಅರ್ಜಿಯನ್ನು ಸಲ್ಲಿಸುವ ವಿಧಾನ :
ಹಂತ 1: ಮೊದಲಿಗೆ ಇಲಾಖೆಯ ಅಧಿಕೃತ ಜಾಲತಾಣಕ್ಕೆ https://kfdrecruitment.in/ ಇಲ್ಲಿ ಕ್ಲಿಕ್ ಮಾಡಿ
ಹಂತ 2: ನಂತರ ಕೇಳಲಾದ ಎಲ್ಲಾ ಮಾಹಿತಿಗಳನ್ನು ಸಂಪೂರ್ಣವಾಗಿ ಭರ್ತಿ ಮಾಡಿ
ಹಂತ 3: ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ
ಹಂತ 4: ನಂತರ ಅರ್ಜಿ ಶುಲ್ಕಗಳನ್ನು ಅಂಚೆ ಕಚೇರಿಯಲ್ಲಿ ಪಾವತಿಸಬೇಕಾಗುತ್ತದೆ.
ಹಂತ 5: ಕೊನೆಯದಾಗಿ ಸಬ್ಮಿಟ್ ಬಟನ್ ಪ್ರೆಸ್ ಮಾಡುವ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :
ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ : 01.12.2023
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :30.12.2023
ಅರ್ಹ ಹಾಗೂ ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಿ ಹುದ್ದೆಯ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಇಂತಹ ಉತ್ತಮವಾದ ಉದ್ಯೋಗದ ಮಾಹಿತಿಯನ್ನು ಹೊಂದಿರುವ ಈ ವರದಿಯನ್ನು ಕೂಡಲೇ ನಿಮ್ಮೆಲ್ಲ ಸ್ನೇಹಿತ ಮಿತ್ರರಿಗೂ ಹಾಗೂ ಬಂಧು ಬಾಂಧವರಿಗೂ ಶೇರ್ ಮಾಡಿ, ಧನ್ಯವಾದಗಳು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group








