WhatsApp Image 2025 10 17 at 2.44.15 PM

ಸರ್ಕಾರಿ ನೌಕರರಿಗೆ ಸಿಹಿಸುದ್ದಿ : ಆರೋಗ್ಯ ಸಂಜೀವಿನಿ ಯೋಜನೆ: ಈ 70 ಖಾಸಗಿ ಆಸ್ಪತ್ರೆಗಳಿಗೂ ವಿಸ್ತರಣೆ

WhatsApp Group Telegram Group

ಕರ್ನಾಟಕ ರಾಜ್ಯ ಸರ್ಕಾರವು ತನ್ನ ನೌಕರರಿಗೆ ಆರೋಗ್ಯ ಭದ್ರತೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮವೊಂದನ್ನು ಕೈಗೊಂಡಿದೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ 70 ಖಾಸಗಿ ಆಸ್ಪತ್ರೆಗಳನ್ನು ನೋಂದಾಯಿಸಲು ಆದೇಶ ಹೊರಡಿಸಲಾಗಿದೆ. ಈ ಯೋಜನೆಯ ವಿಸ್ತರಣೆಯಿಂದ ಸರ್ಕಾರಿ ನೌಕರರು ಗುಣಮಟ್ಟದ ಆರೋಗ್ಯ ಸೇವೆಗಳನ್ನು ಖಾಸಗಿ ಆಸ್ಪತ್ರೆಗಳಲ್ಲಿ ಪಡೆಯಲು ಅವಕಾಶವನ್ನು ಹೊಂದಲಿದ್ದಾರೆ. ಈ ಕ್ರಮವು ರಾಜ್ಯದ ಸರ್ಕಾರಿ ನೌಕರರಿಗೆ ಆರೋಗ್ಯ ಸೇವೆಗಳನ್ನು ಸುಗಮಗೊಳಿಸುವ ಗುರಿಯನ್ನು ಹೊಂದಿದೆ.

ಸರ್ಕಾರದ ಅಧಿಸೂಚನೆ ಸಂಖ್ಯೆ: ಆಕುಕ 223 ಸಿಜಿಇ 2025, ದಿನಾಂಕ: 17.09.2025 ರಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್‌ಟ್‌ನ ವಿವಿಧ ಯೋಜನೆಯಡಿಯಲ್ಲಿ ನೊಂದಾಯಿತಗೊಂಡಿರುವ ಖಾಸಗಿ ಆಸ್ಪತ್ರೆಗಳನ್ನು “ಭಾವಿತ ನೊಂದಾವಣೆ” ಎಂದು ಪರಿಗಣಿಸಿರುವುದರಿಂದ 186 ಖಾಸಗಿ ಆಸ್ಪತ್ರೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ನೋಂದಾವಣೆಗೊಳಿಸಲಾಗಿರುತ್ತದೆ.
ಮುಂದುವರೆದು, ಆಸ್ಪತ್ರೆಗಳು ಹೊಂದಿರಬೇಕಾದ ಮೂಲ ಸೌಕರ್ಯಗಳು ಹಾಗೂ ಇತರ ಮಾನದಂಡಗಳನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಪರಿಶೀಲಿಸಿಕೊಂಡು, ಆಸ್ಪತ್ರೆಗಳೊಂದಿಗೆ ಸೂಕ್ತ ಒಪ್ಪಂದ (MoU) ಮಾಡಿಕೊಳ್ಳುವ ಷರತ್ತಿಗೊಳಪಟ್ಟು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಇಚ್ಛೆ ವ್ಯಕ್ತಪಡಿಸಿರುವ ಅನುಬಂಧದಲ್ಲಿನ 70 ಖಾಸಗಿ ಆಸ್ಪತ್ರೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ನೋಂದಾವಣೆಗೊಳಿಸಲಾಗಿದೆ.
ಸದರಿ ಅಧಿಸೂಚನೆಯನ್ನು ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 16 ಎಸ್‌ಎಂಆರ್ 2020, ದಿನಾಂಕ:02.04.2025 ರಲ್ಲಿ ನೀಡಿರುವ ಅಧಿಕಾರ ಪ್ರತ್ಯಾಯೋಜನೆಯ ಮೇರೆಗೆ ಹೊರಡಿಸಲಾಗಿದೆ.
ಸಂಕಲನಕಾರರು, ಇ-ರಾಜ್ಯಪತ್ರ, ಬೆಂಗಳೂರು.
ಇವರಿಗೆ:

1. ಪ್ರಧಾನ ಮಹಾಲೇಖಪಾಲಕರು(ಜಿ ಮತ್ತು ಎಸ್‌ ಎಸ್‌ ಎ) /  (ಇ ಆರ್‌ ಎಸ್‌ ಎ) ಬೆಂಗಳೂರು, ಕರ್ನಾಟಕ
2. ಅಭಿವೃದ್ಧಿ ಆಯುಕ್ತರು ಹಾಗೂ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ವಿಧಾನಸೌಧ, ಬೆಂಗಳೂರು.
3. ‘ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು/ಕಾರ್ಯದರ್ಶಿಗಳು
4. ರಾಜ್ಯಪಾಲರ ವಿಶೇಷ ಕಾರ್ಯದರ್ಶಿಯವರು, ರಾಜಭವನ, ಬೆಂಗಳೂರು,
5. ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಆರೋಗ್ಯ ಸೌಧ, ಕುಷ್ಠರೋಗ ಆಸ್ಪತ್ರೆ ಆವರಣ, ಮಾಗಡಿ ರಸ್ತೆ, ಬೆಂಗಳೂರು.

6. ಕಾರ್ಯಕಾರಿ ನಿರ್ದೇಶಕರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್. ಆರೋಗ್ಯ ಸೌಧ, ಕುಷ್ಠರೋಗ ಆಸ್ಪತ್ರೆ ಆವರಣ, ಮಾಗಡಿ ರಸ್ತೆ, ಬೆಂಗಳೂರು.
7. ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಆರೋಗ್ಯ ಸೌಧ, ಕುಷ್ಠರೋಗ ಆಸ್ಪತ್ರೆ ಆವರಣ, ಮಾಗಡಿ ರಸ್ತೆ, ಬೆಂಗಳೂರು.
8. ಶಾಖಾ ರಕ್ಷಾ ಕಡತ/ ಹೆಚ್ಚುವರಿ ಪ್ರತಿ.
ಪ್ರತಿ ಮಾಹಿತಿಗಾಗಿ:
1. ಸರ್ಕಾರದ ಪ್ರಧಾನ ಕಾರ್ಯದರ್ಶಿಯವರ ಆಪ್ತಕಾರ್ಯದರ್ಶಿ. ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ, ವಿಕಾಸಸೌಧ, ಬೆಂಗಳೂರು.
2. ಸರ್ಕಾರದ ಅಪರ ಕಾರ್ಯದರ್ಶಿರವರ ಆಪ್ತ ಸಹಾಯಕರು, ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ, ವಿಕಾಸಸೌಧ, ಬೆಂಗಳೂರು.

WhatsApp Image 2025 10 17 at 2.27.07 PM
WhatsApp Image 2025 10 17 at 2.27.07 PM 1
WhatsApp Image 2025 10 17 at 2.27.07 PM 2
WhatsApp Image 2025 10 17 at 2.27.08 PM
WhatsApp Image 2025 10 17 at 2.27.08 PM 1
WhatsApp Image 2025 10 17 at 2.27.08 PM 2
WhatsApp Image 2025 10 17 at 2.27.08 PM 3
WhatsApp Image 2025 10 17 at 2.27.09 PM
WhatsApp Image 2025 10 17 at 2.27.09 PM 1
WhatsApp Image 2025 10 17 at 2.27.09 PM 2
WhatsApp Image 2025 10 17 at 2.27.10 PM
WhatsApp Image 2025 10 17 at 2.27.10 PM 1
WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories