ವಿದ್ಯಾರ್ಥಿಗಳ ಗಮನಕ್ಕೆ ಕುವೆಂಪು ವಿವಿಯಲ್ಲಿ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.!

WhatsApp Image 2025 08 09 at 11.18.17 AM

WhatsApp Group Telegram Group

ಕುವೆಂಪು ವಿಶ್ವವಿದ್ಯಾಲಯವು 2025-26 ಶೈಕ್ಷಣಿಕ ವರ್ಷಕ್ಕೆ ಸ್ನಾತಕೋತ್ತರ ಪದವಿ (PG) ಮತ್ತು ಸ್ನಾತಕೋತ್ತರ ಡಿಪ್ಲೊಮಾ ಪದವಿಗಳಿಗೆ ಪ್ರವೇಶಾತಿ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಆಗಸ್ಟ್ 18ರವರೆಗೆ ವಿಸ್ತರಿಸಿದೆ. ಮೊದಲು ಆಗಸ್ಟ್ 08 ಅಂತಿಮ ದಿನಾಂಕವಾಗಿ ನಿಗದಿ ಮಾಡಲಾಗಿತ್ತು. ಆದರೆ, ಇತ್ತೀಚೆಗೆ ಹಲವಾರು ವಿಶ್ವವಿದ್ಯಾಲಯಗಳ ಸ್ನಾತಕ ಪದವಿ ಪರೀಕ್ಷಾ ಫಲಿತಾಂಶಗಳು ವಿಳಂಬವಾಗಿ ಬಿಡುಗಡೆಯಾಗುತ್ತಿರುವುದನ್ನು ಪರಿಗಣಿಸಿ, ಹೆಚ್ಚಿನ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸುವ ವಿಧಾನಗಳು

ಅರ್ಹತೆ ಹೊಂದಿದ ವಿದ್ಯಾರ್ಥಿಗಳು ಯುಜಿಸಿ-ಯುಯುಸಿಎಂಎಸ್ (UGC-UUCMS) ಪೋರ್ಟಲ್ ಮೂಲಕ ಆನ್ ಲೈನ್ ಅರ್ಜಿ ಸಲ್ಲಿಸಬಹುದು. ಅಥವಾ, ವಿಶ್ವವಿದ್ಯಾಲಯದ ಸಂಬಂಧಿತ ವಿಭಾಗಗಳಿಗೆ ನೇರವಾಗಿ ಆಫ್ ಲೈನ್ ಮೂಲಕವೂ ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿದೆ. ವಿವರಗಳು ಮತ್ತು ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದ ಮಾರ್ಗದರ್ಶನವನ್ನು ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ www.kuvempuuniversity.ac.in ನಲ್ಲಿ ಪರಿಶೀಲಿಸಬಹುದು.

ಪ್ರವೇಶ ಸಲಹಾ ಸಮಿತಿ (ಕೌನ್ಸಿಲಿಂಗ್) ದಿನಾಂಕ

ಪ್ರವೇಶ ಪ್ರಕ್ರಿಯೆಯ ನಂತರದ ಹಂತಗಳಾದ ಸೀಟ್ ಹಂಚಿಕೆ ಮತ್ತು ಕೌನ್ಸಿಲಿಂಗ್ ದಿನಾಂಕಗಳನ್ನು ಭವಿಷ್ಯದಲ್ಲಿ ಪ್ರಕಟಿಸಲಾಗುವುದು ಎಂದು ವಿಶ್ವವಿದ್ಯಾಲಯದ ಪರಿಷ್ಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಅರ್ಜಿಯನ್ನು ಸಮಯಕ್ಕೆ ಸಲ್ಲಿಸಿ, ಮುಂದಿನ ಹಂತಗಳಿಗೆ ಸಿದ್ಧರಾಗಿರುವಂತೆ ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ, ಕುವೆಂಪು ವಿಶ್ವವಿದ್ಯಾಲಯದ ಪ್ರವೇಶ ವಿಭಾಗದೊಂದಿಗೆ (08282-256225 / [email protected] ಸಂಪರ್ಕಿಸಬಹುದು.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!