ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು 2023 ರ ಮುಂಗಾರು ಹಂಗಾಮಿನಲ್ಲಿ 220ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಣೆ ಮಾಡಿದೆ. ಬರ ಪರಿಹಾರ ನೀಡಲು ಕೇಂದ್ರ ಅಧ್ಯಾಯನ ತಂಡ ಬಂದು ಹೋಗಿದ್ದು, ರೈತರಿಗೆ ಪರಿಹಾರ ನೀಡಬೇಕಿದೆ. ರಾಜ್ಯ ಸರಕಾರದಿಂದ ರೈತರಿಗೆ ತುರ್ತು ಅರ್ಥಿಕವಾಗಿ ನೆರವು ನೀಡುವ ನಿಟ್ಟಿನಲ್ಲಿ ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ ರೂ 2,000 ವರೆಗೆ ಬೆಳೆ ಹಾನಿ ಪರಿಹಾರದ ಹಣವನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಈ ಬರ ಪರಿಹಾರ ಪಡೆಯಲು ಪ್ರತಿ ತಾಲ್ಲೂಕಿನ ರೈತರು ತಮ್ಮ ಎಲ್ಲ ಪಹಣಿಗಳನ್ನು FRUITS ತಂತ್ರಾಂಶಕ್ಕೆ ನೋಂದಾಯಿಸಿ FID (Farmer ID) ಪಡೆಯಬೇಕಾಗಿರುತ್ತದೆ. ಇದಲ್ಲದೆ FID ಯು ಬೆಳೆ ಸಾಲ, ಬೆಳೆ ವಿಮೆ, ಬೆಂಬಲ ಬೆಲೆ, PMKISAN ಯೋಜನೆಗಳಿಗೂ ಹಾಗೂ ಕೃಷಿ, ತೋಟಗಾರಿಕೆ ಮತ್ತು ಕೃಷಿ ಸಂಬಂಧಿತ ಇಲಾಖೆಗಳಲ್ಲಿ ರೈತರು ಸೌಲಭ್ಯಗಳನ್ನು ಪಡೆಯಲು ಅತ್ಯವಶ್ಯಕವಾಗಿರುತ್ತದೆ.
ಹೊಸದಾಗಿ ID ಮಾಡಿಸಿಕೊಳ್ಳಲು ಹಾಗೂ ಪಹಣಿಗಳನ್ನು ಸೇರ್ಪಡೆ ಮಾಡಿಸಿಕೊಳ್ಳಲು ರೈತರು ತಮ್ಮ ಎಲ್ಲಾ ಪಹಣಿಗಳು, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ನಕಲು ಪ್ರತಿ ದಾಖಲಾತಿಗಳೊಂದಿಗೆ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತೋಟಗಾರಿಕೆ ಹಾಗೂ ಗ್ರಾಮ ಆಡಳಿತಾಧಿಕಾರಿ ಕಚೇರಿಗಳನ್ನು ಸಂಪರ್ಕಿಸುವುದು.
ರೈತರ ಅರ್ಹ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇದೆಯಾ ಎಂದು ಚೆಕ್ ಮಾಡಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://fruitspmk.karnataka.gov.in/MISReport/GetDetailsByAadhaar.aspx
ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ FID ನಂಬರ್ ಕಾಣಿಸಿಕೊಳ್ಳುತ್ತದೆ. ಇಲ್ಲಿ ನಿಮ್ಮ FID ನಂಬರ್ ದೊರೆತರೆ ನಿಮಗೆ ಬರ ಪರಿಹಾರ ಧನ ಸಿಗಲಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ