ದೇಶದಾದ್ಯಂತ ಆಗಸ್ಟ್ 21ರಂದು ಭಾರತ್ ಬಂದ್(Bharat Bandh)! ಭಾರತ್ ಬಂದ್ ಗೆ ಕಾರಣವೇನು?
ಈಗಾಗಲೇ ದೇಶದಲ್ಲಿ ಹಲವು ಘಟನೆಗಳು ನಡೆಯುತ್ತವೆ, ಅದರಲ್ಲೂ ಇತ್ತೀಚಿಗೆ ಕೊಲ್ಕತ್ತಾ ವೈದ್ಯೆಯ ಪ್ರಕರಣದ ವಿರುದ್ಧ ಹಲವಾರು ಪ್ರತಿಭಟನೆಗಳು ನಡೆಯುತ್ತಲೇ ಇವೆ. ಈ ಸಂಘರ್ಷಗಳ ನಡುವೆಯಲ್ಲಿಯೇ ರಾಜ್ಯದಲ್ಲಿ ಮತ್ತೊಂದು ಪ್ರತಿಭಟನೆ ನಡೆಯುತ್ತಿದೆ. ಹೌದು ಆಗಸ್ಟ್ 21ರಂದು ಭಾರತ್ ಬಂದ್ (Bharath bandh) ಗೆ ಕರೆ ನೀಡಲಾಗಿದೆ. ಈ ಭಾರತ್ ಬಂದ್ ಗೆ ಕರೆ ನೀಡಿದವರು ಯಾರು? ಇದಕ್ಕೆ ಕಾರಣವೇನು? ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಆಗಸ್ಟ್ 21ರಂದು ಭಾರತ್ ಬಂದ್ ಗೆ ರಿಸರ್ವೇಶನ್ ಬಚಾವೋ ಸಂಘರ್ಷ ಸಮಿತಿ ಕರೆ ನೀಡಿದೆ. ಸುಪ್ರೀಂ ಕೋರ್ಟ್ ವಿರುದ್ಧವಾಗಿ ಈ ಪ್ರತಿಭಟನೆ ನಡೆಯುತ್ತಿದ್ದು ಕೋರ್ಟ್ ಆದೇಶ ಹಿಂಪಡೆಯಬೇಕು ಎಂಬ ಅಭಿಲಾಷೆಯಲ್ಲಿ ಇಟ್ಟುಕೊಂಡು ಆಗಸ್ಟ್ 25ರಂದು ಭಾರತ್ ಬಂದ್ ಗೆ ಕರೆ ನೀಡಿದ್ದಾರೆ.
ಭಾರತ್ ಬಂದ್ ಗೆ ಕಾರಣವೇನು?
ಪರಿಶಿಷ್ಟ ಜಾತಿ(SC) ಮತ್ತು ಪರಿಶಿಷ್ಟ ಪಂಗಡ(ST)ಗಳಿಗೆ ನೀಡಿರುವ ಮೀಸಲಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ಅವಕಾಶ ನೀಡುವ (Supreme Court SC ST Quota, SC ST Sub- Classifications) ಕುರಿತು ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ (Supreme Court) ನೀಡಿತ್ತು. ಪರಿಶಿಷ್ಟ ಜಾತಿಗಳ ಉಪ-ವರ್ಗೀಕರಣವು SC ವರ್ಗಗಳಲ್ಲಿ ಹೆಚ್ಚು ಹಿಂದುಳಿದವರಿಗೆ ಪ್ರತ್ಯೇಕ ಕೋಟಾಗಳನ್ನು ನೀಡಲು ಅನುಮತಿ ಇದೆ ಎಂದು ಹೇಳಿದೆ. ಆದರೆ ಅವಶ್ಯಕತೆ ಇದ್ದರವರಿಗೆ ಹೆಚ್ಚಿನ ಪ್ರಾಮುಖ್ಯತೆ ಕೊಟ್ಟು ಮೀಸಲಾತಿ ನೀಡಬೇಕೆಂದು ರಿಸರ್ವೇಶನ್ ಬಚಾವೋ ಸಂಘರ್ಷ ಸಮಿತಿ ಈ ಭಾರತ್ ಬಂದ್‌ಗೆ ಕರೆ ನೀಡಿದೆ.
ಕೇಂದ್ರ ಗೃಹ ಸಚಿವಾಲಯದಿಂದ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ:
ರಿಸರ್ವೇಶನ್ ಬಚಾವೋ ಸಂಘರ್ಷ ಸಮಿತಿ ಆಗಸ್ಟ್ 21ರಂದು ಬಂದ್ ಗೆ ಕರೆ ನೀಡಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವಾಲಯದಿಂದ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳ ಕುರಿತು ಚರ್ಚಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲು ಸೂಕ್ಷ್ಮ ಪ್ರದೇಶಗಳು ಸೇರಿದಂತೆ ಕೆಲ ಸ್ಥಳಗಳನ್ನು ಗುರುತಿಸಿ ಭದ್ರತೆ (security ) ಹೆಚ್ಚಿಸಲು ಸೂಚಿಸಲಾಗಿದೆ. ಪ್ರಮುಖವಾಗಿ ಉತ್ತರ ಪ್ರದೇಶ ಸೇರಿದಂತೆ ಕೆಲ ಉತ್ತರ ರಾಜ್ಯಗಳಲ್ಲಿ ಈ ಹೋರಾಟ ತೀವ್ರಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ತೀವ್ರ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.
ಆಗಸ್ಟ್ 21ರಂದು ಯಾವೆಲ್ಲ ಸೇವೆಗಳು ಲಭ್ಯವಿವೆ?
ಆಗಸ್ಟ್ 21ರಂದು ತುರ್ತು ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಸೇವೆಗಳು ಬಂದ್ ಆಗುವ ಸಾಧ್ಯತೆ ಇದೆ.ಅಂದರೆ ಆಂಬ್ಯುಲೆನ್ಸ್‌ಗಳಂತಹ ತುರ್ತು ಸೇವೆಗಳು ಕಾರ್ಯನಿರ್ವಹಿಸುತ್ತಲೇ ಇರುತ್ತವೆ. ಆಸ್ಪತ್ರೆಗಳು ಮತ್ತು ವೈದ್ಯಕೀಯ ಸೇವೆಗಳು ಸಹ ಎಂದಿನಂತೆ ಕಾರ್ಯನಿರ್ವಹಿಸಲಿವೆ. ಈ ರೀತಿಯ ಸೌಲಭ್ಯಗಳನ್ನು ಹೊರತುಪಡಿಸಿ ಸಾರ್ವಜನಿಕ ಸಾರಿಗೆ, ಸೇರಿದಂತೆ ಇತರ ಅಂಗಡಿ ಮುಂಗಟ್ಟುಗಳು ಬಂದ್ ಆಗುವ ಸಾಧ್ಯತೆ ಇದೆ. ಆಗಸ್ಟ್ 21ರಂದು ಬೆಳಗ್ಗೆ 5 ರಿಂದ ಸಂಜೆ 5 ರವರೆಗೆ ಪ್ರತಿಭಟನೆ ನಡೆಯಲಿದೆ. ಆದ್ದರಿಂದ ಈ ಸಮಯದಲ್ಲಿ ಮೇಲಿನ ಎಲ್ಲಾ ಸೌಲಭ್ಯಗಳನ್ನು ಮುಚ್ಚಲಾಗುವುದು ಎಂದು ಸರ್ವ ಆದಿವಾಸಿ ಸಮಾಜದ ವಿಭಾಗೀಯ ಅಧ್ಯಕ್ಷ ಪ್ರಕಾಶ್ ಠಾಕೂರ್ ಹೇಳಿದ್ದಾರೆ. ಹಾಗೂ ಪರಿಶಿಷ್ಟ ಜಾತಿ ಸಮಾಜದ ಜಿಲ್ಲಾಧ್ಯಕ್ಷ ವಿಕ್ರಂ ಲಹಾರೆ (Vikram Lahare) ಮಾತನಾಡಿ, ಬಂದ್ ವೇಳೆ ನಮ್ಮ ಯುವಕರು ಬೆಳಗ್ಗೆಯಿಂದಲೇ ಬೈಕ್ ನಲ್ಲಿ ಸಂಚರಿಸಿ, ಬಳಿಕ ಧರಮಪುರ ಪಿ.ಜಿ.ಕಾಲೇಜು ಬಳಿ ಒಗ್ಗೂಡಿ ನಗರದ ಮುಖ್ಯರಸ್ತೆಯಲ್ಲಿ ಸಂಚರಿಸಿ ಲಾಲ್ ಬಾಗ್ ಮೈದಾನ ತಲುಪಲಿದ್ದಾರೆ ಎಂದು ಹೇಳಿದ್ದಾರೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group




