ಕರ್ನಾಟಕ ರಾಜ್ಯ ಸರ್ಕಾರವು ಗ್ರಾಮಪಂಚಾಯಿತಿ ಪ್ರದೇಶಗಳಲ್ಲಿರುವ ಬಿ-ಖಾತಾ (199ಸಿ) ಆಸ್ತಿಗಳ ಮೇಲೆ ಏಕರೂಪದ ತೆರಿಗೆ ವಿಧಿಸಲು ಹೊಸ ಕರಡು ನಿಯಮಾವಳಿಯನ್ನು ಪ್ರಕಟಿಸಿದೆ. ಈ ನಿಯಮಗಳು ಜಾರಿಗೆ ಬಂದರೆ, ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿರುವ ಎಲ್ಲಾ ನೋಂದಣಿಯಾಗದ ಆಸ್ತಿಗಳನ್ನು ಗುರುತಿಸಿ, ಅವುಗಳ ಮೇಲೆ ತೆರಿಗೆ ಮತ್ತು ಶುಲ್ಕಗಳನ್ನು ವಿಧಿಸಲಾಗುವುದು.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹೊಸ ನಿಯಮದ ಮುಖ್ಯ ಅಂಶಗಳು:
ರಾಜ್ಯ ಸರ್ಕಾರವು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಫೀಸುಗಳು) ಕರಡು ನಿಯಮಗಳು-2025 ಅನ್ನು ರೂಪಿಸಿದೆ. ಇದರ ಪ್ರಕಾರ, ಗ್ರಾಮಪಂಚಾಯಿತಿ ಪ್ರದೇಶಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಮುಂಚೆಯೇ ಶುಲ್ಕ ಪಾವತಿಸುವ ನಂತರವೇ ಅನುಮತಿ ನೀಡುವ ವ್ಯವಸ್ಥೆ ಮಾಡಲಾಗುವುದು. ಹಾಗೆಯೇ, ಪ್ರತಿ ವಸತಿ, ವಾಣಿಜ್ಯ ಕಟ್ಟಡ, ಖಾಲಿ ನಿವೇಶನ ಮತ್ತು ಇತರ ಭೂಮಿಗಳಿಗೆ ಆಸ್ತಿ ಗುರುತಿನ ಸಂಖ್ಯೆ (PID) ನೀಡಿ ನೋಂದಣೆ ಮಾಡುವ ಕಡ್ಡಾಯ ಪದ್ಧತಿ ಜಾರಿಗೆ ಬರಲಿದೆ.
ಯಾವ ಆಸ್ತಿಗಳಿಗೆ ತೆರಿಗೆ?
- ವಸತಿ ಮತ್ತು ವಾಣಿಜ್ಯ ಕಟ್ಟಡಗಳು
- ಖಾಲಿ ನಿವೇಶನಗಳು ಮತ್ತು ವಾಣಿಜ್ಯ ಉದ್ದೇಶದ ಭೂಮಿ
- ಒಪ್ಟಿಕಲ್ ಫೈಬರ್ ಕೇಬಲ್ ಗಳು (OFC) ಮತ್ತು ಮೊಬೈಲ್ ಟವರ್ ಗಳು
- ಇತರ ಗೃಹ, ವ್ಯಾಪಾರ ಮತ್ತು ಉದ್ಯಮ ಸಂಬಂಧಿತ ಆಸ್ತಿಗಳು
ಸಾರ್ವಜನಿಕರಿಗೆ ಅವಕಾಶ:
ಈ ಕರಡು ನಿಯಮಗಳ ಮೇಲೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು 15 ದಿನಗಳೊಳಗೆ ಸಲ್ಲಿಸಬಹುದು. ನಂತರ, ಸರ್ಕಾರವು ಸೂಕ್ತ ಬದಲಾವಣೆಗಳನ್ನು ಮಾಡಿ ಅಂತಿಮ ನಿಯಮಾವಳಿಯನ್ನು ಅಧಿಸೂಚಿಸಲಿದೆ.
ಈ ಕ್ರಮದ ಉದ್ದೇಶ:
ಗ್ರಾಮೀಣ ಪ್ರದೇಶಗಳಲ್ಲಿ ತೆರಿಗೆ ಸಂಗ್ರಹಣೆಯನ್ನು ಪಾರದರ್ಶಕಗೊಳಿಸುವುದು, ಅನಧಿಕೃತ ಆಸ್ತಿಗಳನ್ನು ನಿಯಂತ್ರಿಸುವುದು ಮತ್ತು ಗ್ರಾಮಪಂಚಾಯಿತಿಗಳ ಆದಾಯವನ್ನು ಹೆಚ್ಚಿಸುವುದು ಇದರ ಮುಖ್ಯ ಧ್ಯೇಯವಾಗಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಕೃಷ್ಣಸಾಗರಿ ಅವರು NeedsOfPublic.in ನ ‘ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ’ (Job Updates & Career) ವಿಭಾಗದ ಮುಖ್ಯಸ್ಥರಾಗಿದ್ದಾರೆ. ತುಮಕೂರಿನ ಸರ್ಕಾರಿ ನರ್ಸಿಂಗ್ ಕಾಲೇಜಿನಿಂದ B.Sc (Nursing) ಪದವಿ ಪಡೆದಿರುವ ಇವರು, ಸಾರ್ವಜನಿಕ ಜಾಗೃತಿ ಮತ್ತು ಮಾಹಿತಿ ನೀಡುವ ಆಸಕ್ತಿಯಿಂದಾಗಿ ಡಿಜಿಟಲ್ ಪತ್ರಿಕೋದ್ಯಮ ಕ್ಷೇತ್ರವನ್ನು ಆಯ್ದುಕೊಂಡಿದ್ದಾರೆ. ಡಿಜಿಟಲ್ ಮಾಧ್ಯಮ ರಂಗದಲ್ಲಿ 3 ವರ್ಷಗಳ ಅನುಭವ ಹೊಂದಿರುವ ಇವರು, ಸರ್ಕಾರಿ ಉದ್ಯೋಗದ ಅಧಿಸೂಚನೆಗಳು (Govt Job Notifications), ಖಾಸಗಿ ನೇಮಕಾತಿಗಳು ಮತ್ತು ಶೈಕ್ಷಣಿಕ ಅಪ್ಡೇಟ್ಗಳನ್ನು ಒದಗಿಸುವಲ್ಲಿ ಪರಿಣತಿ ಹೊಂದಿದ್ದಾರೆ. ನಿರುದ್ಯೋಗಿ ಯುವಕ-ಯುವತಿಯರಿಗೆ ಯಾವುದೇ ಗೊಂದಲವಿಲ್ಲದೆ, ಕೇವಲ ಅಧಿಕೃತ ಮೂಲಗಳಿಂದ ಪರಿಶೀಲಿಸಿದ (Verified) ನಿಖರ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವುದೇ ಇವರ ಬರವಣಿಗೆಯ ಶೈಲಿಯಾಗಿದೆ.


WhatsApp Group




Leave a Reply