govt recruitment apply now

ಕರ್ನಾಟಕದಲ್ಲಿ 8 ಸರ್ಕಾರಿ ಇಲಾಖೆಗಳಲ್ಲಿ 708 ಹುದ್ದೆಗಳಿಗೆ, ಅರ್ಜಿ ಸಲ್ಲಿಸಲು ನವೆಂಬರ್ 25 ಕೊನೆಯ ದಿನ

Categories:
WhatsApp Group Telegram Group

ಕರ್ನಾಟಕದ ಸರ್ಕಾರಿ ಉದ್ಯೋಗಗಳಿಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಒಂದು ಗಂಡಸುದ್ದಿ. ರಾಜ್ಯದ 8 ವಿವಿಧ ಸರ್ಕಾರಿ ಇಲಾಖೆ ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ 708 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 25 ದಿನಾಂಕದ ವರೆಗೆ ವಿಸ್ತರಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ನೇಮಕಾತಿ ಪ್ರಕ್ರಿಯೆಯನ್ನು ನಡೆಸಿಕೊಡುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಯಾವ ಇಲಾಖೆಗಳಲ್ಲಿ ಎಷ್ಟು ಹುದ್ದೆಗಳು?

ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದ ಅಡಿಯಲ್ಲಿ ಖಾಲಿ ಇರುವ ಈ ಹುದ್ದೆಗಳ ವಿವರ ಈ ಕೆಳಗಿನಂತಿದೆ:

  • ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ: 18 + 07 ಹುದ್ದೆಗಳು
  • ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಕಾರ್ಖಾನೆ: 07 + 14 ಹುದ್ದೆಗಳು
  • ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ: 40 + 4 ಹುದ್ದೆಗಳು
  • ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ: 63 + 253 ಹುದ್ದೆಗಳು
  • ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ: 19 ಹುದ್ದೆಗಳು
  • ಕೃಷಿ ಮಾರಾಟ ಇಲಾಖೆ: 180 ಹುದ್ದೆಗಳು
  • ತಾಂತ್ರಿಕ ಶಿಕ್ಷಣ ಇಲಾಖೆ: 50 + 43 ಹುದ್ದೆಗಳು
  • ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ): 10 ಹುದ್ದೆಗಳು

ಮುಖ್ಯ ತಾರೀಕುಗಳು ಮತ್ತು ಅರ್ಜಿ ಪ್ರಕ್ರಿಯೆ

ಅಭ್ಯರ್ಥಿಗಳು ಈ ಕೆಳಗಿನ ತಾರೀಕುಗಳನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು:

  1. ಆನ್ಲೈನ್ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 25.11.2025
  2. ಆನ್ಲೈನ್ ಶುಲ್ಕ ಪಾವತಿಯ ಕೊನೆಯ ದಿನಾಂಕ: 26.11.2025

ಅರ್ಜಿ ಸಲ್ಲಿಸುವ ಮತ್ತು ಹೆಚ್ಚಿನ ಮಾಹಿತಿ ಪಡೆಯುವ ಪ್ರಕ್ರಿಯೆ ಸಂಪೂರ್ಣವಾಗಿ ಆನ್ಲೈನ್ ಆಗಿದೆ. ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ ವನ್ನು ಭೇಟಿ ಮಾಡಬೇಕು.

ಶೈಕ್ಷಣಿಕ ಅರ್ಹತೆ ಮತ್ತು ವಯೋ ಮಿತಿ

ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ಬೇಡಿಕೆಗಳು ವಿಭಿನ್ನವಾಗಿವೆ. ಕೆಲವು ಪ್ರಮುಖ ಹುದ್ದೆಗಳ ಅರ್ಹತೆಗಳು:

  • ಪ್ರಥಮ ದರ್ಜೆ ಸಹಾಯಕ: ಪದವಿ
  • ದ್ವಿತೀಯ ದರ್ಜೆ ಸಹಾಯಕ: PUC
  • ಸಹಾಯಕ ಗ್ರಂಥಪಾಲಕ: M.Sc Library Science
  • ಜೂನಿಯರ್ ಪ್ರೋಗ್ರಾಮರ್: Electronics/Computer Science Diploma ಅಥವಾ MCA
  • ಸಹಾಯಕ ಇಂಜಿನಿಯರ್: Civil Engineering Diploma

ವಯೋ ಮಿತಿ:

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 38 ವರ್ಷಗಳು
  • 2A, 2B, 3A, 3B ವರ್ಗದ ಅಭ್ಯರ್ಥಿಗಳಿಗೆ: 41 ವರ್ಷಗಳು
  • SC, ST ಮತ್ತು ವರ್ಗ 1 ಅಭ್ಯರ್ಥಿಗಳಿಗೆ: 43 ವರ್ಷಗಳು

ಪರೀಕ್ಷಾ ವಿಧಾನ ಮತ್ತು ಮುಖ್ಯ ಸೂಚನೆಗಳು

  • ಆಯ್ಕೆ ಪ್ರಕ್ರಿಯೆಯು OMR ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನಡೆಯುವುದು.
  • ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನ ಇದೆ. ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕಗಳನ್ನು ಕಡಿತಗೊಳಿಸಲಾಗುವುದು.
  • ಒಂದೇ ಪಠ್ಯಕ್ರಮದ ಹುದ್ದೆಗಳಿಗೆ ಒಂದೇ ಪರೀಕ್ಷೆ ನಡೆಸಲಾಗುವುದು.
  • KEA ಮೆರಿಟ್ ಪಟ್ಟಿಯನ್ನು ಸಂಬಂಧಿತ ನೇಮಕಾತಿ ಪ್ರಾಧಿಕಾರಗಳಿಗೆ ಒದಗಿಸುತ್ತದೆ. ಅಂತಿಮ ನೇಮಕಾತಿ ಆದೇಶವನ್ನು ಆಯಾ ಇಲಾಖೆಗಳು ನೀಡುವುದು.
  • ಎಲ್ಲಾ ಅಪ್ಡೇಟ್ಗಳಿಗಾಗಿ ಅಭ್ಯರ್ಥಿಗಳು KEA ವೆಬ್ಸೈಟ್ ಅನ್ನು ನಿಯಮಿತವಾಗಿ ಪರಿಶೀಲಿಸುವಂತೆ ಸೂಚಿಸಲಾಗಿದೆ.
WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

WhatsApp Group Join Now
Telegram Group Join Now

Popular Categories