Bigg Boss Kannada – ವಿನಯ್ ಮೇಲಿನ ವೀಕ್ಷಕರ ಕೋಪ ಪವಿಗೆ ಮುಳುವಾಯಿತಾ..?

bigboss updates today

ಬಿಗ್ ಬಾಸ್ ಕನ್ನಡ ಸೀಸನ್ 10 ( Big boss season 10 ) ಇಂದು ಹಲವಾರು ದಿನಗಳನ್ನು ಮುಗಿಸಿದೆ. ಒಬ್ಬೊಬರೆ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ( Eliminate ) ಆಗುತ್ತಿದ್ದರೆ. ಈಗ ಬಿಗ್ ಬಾಸ್ ಮನೆಯೊಳಗೆ ಇರುವ ಸ್ಪರ್ಧಿಗಳ ನಡುವೆ ಜಿದ್ದಾಜಿದ್ದಿ ಶುರುವಾಗಿದೆ. ಬಿಗ್ ಬಾಸ್ ಸೀಸನ್ 10 ನ್ನು ಗೆಲ್ಲಲು ಪ್ರತಿ ಸ್ಪರ್ಧಿಗಳ ನಡುವೆಯೂ ಪೈಪೋಟಿ ನಡೆದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್ ಸೀಸನ್ 10 ಕ್ಕೆ ವೈಲ್ಡ್‌ ಕಾರ್ಡ್‌ ( Wild Card ) ಮೂಲಕ ಪವಿ ಪೂವಪ್ಪ ಎಂಟ್ರಿ ಕೊಟ್ಟಿದ್ದರು. ಹೀಗೆ ಬಿಗ್‌ಬಾಸ್ ಮನೆಯೊಳಗೆ ಪ್ರವೇಶಿಸಿದ್ದ ಪವಿ ಪೂವಪ್ಪ ಅವರು ಮನೆಯ ಎಲ್ಲಾ ಟಾಸ್ಕ್ ಗಳನ್ನು ಉತ್ತಮವಾಗಿ ಆಡುತ್ತಿದ್ದರು. ಹಾಗೆಯೇ ಇವರು ಬಿಗ್ ಬಾಸ್ ನ ಟಾಪ್ ಸ್ಪರ್ಧಿಗಳಲ್ಲಿ ಒಬ್ಬರಾಗುತ್ತಾರೆ ಎಂಬ ನಿರೀಕ್ಷೆಯೂ ಇತ್ತು. ಆದರೆ ಮನೆಯೊಳಗೆ ಪವಿ ಅಂದುಕೊಂಡಷ್ಟೇನೂ ಸದ್ದು ಮಾಡಲಿಲ್ಲ. ಒಂದು ವಾರ ಉತ್ತಮ ಪಡೆದುಕೊಂಡು ಇನ್ನೊಂದು ವಾರ ಜೈಲುಶಿಕ್ಷೆಯನ್ನೂ ಅನುಭವಿಸಿದ್ದಾರೆ. ಹೀಗೆ ಬಿಗ್ ಬಾಸ್ ಮನೆ ಒಳಗೆ ಎಂಟ್ರಿ ಕೊಟ್ಟು ಮೂರೇ ವಾರಕ್ಕೆ ಮರಳಿ ಬಂದಿರುವ ಅವರನ್ನು ಜಿಯೋ ಸಿನಿಮಾ ಎಕ್ಸ್‌ಕ್ಲ್ಯೂಸಿವ್ ಸಂದರ್ಶನ ( Jio Cinema Exclusive Interview ) ಮಾಡಿದ್ದಾರೆ. ಮೂರು ವಾರಗಳ ಬಿಗ್ ಬಾಸ್ ಮನೆಯಲ್ಲಿ ಇದ್ದು ಬಂದ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅದರ ಬಗ್ಗೆ ಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಬಿಗ್ ಬಾಸ್ ಮನೆಯಿಂದ ಹೊರ ಬರುವ ಬಗ್ಗೆ ಅನುಮಾನ ಇತ್ತು ಎಂದ ಪವಿ ಪೂವಪ್ಪ :

ಸಂದರ್ಶನ ನೀಡಿದ ಪವಿ ಪೂವಪ್ಪ ಅವರು ನನಗೆ ಬಿಗ್ ಬಾಸ್ ಮನೆಯಿಂದ ಹೊರಬರುವ ನಿರೀಕ್ಷೆ ಸಣ್ಣದಾಗಿ ಇತ್ತು. ಆದರೆ ಅದು ಖಚಿತವಾಗಿ ಗೊತ್ತಿರಲಿಲ್ಲ. 80% ಹೊರಗೆ ಬರಬಹುದು ಅಂದುಕೊಂಡಿದ್ದೆ. ಎಲ್ಲರೂ ನನ್ನ ಟಾರ್ಗೆಟ್ ಮಾಡುತ್ತಿರುವುದನ್ನು ನೋಡಿ, ಈ ವಾರ ಹೊಗಬಹುದು ಅಂದುಕೊಂಡಿದ್ದೆ. ಈ ವಾರ ನಾನು ಸ್ವಲ್ಪ ಲ್ಯಾಕ್ ಆದೆ. ಇನ್ನು ಸ್ವಲ್ಪ ಪ್ರಯತ್ನ ಪಟ್ಟಿದ್ದರೆ ಬಿಗ್ ಬಾಸ್ ಮನೆಯಲ್ಲಿ ಉಳಿಯುತ್ತಿದ್ದೆ ಎಂದು ತಿಳಿಸಿದ್ದಾರೆ.

ವಿನಯ್ಮೇಲಿನ ಕೋಪಕ್ಕೆ ನಾನು ಬಲಿಯಾದೆ :

ಬಿಗ್ ಬಾಸ್ ಮನೆಯೊಳಗೆ ವೈಲ್ಡ್‌ ಕಾರ್ಡ್‌ ಮೂಲಕ ಎಂಟ್ರಿ ಕೊಟ್ಟಾಗ ನಾನು ಯಾರ ಜೊತೇನು ಜಾಸ್ತಿ ಬೆರೆತಿಲ್ಲ ಮತ್ತು ಯಾರ ಜೊತೆಯಲ್ಲೂ ಫ್ರೆಂಡ್ ಶಿಪ್ ಮಾಡಿಕೊಡಿಲ್ಲ. ಎಲ್ಲರ ಜೊತೆಗೂ ಚೆನ್ನಾಗೇ ಇದ್ದೆ. ಸ್ವಲ್ಪ ಜನರ ಜೊತೆ ಫ್ರೀ ಆಗಿ ಅವರ ಜೊತೆಗೆ ಚೆನ್ನಾಗಿದ್ದೆ. ಆದರೆ ಸಂಗೀತಾ, ಕಾರ್ತಿಕ್ ತಂಡ ನನ್ನನ್ನು ಟಾರ್ಗೆಟ್ ( Target ) ಮಾಡುತ್ತಿದ್ರು. ನಾನು ವಿನಯ್ ತಂಡದಲ್ಲಿದ್ದೀನಿ ಅಂದ್ಕೊಂಡು ನನ್ನ ಮೇಲೆ ಟಾರ್ಗೆಟ್ ಮಾಡ್ಕೊಂಡು ಬಂದ್ರು. ವಿನಯ್ ಮೇಲಿರುವ ಕೋಪಕ್ಕೆ ನಾನು ಬಲಿಯಾದೆ ಅನಿಸುತ್ತದೆ ಎಂದು ಹೇಳಿದ್ದಾರೆ.

ರಕ್ಕಸ-ಗಂಧರ್ವರ ಎರಡು ತಂಡಗಳ ನಡುವೆ ಆಡಿದ ಟಾಸ್ಕ್ ವಿಚಾರಕ್ಕೆ ನನಗೆ ವಿಷಾದವಿದೆ :

ರಾಕ್ಷಸ ಗಂಧರ್ವ ಎಂಬ ಎರಡು ತಂಡಗಳ ನಡುವೆ ಆದ ಟಾಸ್ಕ್ ನಲ್ಲಿ ನಮ್ಮ ಎದುರಾಳಿ ತಂಡ ಹೇಳಿದ್ದೆಲ್ಲವನ್ನೂ ನಾವು ಕೇಳಿದ್ದೆವು. ಆದರೆ ನಂತರ ನಾವು ರಾಕ್ಷಸ ರಾದಾಗ ಅವರು ನಮ್ಮ ಯಾವ ಮಾತನ್ನೂ ಕೇಳಲಿಲ್ಲ. ಅದರಿಂದ ನಾವು ಪ್ರವೋಕ್ ಆಗುವ ಹಾಗಾಯ್ತು ಎಂದರು.

ನೀರೆರೆಚುವ ಟಾಸ್ಕ್ ನಲ್ಲಿ ಕಾರ್ತಿಕ್, ಸಂಗೀತಾ ಮತ್ತು ತನಿಷಾ ಮೂವರೂ ನನಗೆ ಉಸಿರಾಡಲೂ ಅವಕಾಶ ಕೊಡದ ಹಾಗೆ ನೀರು ಎರೆಚಿದರು. ಅದು ಸ್ವಲ್ಪ ಕೋಪ ಇತ್ತು. ಮರುದಿನ ಆ ಟಾಸ್ಕ್ ಮತ್ತೆ ಬಂದಾಗ, ಅವರಿಗೂ ಆ ನೋವು ಗೊತ್ತಾಗ್ಲಿ ಎಂದು ನಾವು ಅವರಿಗೆ ಎರೆರೆಚಿದೆವು. ಇದು ಸಂಗೀತಾ ಮತ್ತು ಕಾರ್ತಿಕ್‌ಗೆ ಬಹಳ ತೊಂದರೆಯಾಯ್ತು. ಅದರ ಬಗ್ಗೆ ನನಗೆ ವಿಷಾದವಿದೆ ಎಂದರು.

whatss

 

ಮನೆಯಲ್ಲಿ ಇದ್ದ ಸ್ಪರ್ಧಿಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡ ಪವಿ :

ಬಿಗ್ ಬಾಸ್ ಮನೆಯಲ್ಲಿ ನನಗೆ ನಮ್ರತಾ ಹೆಚ್ಚು ಜೆನ್ಯೂನ್ ಅನಿಸುತ್ತಾರೆ ಅವರನ್ನು ಬಿಟ್ಟರೆ ನನಗೆ ಓಕೆ ಅನಿಸಿದ್ದು ಸಂಗೀತ ಮತ್ತು ಕಾರ್ತಿಕ್. ಆದರೆ ತನಿಷಾ ಫೇಕ್ ಅನಿಸುತ್ತಾರೆ. ಯಾಕೆಂದರೆ ಅವರು ಟಾಸ್ಕ್‌ ಟೈಮ್‌ನಲ್ಲಿ ಒಂದು ಥರ ಇರ್ತಾರೆ. ಮನೆಯೊಳಗೇ ಒಂಥರ ಇರುತ್ತಾರೆ. ಟಾಸ್ಕ್‌ ಅನ್ನು ಮನೆಯಲ್ಲಿಯೇ ಬಿಟ್ಟುಬಿಡೋಣ ಅಂತಾರೆ. ಅದೇ ಬೇರೆಯವರು ಹಾಗೆ ಮಾಡಿದಾಗ ಅದನ್ನು ಒಂದೆರಡು ವಾರವಾದರೂ ಮರೆಯದೇ ಅದೇ ರೀಸನ್ ಹೇಳುತ್ತಿರುತ್ತಾರೆ ಎಂದು ಹೇಳಿದರು.

ಟಾಪ್‌ 5 ನಲ್ಲಿ ( Top 5 ) ಯಾರು ಯಾರು ಇರಬೇಕು ಎಂದು ತಿಳಿಸಿದ ಪವಿ ಪೂವಪ್ಪ :

ನನಗೆ ಟಾಪ್‌ 5 ನಲ್ಲಿ ಇರಬೇಕಾದ ಸ್ಪರ್ಧಿಗಳು ಕಾರ್ತಿಕ್, ವಿನಯ್, ನಮ್ರತಾ, ಸಂಗೀತಾ ಇರಬೇಕು ಆದರೆ ಈಗ ಅವರು ಆಡುತ್ತಿರುವ ರೀತಿ ನೋಡಿದರೆ ನನಗೆ ಅನುಮಾನ ಇದೆ. ಮುಂದೆ ಹೇಗೆ ಆಡುತ್ತಾರೆ ಎನ್ನುವುದರ ಮೇಲೆ ಅದು ಅವಲಂಬಿತವಾಗಿರುತ್ತದೆ.

ಹಾಗೆ ನೋಡಿದರೆ, ಕಾರ್ತಿಕ್ ಬಿಗ್ ಬಾಸ್ ಸೀಸನ್ 10 ನ ವಿನ್ನರ್ ಆಗಬಹುದು ಅನಿಸುತ್ತದೆ. ವಿನಯ್ ಮತ್ತು ನಮ್ರತಾ ನನ್ನ ಫ್ರೆಂಡ್ ಆಗಿದ್ದರೂ, ಕಾರ್ತಿಕ್‌ ಏನೋ ಪಾಸಿಟಿವ್ ವೈಬ್ ಕೊಡ್ತಾರೆ. ಬಹುಶಃ ನೋಡುವವರಿಗೂ ಹಾಗೆಯೇ ಅನಿಸಬಹುದು. ಎಷ್ಟೇ ಚೆನ್ನಾಗಿ ಆಡಿದರೂ, ಅಗ್ರೆಸಿವ್ ಆಗಿ ಆಡಿದರೂ ಅವರು ಮನೆಯ ಕುಟುಂಬಕ್ಕೆ ಹೊಂದಿಕೊಳ್ಳುತ್ತಾರೆ.

ನಾನು ಮಾಡಿದ ಮೊದಲನೇ ತಪ್ಪು ಇದು :

ನಾವು ಮನೆಯೊಳಗೆ ಇರುವಾಗ ನಮಗೊಂದು ವಿಶೇಷಾಧಿಕಾರ ಸಿಕ್ಕಿತ್ತು. ಯಾರನ್ನಾದರೂ ಸೇವ್ ಮಾಡಬಹುದು ಎಂದು. ಆಗ ನಾವು ಸಿರಿ ಮತ್ತು ತುಕಾಲಿ ಅವರನ್ನು ಸೇವ್ ಮಾಡಿದ್ವಿ. ನಾವು ಮಾಡಿರುವ ಮೊದಲ ತಪ್ಪು ಅದು. ಅವರನ್ನು ಸೇವ್ ಮಾಡಿರದಿದ್ದರೆ ಅವರು ಈ ಜಾಗದಲ್ಲಿರುತ್ತಿದ್ರು. ನಾವು ಮಾಡಿದ ಮೊದಲ ತಪ್ಪು ಅದು ಎಂದ ಪವಿ ಪೂವಪ್ಪ.

tel share transformed

ಬಿಗ್ ಬಾಸ್ ಮನೆಯನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ :

ನಾನು ಬಿಗ್‌ ಬಾಸ್ ಮನೆಯಲ್ಲಿ ರಾತ್ರಿ ಎಲ್ಲರಿಗೂ ಅಡುಗೆ ಮಾಡಿಕೊಡ್ತಿದ್ದೆ. ತುಕಾಲಿ ಅವರ ಜೊತೆಗೆ ಅಡುಗೆ ವಿಷಯದಲ್ಲಿ ಜಗಳ ಆಡ್ತಿದ್ವಿ. ಅದು ಬಿಟ್ರೆ, ಪ್ರತಿದಿನ ಊಟ ಆದ್ಮೇಲೆ ನಾನು, ನಮ್ರತಾ, ವಿನಯ್, ಮೈಕಲ್ ಆಚೆ ಬಂದು ಒಂದು ತಾಸು ಗಾಳಿಯಲ್ಲಿ ಕೂತು ಮಾತಾಡ್ತಿದ್ವಿ. ಅದನ್ನು ತುಂಬಾ ಮಿಸ್ ಮಾಡ್ಕೋತೀನಿ. ಬಿಗ್‌ ಬಾಸ್ ಈ ಜರ್ನಿಯನ್ನು ನಾನು ಯಾವತ್ತೂ ಮರೆಯುದಿಲ್ಲ. ಮರೆಯಲು ಯತ್ನಿಸಿದರೂ ಮರೆಯಲಾಗುವುದಿಲ್ಲ. ಈ ಒಂದು ಜರ್ನಿ ನನಗೆ ಬಹಳ ಅಮೂಲ್ಯವಾಗಿದೆ ಎಂದು ತಮ್ಮ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!