ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದವರ ಅರ್ಜಿಗಳು ಕ್ಯಾನ್ಸಲ್ ಆಗುತ್ತಿವೆ, ಇದರ ಬಗ್ಗೆ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಏಕೆ ಅರ್ಜಿಯನ್ನು ಸಲ್ಲಿಸಿದ ಕೆಲವರಿಗೆ ಹಣವು ಬರುವುದಿಲ್ಲ?, ಯಾರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದರೂ ಅವರಿಗೆ ಹಣ ಬರುವುದಿಲ್ಲ ಎಂಬುದನ್ನು ತಿಳಿದುಕೊಳ್ಳಲು ಈ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದವರಿಗೆ ಬಿಗ್ ಶಾಕ್:
ಇದೇ ತಿಂಗಳ ಕೊನೆಯೆಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಿಡುಗಡೆ ಮಾಡಲು ಜಾರಿಗೆ ತರಲಾಗುತ್ತಿದೆ ಎಂಬ ಸುದ್ದಿ ನಿಮಗೆ ಈಗಾಗಲೇ ತಿಳಿದಿದೆ. ಆದರೆ ಹಣವು ನಿಮ್ಮ ಖಾತೆಗೆ ಬರುವುದಕ್ಕೂ ಮುನ್ನ ಸರ್ಕಾರದ ವತಿಯಿಂದ ಅರ್ಹರಲ್ಲದವರ ರೇಷನ್ ಕಾರ್ಡುಗಳನ್ನು ರದ್ದು ಮಾಡುವ ಪ್ರಕ್ರಿಯೆ ನಡೆದಿದೆ. ಇದರಿಂದಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ ಕೆಲವರ ರೇಷನ್ ಕಾರ್ಡ್ ಗಳು ಕೂಡ ಬಂದ್ ಆದರೆ, ಅವರುಗಳಿಗೆ 2000 ಹಣ ದೊರೆಯುವುದಿಲ್ಲ.
ಈಗಾಗಲೇ 8ಲಕ್ಷ BPL ರೇಷನ್ ಕಾರ್ಡ್ ಗಳು ರದ್ದು ಆಗಿವೆ! ಪಡಿತರ ಚೀಟಿಗಳು ರದ್ದು ಆಗುತ್ತಿರುವುದಕ್ಕೆ ಕಾರಣವೇನು? ಎಂಬುವುದನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗುತ್ತದೆ. ಮತ್ತು ನೀವು white board ಕಾರ್ ಹೊಂದಿರುವವರಾದರೆ, ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ. ಮತ್ತು ನೀವು ಆ ರೇಷನ್ ಕಾರ್ಡ್ ರದ್ದಾಗಿರುವ(Ration card cancellation) ಲಿಸ್ಟ್ ನಲ್ಲಿ ಇದ್ದೀರಾ ಇಲ್ಲವೋ ಎಂದು ಪರಿಶೀಲಿಸಬೇಕೆಂದರೆ ಸಂಪೂರ್ಣವಾಗಿ ಓದಿ ತಿಳಿಯಿರಿ.
ಪಡಿತರ ಚೀಟಿಯ ರದ್ದು ಪ್ರಾರಂಭ :
ಗೃಹ ಲಕ್ಷ್ಮಿ ಯೋಜನೆಯನ್ನು ಪಡೆದುಕೊಳ್ಳುವದರಲ್ಲಿ ನಿರತರಾಗಿರುವ ನಮ್ಮ ಜನ ಸಾಮಾನ್ಯರಿಗೆ ಒಂದು ಶಾಕಿಂಗ್ ಸುದ್ದಿ!!!
ಅದೇನೆಂದರೆ, ತುಂಬಾ ಜನರ ರೇಷನ್ ಕಾರ್ಡ್ ರದ್ದಾಗಿವೆ ಹಾಗೂ ಇನ್ನೂ ರದ್ದಾಗುವ ಸಾದ್ಯತೆ ಇವೆ. ಇದರ ಜೊತೆಗೆ ದಂಡ ಕೂಡ ಬೀಳುವ ಸಾಧ್ಯತೆ ಇದೆ. ಯಾಕೆ ಹೀಗೆ ಈ ರೀತಿ ರೇಷನ್ ಕಾರ್ಡ್ ಗಳನ್ನು ರದ್ದು ಮಾಡುತ್ತಿದ್ದಾರೆ? ಯಾವೆಲ್ಲ ರೇಷನ್ ಕಾರ್ಡ್ ಗಳನ್ನು ರದ್ದುಗೊಳಿಸಲಾಗುತ್ತಿದೆ ?
ಹೌದು, ಐಷಾರಾಮಿ ಕಾರು ಇದ್ದವರು, ಸರಕಾರಿ ಕೆಲಸ ಮಾಡುವವರು, 3 ಎಕರೆಗಿಂತ ಜಾಸ್ತಿ ಕೃಷಿ ಜಮೀನು
ಇದ್ದವರು, ಹೆಚ್ಚಿಗೆ ಟ್ಯಾಕ್ಸ್ ಕಟ್ಟುವವರು ಹೀಗೆ ಅನೇಕ ಸೌಲಭ್ಯ ಇದ್ದವರು ಕೂಡಾ ನಕಲಿ BPL ಕಾರ್ಡ್ ಅನ್ನು ಹೊಂದಿದ್ದಾರೆ. ಆಹಾರ ಇಲಾಖೆಯು ಇಂತಹ ನಕಲಿ BPL ಕಾರ್ಡನ್ನು ಹೊಂದಿದವರ ಪತ್ತೆ ಹಚ್ಚಿ ಅವರ ration card ರದ್ದುಗೊಳಿಸುತ್ತಿದ್ದಾರೆ, ಮತ್ತು ದಂಡ ಕೂಡ ವಿಧಿಸಲಾಗುತ್ತಿದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಸುಮಾರು 4.6 ಲಕ್ಷ ನಕಲಿ ಕಾರ್ಡ್ ಇರುವವರಿಗೆ ದಂಡ ವಿಧಿಸಿದೆ. ಮತ್ತು ಸಾರಿಗೆ ಇಲಾಖೆಯ ಸಹಾಯದಿಂದ 12,583 ಜನರ BPL ಕಾರ್ಡ್ ಇದ್ದವರ ಐಷಾರಾಮಿ ಕಾರ್ ಮತ್ತು white board ಕಾರ್ ಗಳನ್ನು ಹೊಂದಿದ್ದಾರೆ ಎಂದು ಪತ್ತೆ ಹಚ್ಚಿದೆ.
ಇದರ ಜೊತೆಗೆ ಒಟ್ಟಿನಲ್ಲಿ white board ಸ್ವಂತ ಕಾರ್ ಹೊಂದಿರುವವರ ರೇಷನ್ ಕಾರ್ಡ್ ಸ್ಥಗಿತ ಗೊಳಿಸಬೇಕೆಂದು ಮತ್ತು ಇಂತಹ ದುರ್ಬಳಕೆಯನ್ನು ಬಲಿಸಿಕೊಂಡು ಅಕ್ಕಿ ಪಡೆಯುತ್ತಿರವರನ್ನು ಹುಡುಕಿ ಉಚಿತ ಅಕ್ಕಿ ಪಡೆದುಕೊಳ್ಳುತಿರುವದರಿಂದ ಅವರನ್ನು ತಗೆಯಲು ನಿರ್ಧಾರ ಮಾಡಿದೆ. ಇದಕ್ಕಾಗಿ ಮನೆ ಮನೆಗೆ ಹೋಗಿ ಸಮೀಕ್ಷೆ ನಡೆಸಿ ಇದರ ಬಗ್ಗೆ ಕ್ರಮ ಕೈಗೊಳ್ಳುವುದರ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ K.H.Muniyappa (ಕೆ. ಎಚ್ ಮುನಿಯಪ್ಪ) ಅವರು ಹೇಳಿದ್ದಾರೆ.
ಹೀಗಾಗಿ ನೀವೇನಾದರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದು, ನಿಮ್ಮ ರೇಷನ್ ಕಾರ್ಡ್ ರದ್ದಾಗಿದ್ದರೆ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರದ ಹಣವು ನಿಮಗೆ ಬರುವುದಿಲ್ಲ.
ಅನರ್ಹರ ಪಟ್ಟಿ ಚೆಕ್ ಮಾಡುವುದು ಹೇಗೆ? Gruhalakshmi Cancelled List
ಹಂತ 1: ಮೊದಲಿಗೆ ಆಹಾರ ಇಲಾಖೆಯ ಅಧಿಕೃತ ಜಾಲತಾಣಕ್ಕೆ ತೆರಳಬೇಕು ಅದಕ್ಕಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ :
https://ahara.kar.nic.in/Home/EServices
ಹಂತ 2: ನಂತರ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ.
ನಂತರ e-Ration Card ಎಂಬ ಆಯ್ಕೆಯಲ್ಲಿ Show cancelled/Suspended ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ
ಹಂತ 3: ನಂತರ ನಿಮಗೆ ಲಿಸ್ಟ್ ಓಪನ್ ಆಗುತ್ತದೆ ಅದರಲ್ಲಿ ನಿಮ್ಮ ಜಿಲ್ಲೆ, ತಿಂಗಳು ಹಾಗೂ ತಾಲೂಕನ್ನು ಆಯ್ಕೆ ಮಾಡಿಕೊಳ್ಳಿ
ಹಂತ 4: ನಂತರ ನೀವು ಅನರ್ಹರ ಪಟ್ಟಿಯನ್ನು ನೋಡಬಹುದು, ಅದರಲ್ಲಿ ರದ್ದು ಆಗಿರುವುದಕ್ಕೆ ಕೆಲವೊಮ್ಮೆ ಕಾರಣವನ್ನು ಕೂಡ ನೀಡಲಾಗಿರುತ್ತದೆ.
ಸೂಚನೆ – ಮನೆಯ ಯಜಮಾನಿಯರಿಗೆ 2000 ಕೊಡುತ್ತಿದ್ದರಿಂದ, ರೇಷನ್ ಕಾರ್ಡ್ ನಲ್ಲಿ ಇರುವ ಮನೆ ಯಜಮಾನಿಯರನ್ನೇ ಗೃಹಲಕ್ಷ್ಮಿ ಎಂದು ಪರಿಗಣಿಸಲಾಗಿದೆ. ಹಾಗಾಗಿ ಈ ಕೆಳಗಿನ ಕಾರಣಗಳನ್ನು ಕೊಟ್ಟು ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅವರಿಗೂ 2000 ಹಣ ಬರುವುದಿಲ್ಲ ಎಂದು ಹೇಳಬಹುದು
ಇದೇ ಆಗಸ್ಟ್ 27 ರಂದು ಈ ಕೆಳಗಿನ ಪಟ್ಟಿಯಲ್ಲಿಇರುವ ಮನೆ ಯಜಮಾನಿಯರಿಗೆ ಸಿಗಲಿದೆ ರೂ.2000ಗಳು ನಿಮ್ಮ ಹೆಸರನ್ನು ಈಗಲೇ ಚೆಕ್ ಮಾಡಿಕೊಳ್ಳಿ
ಗೃಹಲಕ್ಷ್ಮಿಯ ಮನೆ ಯಜಮಾನಿಯರ ಪಟ್ಟಿ ಬಿಡುಗಡೆ.
ಗೃಹಲಕ್ಷ್ಮಿ ಹಣ ಪಡೆದುಕೊಳ್ಳಲು ಅಗಸ್ಟ ತಿಂಗಳ ಮನೆ ಯಜಮಾನಿಯರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ನಿಮ್ಮ ಹೆಸರಿಗೆ ಚೆಕ್ ಮಾಡಿಕೊಳ್ಳಿ. ಕೆಳಗೆ ಕೊಟ್ಟಿರುವ ನೇರವಾದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://ahara.kar.nic.in/Home/EServices
ನಿಮ್ಮ ಮೊಬೈಲ್ ಫೋನ ಮುಖಪುಟದ ಎಡಭಾಗದಲ್ಲಿ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ ನಂತರ ಕೆಳಗಡೆ e-Ration card ಸೆಲೆಕ್ಟ್ ಮಾಡಿಕೊಂಡು ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ಇಲ್ಲಿ ತೋರಿಸುತ್ತಿರುವ ಬಾಕ್ಸ್ ನಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತಿ ಮತ್ತು ಗ್ರಾಮವನ್ನು ಸೆಲೆಕ್ಟ್ ಮಾಡಿ Go ಮೇಲೆ ಕ್ಲಿಕ್ ಮಾಡಿ. ಇಲ್ಲಿ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರ ಯಜಮಾನಿಯರ ಕಂಪ್ಲೀಟ್ ಡೀಟೇಲ್ಸ್ ಕಾಣಿಸುತ್ತದೆ
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ