ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಅನ್ನಭಾಗ್ಯ ಯೋಜನೆಯ(Annabhagya scheme) ಅಡಿ ಹಣ ಸಿಗದಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಇದು ಕರ್ನಾಟಕ ಜನತೆಗೆ ಒಂದು ಬಿಗ್ ಶಾಕಿಂಗ್ ನ್ಯೂಸ್ ಅಂತಾನೇ ಹೇಳಬಹುದು. ಅದೇನೆಂದರೆ ಬಿಪಿಎಲ್ ಕಾರ್ಡ್(BPL card) ಹೊಂದಿದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಹಣದ ಬದಲಾಗಿ ಮುಂದಿನ ತಿಂಗಳಿನಿಂದ ಅಕ್ಕಿಯನ್ನು ನೀಡಲಾಗುತ್ತದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಅನ್ನಭಾಗ್ಯ ಯೋಜನೆಯ ಹಣ ಇನ್ನು ಮುಂದೆ ಬರುವುದಿಲ್ಲ :
ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯು ಈಗಾಗಲೇ ಜಾರಿಗೆ ಬಂದಿದ್ದು, ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್‌ದಾರರಿಗೆ ಅಕ್ಕಿ ನೀಡಲು, ಅಕ್ಕಿಯ ಅಭಾವದಿಂದಾಗಿ ಪ್ರತಿ ಫಲಾನುಭವಿಗಳಿಗೆ 5 ಕೆ.ಜಿ. ಅಕ್ಕಿ ಹಾಗೂ ಉಳಿದ 5 ಕೆ.ಜಿ. ಯ ಅಕ್ಕಿಯ ಬದಲಾಗಿ 170 ರೂಗಳನ್ನು ಖಾತೆಗೆ ಪ್ರತಿ ತಿಂಗಳು ಹಾಕುತ್ತಿದ್ದರು. ಆದರೆ ಇನ್ನು ಮುಂದೆ ಹೇಗೆ ಮಾಡುವುದಿಲ್ಲ. ಈಗ ಅಕ್ಕಿಯ ಕೊರತೆ ಇಲ್ಲದಿರುವುದರ ಕಾರಣ ಅಕ್ಟೋಬರ್ ತಿಂಗಳಿನಿಂದ ಎಲ್ಲರಿಗೂ ತಲಾ 10 ಕೆ.ಜಿ. ಅಕ್ಕಿಯನ್ನು ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ಅಕ್ಕಿಯ ಸರಬರಾಜು ಮಾಡುವುದಕ್ಕೆ ಟೆಂಡರ್ ಪ್ರಕ್ರಿಯೆ ಈಗಾಗಲೇ ನಡೆಯುತ್ತಿದೆ, ಮುಂದಿನ ದಿನಗಳಲ್ಲಿ ಅಕ್ಕಿಯ ಕೊರತೆ ಆಗುವುದಿಲ್ಲ. ಆದ್ದರಿಂದ ಅಕ್ಟೋಬರ್ ತಿಂಗಳಿನಿಂದ ಅನ್ನಭಾಗ್ಯ ಯೋಜನೆಯ ಪಡಿತರ ಚೀಟಿಯ ಫಲಾನುಭವಿಗಳಿಗೆ 10 ಕೆಜಿ ಅಕ್ಕಿಯನ್ನು ನೀಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಮುನಿಯಪ್ಪ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ, ಆರಂಭದಲ್ಲಿ ಬರಪೀಡಿತ ಎಂದು ಘೋಷಣೆ ಮಾಡಿರುವ ತಾಲೂಕುಗಳಿಗೆ ಹಣದ ಬದಲಾಗಿ ಈ 10 ಕೆಜಿಗಳ ಅಕ್ಕಿಯನ್ನು ಕೊಡಲು ಪ್ರಾರಂಭಿಸುತ್ತೇವೆ ಎಂದು ತಿಳಿಸಿದ್ದಾರೆ.
ಹಾಗಾಗಿ ಮುಂದಿನ ತಿಂಗಳಿನಿಂದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ದೊರೆಯಲಿದೆ. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: Annabhagya – ಅಗಸ್ಟ್ ತಿಂಗಳ 1190 ರೂಪಾಯಿ ಬ್ಯಾಂಕ್ ಖಾತೆಗೆ ಜಮಾ..! ಸ್ಟೇಟಸ್ ಹೀಗೆ ಬಂದ್ರೆ ನಿಮ್ಮ ಹಣ ಬರಲ್ಲ..! ಇಲ್ಲಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್
ಅನ್ನಭಾಗ್ಯದ ಹಣ ಜಮಾ ಆಗಿದೆಯೇ ಎಂಬುದನ್ನು ನೋಡುವ ವಿಧಾನ :
ಹಂತ 1: ಮೊದಲನೆಯದಾಗಿ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಯ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ
ಹಂತ 2: ನಂತರ ನಿಮ್ಮ ಜಿಲ್ಲೆಯ ಮೇಲಿನ ಲಿಂಕನ್ನು ಕ್ಲಿಕ್ ಮಾಡಿ.

ಹಂತ 3 : ನಂತರ ಕೆಳಗಿನ ಭಾಗದಲ್ಲಿರುವ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ. 
ಹಂತ 4: ಮುಂದುವರೆದುನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ. ನಂತರ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವವರ ಸದಸ್ಯರ ಸಂಖ್ಯೆ, ಮುಖ್ಯಸ್ಥರ ಹೆಸರು, ಸದಸ್ಯರ ಯುಐಡಿ, ಎಷ್ಟು ಹಣ ಜಮಾ ಆಗುತ್ತದೆ ಅಥವಾ ಆಗಿದೆ ಎಂಬುದರ ಮಾಹಿತಿಯನ್ನು ನೀವು ನೋಡಬಹುದು.

ಹೀಗೆ ನೀವು ಅನ್ನಭಾಗ್ಯ ಯೋಜನೆಯಡಿಯಲ್ಲಿನ ಹಣವು ನಿಮಗೆ ಜಮಾ ಆಗಿದೆಯೇ ಅಥವಾ ಅದರ ಸ್ಥಿತಿ ಹೇಗಿದೆ ಎಂಬುವುದನ್ನು ಚೆಕ್ ಮಾಡಬಹುದು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group







