ಕಡಿಮೆ ಆದಾಯದ ಕುಟುಂಬಗಳ ಪಡಿತರ ಚೀಟಿ ರದ್ದತಿ ಗೊಂದಲದ ಮಧ್ಯೆ ಕರ್ನಾಟಕ ಸರಕಾರ ಸ್ಪಷ್ಟನೆ ನೀಡಿದ್ದು, ಅನರ್ಹ ಬಿಪಿಎಲ್ ಕಾರ್ಡ್‌ಗಳನ್(ineligible BPL card)ನು ಮಾತ್ರ ರದ್ದುಗೊಳಿಸಲಾಗುವುದು ಎಂದು ಹೇಳಿದೆ. ಹಾಗೆಯೇ ಅರ್ಹ ಫಲಾನುಭವಿಗಳ ರೇಷನ್ ಕಾರ್ಡ್ ರದ್ದಾಗಿದ್ದಲ್ಲಿ, ವಿಷಯದ ಕುರಿತಾಗಿ ತಹಶೀಲ್ದಾರರ ಗಮನಕ್ಕೆ ತಂದರೆ ಒಂದು ವಾರದೊಳಗೆ ಸಮಸ್ಯೆಯನ್ನು ಬಗೆಹರಿಸಿ ತಮ್ಮ ರೇಷನ್ ಕಾರ್ಡ್ ಗಳನ್ನು ಹಿಂ ಪಡೆದುಕೊಳ್ಳಬಹುದು ಎಂದು ಮಾಹಿತಿಯನ್ನು ಸರ್ಕಾರ ಒದಗಿಸಿದೆ.
ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಅನರ್ಹ ಫಲಾನುಭವಿಗಳಾದ ಸರ್ಕಾರಿ ನೌಕರರು ಹಾಗೂ ಆದಾಯ ತೆರಿಗೆದಾರರ ಕಾರ್ಡ್ ಗಳು ರದ್ದಾಗಿವೆ, ಜೊತೆಗೆ ಕೆಲ ಅರ್ಹ ಫಲಾನುಭವಿಗಳ ಬಿಪಿಎಲ್ ರೇಷನ್ ಕಾರ್ಡ್ ಕೂಡ ರದ್ದಾಗಿರುವುದು ಸಮಸ್ಯೆಯನ್ನು ಉಂಟು ಮಾಡಿದೆ. ಬಡವರಿಗೆ ಮೀಸಲೆಂದಿರುವ ಈ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಿರುವುದು ವಂಚನೆಯಾದಂತೆ ಆಗಿದೆ ಆದ್ದರಿಂದ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆದಾರರನ್ನು ಹೊರತುಪಡಿಸಿ ಉಳಿದ ಅರ್ಹ ಪಲಾನುಭವಿಗಳಿಗೆ ಬಿಪಿಎಲ್ ಕಾರ್ಡ್‌ಗಳನ್ನು ಮರಳಿ ನೀಡಲಾಗುವುದು, ಎಂದು ಕರ್ನಾಟಕದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಒಂದು ವೇಳೆ ಬಿಪಿಎಲ್ ಕಾರ್ಡ್ ವಿಚಾರದಲ್ಲಿ ಬಡವರಿಗೆ ತೊಂದರೆಯಾದಲ್ಲಿ ತಹಶೀಲ್ದಾರ್ ಗಮನಕ್ಕೆ ತಂದರೆ ಒಂದು ವಾರದೊಳಗಾಗಿ ಸಮಸ್ಯೆ ಬಗೆಹರಿಸಲಾಗುವುದು.
ರಾಜ್ಯ ಸರ್ಕಾರದ BPL ಕಾರ್ಡ್(BPL ration card) ಪರಿಷ್ಕರಣೆ ಕಾರ್ಯಕ್ರಮವು ಅನರ್ಹ ಫಲಾನುಭವಿಗಳನ್ನು ಗುರುತಿಸಲು ಪ್ರಸ್ತುತ ಕಾರ್ಡುದಾರರ ಅರ್ಹತೆಯ ಸ್ಥಿತಿಯನ್ನು ನಿರ್ಣಯಿಸುವ ಗುರಿಯನ್ನು ಹೊಂದಿದೆ. ಕನಿಷ್ಠ ಶೇಕಡ ಒಂದರಿಂದ ಎರಡರಷ್ಟು ಬಿಪಿಎಲ್ ಕಾರ್ಡ್ ಗಳನ್ನು ಎಪಿಎಲ್ ಕಾರ್ಡ್ ಗಳೆಂದು ಮರು ವಿಂಗಡಣೆ ಮಾಡಲಾಗಿದೆ ಎಂದು ಸಚಿವ ಮುನಿಯಪ್ಪ ಸ್ಪಷ್ಟಪಡಿಸಿದರು. ಇದರ ಜೊತೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮಾತನಾಡಿ ಬಡ ಕುಟುಂಬಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.