ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಪೋಸ್ಟ್ ಆಫೀಸ್ ಜಿಡಿಎಸ್(post office GDS) ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ವಿದ್ಯಾರ್ಹತೆ ಏನಿರಬೇಕು?, ಎಷ್ಟು ಸಂಬಳ ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲುಇಲ್ಲಿ ಕ್ಲಿಕ್ ಮಾಡಿ
ಇಂಡಿಯಾ ಪೋಸ್ಟ್ ಜಿಡಿಎಸ್ ನೇಮಕಾತಿ 2023:
ಗ್ರಾಮೀಣ ಡಾಕ್ ಸೇವಕರು (ಜಿಡಿಎಸ್) [ಬ್ರಾಂಚ್ ಪೋಸ್ಟ್‌ಮಾಸ್ಟರ್ (ಬಿಪಿಎಂ)/ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್‌ಮಾಸ್ಟರ್ (ಎಬಿಪಿಎಂ)/ಡಾಕ್ ಸೇವಕರು] ಆಗಿ ತೊಡಗಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಆನ್‌ಲೈನ್‌ನಲ್ಲಿ https://
ಹುದ್ದೆಯ ವಿವರ :
ಹುದ್ದೆಯ ಹೆಸರು : ಗ್ರಾಮೀಣ ಡಾಕ್ ಸೇವಕ್ (BPM/ABPM)
ಒಟ್ಟು ಹುದ್ದೆಗಳ ಸಂಖ್ಯೆ : 30,041
ಕರ್ನಾಟಕದಲ್ಲಿ ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ : 1714
ಉದ್ಯೋಗ ಸ್ಥಳ : ಅಖಿಲ ಭಾರತ
ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ?:
ಬಾಗಲಕೋಟೆ- 29 ಹುದ್ದೆಗಳು
ಬಳ್ಳಾರಿ- 43 ಹುದ್ದೆಗಳು
ಬೆಳಗಾವಿ- 42 ಹುದ್ದೆಗಳು
ಬೆಂಗಳೂರು ಪೂರ್ವ- 11 ಹುದ್ದೆಗಳು
ಬೆಂಗಳೂರು ದಕ್ಷಿಣ- 4 ಹುದ್ದೆಗಳು
ಬೆಂಗಳೂರು ಪಶ್ಚಿಮ- 6 ಹುದ್ದೆಗಳು
ಬೀದರ್- 49 ಹುದ್ದೆಗಳು
ಚನ್ನಪಟ್ಟಣ- 66 ಹುದ್ದೆಗಳು
ಚಿಕ್ಕಮಗಳೂರು- 63 ಹುದ್ದೆಗಳು
ಚಿಕ್ಕೋಡಿ- 45 ಹುದ್ದೆಗಳು
ಚಿತ್ರದುರ್ಗ- 51 ಹುದ್ದೆಗಳು
ದಾವಣಗೆರೆ ಕಚೇರಿ- 47 ಹುದ್ದೆಗಳು
ಧಾರವಾಡ- 36 ಹುದ್ದೆಗಳು
ಗದಗ- 63 ಹುದ್ದೆಗಳು
ಗೋಕಾಕ್- 13 ಹುದ್ದೆಗಳು
ಹಾಸನ- 84 ಹುದ್ದೆಗಳು
ಹಾವೇರಿ- 33 ಹುದ್ದೆಗಳು
ಕಲಬುರಗಿ- 44 ಹುದ್ದೆಗಳು
ಕಾರವಾರ- 53 ಹುದ್ದೆಗಳು
ಕೊಡಗು- 44 ಹುದ್ದೆಗಳು
ಕೋಲಾರ- 75 ಹುದ್ದೆಗಳು
ಮಂಡ್ಯ- 78 ಹುದ್ದೆಗಳು
ಮಂಗಳೂರು- 52 ಹುದ್ದೆಗಳು
ಮೈಸೂರು- 43 ಹುದ್ದೆಗಳು
ನಂಜನಗೂಡು- 41 ಹುದ್ದೆಗಳು
ಪುತ್ತೂರು- 89 ಹುದ್ದೆಗಳು
ರಾಯಚೂರು- 49
RMS HB- 44 ಹುದ್ದೆಗಳು
RMS Q- 6 ಹುದ್ದೆಗಳು
ಶಿವಮೊಗ್ಗ- 74 ಹುದ್ದೆಗಳು
ಸಿರ್ಸಿ- 48 ಹುದ್ದೆಗಳು
ತುಮಕೂರು- 81 ಹುದ್ದೆಗಳು
ಉಡುಪಿ- 110 ಹುದ್ದೆಗಳು
ವಿಜಯಪುರ- 65 ಹುದ್ದೆಗಳು
ಯಾದಗಿರಿ- 33 ಹುದ್ದೆಗಳು
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಅಂಚೆ ಇಲಾಖೆ ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು.
ವಯೋಮಿತಿ :
ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕನಿಷ್ಠ 18 ವರ್ಷಗಳಿಂದ ಗರಿಷ್ಠ 40 ವರ್ಷಗಳನ್ನು ಮೀರಿರಬಾರದು.
ವಯೋಮಿತಿ ಸರಿಲಿಕೆ :
OBC ಅಭ್ಯರ್ಥಿಗಳಿಗೆ: 3 ವರ್ಷ
SC/ST ಅಭ್ಯರ್ಥಿಗಳಿಗೆ: 5 ವರ್ಷ
PWD ಅಭ್ಯರ್ಥಿಗಳಿಗೆ:10 ವರ್ಷ
ಸಂಬಳದ ಪ್ಯಾಕೇಜ್ ಎಷ್ಟು?:
ಗ್ರಾಮೀಣ ಡಾಕ್ ಸೇವಕ್ (ಬ್ರಾಂಚ್ ಪೋಸ್ಟ್ ಮಾಸ್ಟರ್) : ರೂ.12000-29380/-
ಗ್ರಾಮೀಣ ಡಾಕ್ ಸೇವಕ್ (ಸಹಾಯಕ ಶಾಖೆ ಪೋಸ್ಟ್ ಮಾಸ್ಟರ್) : ರೂ.10000-24470/-
ಆಯ್ಕೆ ಪ್ರಕ್ರಿಯೆ :
ಮೆರಿಟ್ ಪಟ್ಟಿ
ಅರ್ಜಿಯನ್ನು ಸಲ್ಲಿಸುವ ವಿಧಾನ:
ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ, ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು
ಹಂತ 4: ಅರ್ಜಿ ಶುಲ್ಕವನ್ನು ಕಟ್ಟಬೇಕಾಗಿದ್ದಲ್ಲಿ ಪಾವತಿಸಿ
ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :
ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ 23.08.2023 ಆಗಿದೆ.
ನೀವೇನಾದರೂ ಸರ್ಕಾರಿ ನೌಕರಿಯನ್ನು ಹುಡುಕುತ್ತಿದ್ದರೆ ಇದು ಒಂದು ಒಳ್ಳೆಯ ಅವಕಾಶ ಎನ್ನಬಹುದಾಗಿದೆ. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ