ಬೆಂಗಳೂರು: ಕನ್ನಡದ ಬಿಗ್ ಬಾಸ್ ಸೀಸನ್ 12 ಯಾವಾಗ ಆರಂಭವಾಗಲಿದೆ ಎಂಬ ಕುತೂಹಲಕ್ಕೆ ನಟ ಕಿಚ್ಚ ಸುದೀಪ್ ತೆರೆ ಎಳೆದಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಮಾಡಿರುವ ಅವರು, ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಸೆಪ್ಟೆಂಬರ್ 28, 2025 ರಿಂದ ಪ್ರಾರಂಭವಾಗಲಿದೆ ಎಂದು ತಿಳಿಸಿದ್ದಾರೆ..ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಮೊದಲ ಪ್ರೊಮೋ ಬಿಡುಗಡೆ
ಈಗಾಗಲೇ ಕನ್ನಡದ ಬಿಗ್ ಬಾಸ್ ಸೀಸನ್ 12ರ ಮೊದಲ ಪ್ರೊಮೋ ಬಿಡುಗಡೆಯಾಗಿದ್ದು, ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿತ್ತು. ಈ ಕಾರ್ಯಕ್ರಮ ಯಾವ ದಿನಾಂಕದಿಂದ ಆರಂಭವಾಗಲಿದೆ ಎಂಬ ಪ್ರಶ್ನೆಗೆ ಉತ್ತರವಾಗಿ, ಸುದೀಪ್ ಸೆಪ್ಟೆಂಬರ್ 28 ಎಂದು ದಿನಾಂಕವನ್ನು ಘೋಷಿಸಿದ್ದಾರೆ.
ಸಂದೇಶ್ ನಾಗರಾಜ್ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಘೋಷಣೆ
ಮೈಸೂರಿನಲ್ಲಿ ಇಂದು ನಿರ್ಮಾಪಕ, ಉದ್ಯಮಿ ಮತ್ತು ರಾಜಕಾರಣಿ ಸಂದೇಶ್ ನಾಗರಾಜ್ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಭಾಗವಹಿಸಿದ್ದರು. ಈ ವೇಳೆ ಅವರು ಕನ್ನಡದ ಬಿಗ್ ಬಾಸ್ ಸೀಸನ್ 12ರ ಆರಂಭದ ದಿನಾಂಕವನ್ನು ಬಹಿರಂಗಪಡಿಸಿದರು. ಸೆಪ್ಟೆಂಬರ್ 28, 2025 ರಿಂದ ಕಿರುತೆರೆಯ ಈ ಜನಪ್ರಿಯ ಶೋ ಆರಂಭವಾಗಲಿದೆ ಎಂದು ತಿಳಿಸಿದ ಅವರು, ಈ ಬಾರಿಯೂ ತಾವೇ ಕಾರ್ಯಕ್ರಮದ ನಿರೂಪಣೆ ಮಾಡಲಿದ್ದಾರೆ ಎಂದು ದೃಢಪಡಿಸಿದ್ದಾರೆ.
ಕಾರ್ಯಕ್ರಮದ ಕುತೂಹಲ
ಕನ್ನಡದ ಬಿಗ್ ಬಾಸ್ ಸೀಸನ್ 12ರ ಈ ಆವೃತ್ತಿಯು ಹಿಂದಿನ ಋತುಗಳಂತೆಯೇ ದೊಡ್ಡ ಮಟ್ಟದಲ್ಲಿ ಪ್ರೇಕ್ಷಕರ ಗಮನ ಸೆಳೆಯುವ ನಿರೀಕ್ಷೆಯಿದೆ. ಕಿಚ್ಚ ಸುದೀಪ್ ಅವರ ಆಕರ್ಷಕ ನಿರೂಪಣೆ, ಸ್ಪರ್ಧಿಗಳ ನಡುವಿನ ಒಡ್ಡಾಟ, ಮತ್ತು ಕಾರ್ಯಕ್ರಮದ ರೋಚಕ ಟ್ವಿಸ್ಟ್‌ಗಳು ಈ ಬಾರಿಯೂ ಪ್ರೇಕ್ಷಕರನ್ನು ರಂಜಿಸಲಿವೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.