WhatsApp Image 2025 05 08 at 7.53.08 AM

ದಾವಣಗೆರೆ: ಮನೆ ನಿರ್ಮಾಣ ಸಹಾಯಧನಕ್ಕೆ ಅರ್ಜಿ ಆಹ್ವಾನ; ಜೂನ್ 30 ಕೊನೆಯ ದಿನ

WhatsApp Group Telegram Group

ದಾವಣಗೆರೆ: ಸರ್ಕಾರದ ಮತ್ಸ್ಯಾಶ್ರಯ ಯೋಜನೆಯಡಿ ವಸತಿ ರಹಿತ ಮೀನುಗಾರರಿಗೆ ಮನೆ ನಿರ್ಮಾಣಕ್ಕಾಗಿ ಆರ್ಥಿಕ ಸಹಾಯ ನೀಡಲಾಗುವುದು. ಈ ಸೌಲಭ್ಯ ಪಡೆಯಲು ಮೀನುಗಾರಿಕೆ ಇಲಾಖೆಯು ಅರ್ಜಿಗಳನ್ನು ಆಹ್ವಾನಿಸಿದೆ.

ಜಿಲ್ಲೆಯಲ್ಲಿ 175 ಮನೆಗಳ ಹಂಚಿಕೆ
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 25 ಮನೆಗಳಂತೆ ಜಿಲ್ಲೆಯ ಒಟ್ಟು 175 ಮೀನುಗಾರರಿಗೆ ಈ ಯೋಜನೆಯಡಿ ಮನೆಗಳನ್ನು ನೀಡಲಾಗುವುದು. ಅರ್ಜಿ ಪತ್ರಗಳನ್ನು ದಾವಣಗೆರೆ, ಹರಿಹರ, ಹೊನ್ನಾಳಿ, ಚನ್ನಗಿರಿ ಮತ್ತು ಜಗಳೂರು ತಾಲ್ಲೂಕುಗಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳಿಂದ ಕಚೇರಿ ಸಮಯದಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಸುವ ಅಂತಿಮ ದಿನಾಂಕ ಜೂನ್ 30 ಎಂದು ಮೀನುಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ಅರ್ಜಿ ಸಲ್ಲಿಕೆಗೆ ಅಗತ್ಯ ದಾಖಲೆಗಳನ್ನು ಈಗಲೇ ತಯಾರಿಸಿ, ಕೊನೆಯ ದಿನಾಂಕಕ್ಕೂ ಮುಂಚೆಯೇ ಅರ್ಜಿ ಸಲ್ಲಿಸಿ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories