CCTV Installation Training: ಉಚಿತ ಸಿಸಿಟಿವಿ ಕ್ಯಾಮೆರಾ ಇನ್ಸ್ಟಾಲೇಷನ್ ತರಬೇತಿಗೆ ಅರ್ಜಿ ಆಹ್ವಾನ!

cctv training

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಕುಮಟಾ ಕೇಂದ್ರದ ವತಿಯಿಂದ ರಾಜ್ಯದಲ್ಲಿ ಸ್ವ- ಉದ್ಯೋಗ ಮಾಡಲು ಆಸಕ್ತಿ ಇರುವ ಯುವ ಉತ್ಸಾಹಿಗಳಿಗೆ ಉಚಿತ ಸಿಸಿಟಿವಿ ಕ್ಯಾಮೆರಾ ಇನ್ಸ್ಟಾಲೇಶನ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 

ರಾಜ್ಯದ ಎಲ್ಲಾ ಜಿಲ್ಲೆಯ ಯುವಕ ಯುವತಿಯರಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು. ಸ್ವಯಂ ಉದ್ಯೋಗ ಮಾಡಲು ಇಚ್ಚಿಸುವ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಜೀವನ ರೂಪಿಸಿಕೊಳ್ಳಬಹುದು. ಪ್ರತಿ ಜಿಲ್ಲೆಯಲ್ಲಿರುವ ಗ್ರಾಮೀಣ ಸ್ವ – ಉದ್ಯೋಗ ತರಬೇತಿ ಸಂಸ್ಥೆಯಿಂದ ವಿವಿಧ ರೀತಿಯ ತರಬೇತಿಗಳನ್ನು ಪಡೆದು ಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ.

ತರಬೇತಿ ಬಗ್ಗೆ ಸಂಕ್ಷಿಪ್ತ ಮಾಹಿತಿ

ಎಲ್ಲಾ ರೀತಿಯ ಅಂಗಡಿಗಳು, ಗೋಧಾಮು, ಮನೆ, ಕಚೇರಿಗಳಿಗೆ, ಸಿ ಸಿ ಕ್ಯಾಮೆರಾ ಇನ್ಸ್ಟಾಲ್ ಮಾಡುವ ವಿಧಾನ ಮತ್ತು ಸಿಸಿಟಿವಿ ಕ್ಯಾಮೆರಾ ಸರ್ವಿಸ್ ಮಾಡುವ ವಿಧಾನ ಹೇಳಿಕೊಡಲಾಗುತ್ತದೆ. ಇದರ ಜೊತೆಗೆ ಸೆಕ್ಯೂರಿಟಿ ಅಲಾರಾಂ ಮತ್ತು ಸ್ಮೋಕ್ ಡಿಟೆಕ್ಟರ್ ಅಳವಡಿಸುವ ಕುರಿತು ತರಬೇತಿಯನ್ನು ಸಂಪೂರ್ಣವಾಗಿ ಕೊಡಲಾಗುತ್ತದೆ

ಸಂಪೂರ್ಣ ಉಚಿತ ತರಬೇತಿ

ತರಬೇತಿಯಲ್ಲಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆಯನ್ನು ಸಂಸ್ಥೆ ಕಡೆಯಿಂದ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ

ಅರ್ಜಿ ಸಲ್ಲಿಸಲು ಅರ್ಹತೆ ಏನು?

ಗ್ರಾಮೀಣ ಭಾಗದ ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳ ವಯಸ್ಸು 18ರಿಂದ 45 ವರ್ಷದ ನಡುವೆ ಇರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್ ಓದು ಬರಹ ತಿಳಿದಿರಬೇಕು. ತರಬೇತಿ ಪಡೆದ ನಂತರ ಸ್ವಯಂ ಉದ್ಯೋಗ ಪ್ರಾರಂಭಿಸಲು ಆಸಕ್ತಿ ಹೊಂದಿರಬೇಕು. ತರಬೇತಿ ಪಡೆಯುವಲ್ಲಿ ಉತ್ಸಾಹಕತೆ ಇರಬೇಕು.

ತರಬೇತಿ ಅವಧಿ ಮತ್ತು ದಿನಾಂಕ :

ಒಟ್ಟು 13 ದಿನದ ಉಚಿತ ತರಬೇತಿ ಇರುತ್ತದೆ. ಇದೇ ತಿಂಗಳು ಮೇ 27, 2024 ರಿಂದ ಪ್ರಾರಂಭವಾಗಿ ಬರುವ ಜೂನ್ 8ನೇ ತಾರೀಖಿನವರೆಗೆ ತರಬೇತಿ ನಡೆಯಲಿದೆ.

ತರಬೇತಿ ಕೇಂದ್ರದ ವಿಳಾಸ

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಇಂಡಿಸ್ಟ್ರಿಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ, ಉತ್ತರ ಕನ್ನಡ ಜಿಲ್ಲೆ.

ಹೆಚ್ಚಿನ ಮಾಹಿತಿ ಪಡೆಯಲು ಈ 9449860007, 9538281989, 9916783825, 8880444612 ಮೊಬೈಲ್ ಸಂಖ್ಯೆಗೆ ಅಸಕ್ತ ಅಭ್ಯರ್ಥಿಗಳು ಸಂಪರ್ಕಿಸಬಹುದು.

ಅಗತ್ಯ ದಾಖಲಾತಿಗಳು
  • ಆಧಾರ್ ಕಾರ್ಡ
  • ರೇಶನ್ ಕಾರ್ಡ
  • ಪಾನ್ ಕಾರ್ಡ 
  • ಬ್ಯಾಂಕ್ ಪಾಸ್ ಬುಕ್ ಪ್ರತಿ
  • ಅಭ್ಯರ್ಥಿಯ ನಾಲ್ಕು ಪಾಸ್ ಪೋರ್ಟ್ ಸೈಜ್ ಫೋಟೋ
ಅರ್ಜಿ ಸಲ್ಲಿಸುವ ನೇರವಾದ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ

ಸ್ವಯಂ ಉದ್ಯೋಗ ಪ್ರಾರಂಭಿಸಲು ಮತ್ತು ತರಬೇತಿಯಲ್ಲಿ ಆಸಕ್ತಿ ಇರುವ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ತಪ್ಪದೇ ಈ ಮಾಹಿತಿಯನ್ನು ಶೇರ್ ಮಾಡಿ ಎಲ್ಲರಿಗೂ ಅನುಕೂಲವಾಗುತ್ತದೆ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!