WhatsApp Image 2025 10 12 at 5.15.58 PM

BREAKING NEWS: ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ‘RSS ಚಟುವಟಿಕೆ’ ನಿಷೇಧಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ.!

WhatsApp Group Telegram Group

ಕರ್ನಾಟಕದ ಸರ್ಕಾರಿ ಜಾಗಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಸಂಘಟನೆಯ ಚಟುವಟಿಕೆಗಳನ್ನು ನಿಷೇಧಿಸುವ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ಪತ್ರವನ್ನು ಗಮನಿಸಿದ ಮುಖ್ಯಮಂತ್ರಿಗಳು, ವಿಷಯವನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ..

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ರಾಜ್ಯದಲ್ಲಿ ಆರ್‌ಎಸ್‌ಎಸ್ ಸಂಘಟನೆಯ ಚಟುವಟಿಕೆಗಳನ್ನು ನಿರ್ಬಂಧಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು.

ಪ್ರಿಯಾಂಕ್ ಖರ್ಗೆ ಅವರು ತಮ್ಮ ಪತ್ರದಲ್ಲಿ, ಜನರಲ್ಲಿ ದ್ವೇಷ ಬಿತ್ತುವ ವಿಭಜಕ ಶಕ್ತಿಗಳನ್ನು ನಿಯಂತ್ರಿಸಲು ಮತ್ತು ದೇಶದ ಜಾತ್ಯತೀತ ಮೌಲ್ಯಗಳನ್ನು ಎತ್ತಿಹಿಡಿಯಲು ಸಂವಿಧಾನವು ಅಧಿಕಾರ ನೀಡಿದೆ ಎಂದು ಹೇಳಿದ್ದಾರೆ.

ಆರ್‌ಎಸ್‌ಎಸ್ ಸಂಘಟನೆಯು ಸರ್ಕಾರಿ ಮತ್ತು ಅನುದಾನಿತ ಶಾಲೆಗಳು, ಹಾಗೆಯೇ ಸಾರ್ವಜನಿಕ ಸರ್ಕಾರಿ ಮೈದಾನಗಳನ್ನು ಬಳಸಿಕೊಂಡು ಶಾಖೆಗಳನ್ನು ನಡೆಸುತ್ತಿದೆ ಮತ್ತು ಘೋಷಣೆಗಳನ್ನು ಕೂಗುತ್ತಿದೆ. ಇದರಿಂದ ಮಕ್ಕಳು ಮತ್ತು ಯುವ ಸಮುದಾಯದ ಮನಸ್ಸಿನಲ್ಲಿ ಭಾರತದ ಏಕತೆ ಮತ್ತು ಸಂವಿಧಾನದ ಆಶಯಗಳ ವಿರುದ್ಧ ನಕಾರಾತ್ಮಕ ವಿಚಾರಗಳನ್ನು ತುಂಬಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಪೊಲೀಸ್ ಇಲಾಖೆಯ ಅನುಮತಿಯಿಲ್ಲದೆ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪ್ರದರ್ಶನಗಳನ್ನು ನಡೆಸುವ ಮೂಲಕ ಮುಗ್ಧ ಮಕ್ಕಳು ಮತ್ತು ಯುವಜನರ ಮೇಲೆ ಕೆಟ್ಟ ಪರಿಣಾಮ ಬೀರಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ನಾಡು, ಮಕ್ಕಳು, ಯುವ ಸಮುದಾಯ ಮತ್ತು ಸಮಾಜದ ಸ್ವಾಸ್ಥ್ಯದ ದೃಷ್ಟಿಯಿಂದ ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳು, ಮೈದಾನಗಳು, ಉದ್ಯಾನವನಗಳು, ಮುಜರಾಯಿ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಸಂಘಟನೆಯು ‘ಶಾಖೆ’, ‘ಸಾಂಘಿಕ್’ ಅಥವಾ ‘ಬೈಠಕ್’ ಹೆಸರಿನಲ್ಲಿ ನಡೆಸುವ ಎಲ್ಲ ರೀತಿಯ ಚಟುವಟಿಕೆಗಳಿಗೂ ನಿಷೇಧ ಹೇರಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಕೋರಿದ್ದಾರೆ.

ಈ ಮನವಿ ಪತ್ರಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಪರಿಶೀಲಿಸಿ ಕೂಡಲೇ ಅಗತ್ಯ ಕ್ರಮ ಜರೂರಾಗಿ ಜರುಗಿಸುವುದು” ಎಂದು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಕರ್ನಾಟಕದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ಸರ್ಕಾರಿ ಜಾಗಗಳಲ್ಲಿ ನಿಷೇಧಿಸುವ ಸಾಧ್ಯತೆ ದಟ್ಟವಾಗಿದೆ.

WhatsApp Image 2025 10 12 at 4.27.07 PM
WhatsApp Image 2025 09 05 at 11.51.16 AM 12

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories